ಮೂಡಿಗೆರೆ ತಾಲೂಕಿನಲ್ಲಿ ಆನೆಗಳ ಹಾವಳಿ : ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ
Team Udayavani, Sep 11, 2022, 2:05 PM IST
ಕೊಟ್ಟಿಗೆಹಾರ : ಮಲೆನಾಡಿನ ಚಾರಣಿಗರ ನೆಚ್ಚಿನ ತಾಣ ಎತ್ತಿನ ಭುಜಕ್ಕೆ ನಿರ್ಬಂಧ ಮಲೆನಾಡಿನ ಅನೇಕ ಗ್ರಾಮಗಳಲ್ಲಿ ನಿರಂತರ ಆನೆ ದಾಳಿ ನಡೆಯುತ್ತಿದೆ.
ಅಲ್ಲಿಯ ಜನರು ಆತಂಕಗೊಂಡಿದ್ದಾರೆ. ಮೂಡಿಗೆರೆ ತಾಲೂಕಿನ ಎತ್ತಿನಭುಜ ವ್ಯಾಪ್ತಿಯಲ್ಲಿ ಆನೆಗಳು ಕಾಣಿಸಿಕೊಂಡಿರುವ ಹಿನ್ನಲೆ ಪ್ರಸಿದ್ಧ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಕರ್ನಾಟಕ ಅರಣ್ಯ ಇಲಾಖೆಯ ಚಿಕ್ಕಮಗಳೂರು ಪ್ರಾದೇಶಿಕ ವಿಭಾಗ ಎತ್ತಿನ ಭುಜ ಚಾರಣ ವನ್ನು ತಾತ್ಕಾಲಿಕ ನಿಷೇಧಿಸಿದೆ.
ಮೂಡಿಗೆರೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಎರಡು ದಿನ ಹಿಂದೆ ಒರ್ವ ಕೂಲಿ ಕಾರ್ಮಿಕನನ್ನು ಕಾಲಿನಿಂದ ತುಳಿದು ಸ್ಥಳದಲ್ಲಿಯೇ ಕೊಂದು ಹಾಕಿರುವ ಘಟನೆ ನಡೆದಿದೆ.
ಈ ಘಟನಾ ಸಂಭಂದ ವ್ಯಾಪಕವಾದ ವಿರೋಧ ಸ್ಥಳೀಯರಿಂದ ವ್ಯಕ್ತವಾಗಿತ್ತು. ಹಾಗೂ ಸ್ಥಳೀಯರು ಮತ್ತು ಸಾರ್ವಜನಿಕರಿಂದ ಮೃತ ದೇಹವನ್ನು ಮೂಡಿಗೆರೆ ಅರಣ್ಯ ಇಲಾಖೆ ಎದುರುಗಡೆ ಇಟ್ಟು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆ ತೀವ್ರಗೊಂಡ ಹಿನ್ನಲೆ, ಆನೆಯನ್ನು ಹಿಡಿಯುವ ಭರವಸೆ ಅರಣ್ಯ ಇಲಾಖೆಯಿಂದ ಸಿಕ್ಕಿದಂತಾಗಿದೆ. ಆನೆಗಳು ಈ ಭಾಗದಲ್ಲಿ ಓಡಾಡುತ್ತಲೇ ಇರುವುದರಿಂದ ಯಾವುದೇ ರೀತಿಯ ದುರ್ಘಟನೆ ಸಂಭವಿಸದೆ ಇರಲಿ ಎಂದು ಮುನ್ನೆಚ್ಚರಿಕ ಕ್ರಮವಾಗಿ ಎತ್ತಿನಭುಜ ಚಾರಣಕ್ಕೆ ನಿಷೇಧ ಹೇರಲಾಗಿದೆ.
ಕಾಡಾನೆಗಳು ಈ ಭಾಗದಲ್ಲಿ ತಿರುಗಾಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಾಗೂ ಸ್ಥಳೀಯರ ಒತ್ತಾಯದ ಮೇರೆಗೆ ಅಂತೆಯೇ ಮೇಲಧಿಕಾರಿಗಳ ನಿರ್ದೇಶನದಂತೆ ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ-
– ಮೋಹನ್ ಕುಮಾರ್, ಮೂಡಿಗೆರೆ ವಲಯ ಅರಣ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.