![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 11, 2022, 4:41 PM IST
ಆಲಮಟ್ಟಿ: ಬಾಗಲಕೋಟೆ ಜಿಲ್ಲೆಯ ನಾಗರಾಳ-ನಾಯನೇಗಲಿಯಲ್ಲಿರುವ ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಇನ್ನುಳಿದ ಸಕ್ಕರೆ ಕಾರ್ಖಾನೆಗಳಿಗಿಂತಲೂ ಕಡಿಮೆ ದರ ನೀಡುತ್ತಿರುವುದು ಸರಿಯಲ್ಲ. ಇನ್ನುಳಿದ ಸಕ್ಕರೆ ಕಾರ್ಖಾನೆಯಂತೆ ರೈತರು ಕಳುಹಿಸಿದ ಕಬ್ಬಿಗೆ ದರವನ್ನು ನೀಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನಿಡಗುಂದಿ ತಾಲೂಕು ಘಟಕದ ವತಿಯಿಂದ ಒತ್ತಾಯಿಸಲಾಯಿತು.
ಈ ಕುರಿತು ಶನಿವಾರ ರಾಷ್ಟ್ರೀಯ ಹೆದ್ದಾರಿ-50 ಚತುಷ್ಪಥ ರಸ್ತೆಗೆ ಹೊಂದಿಕೊಂಡಿರುವ ಬಾಗಲಕೋಟೆ ತಾಲೂಕಿನ ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆಗೆ ತೆರಳಿದ ಸಂಘದ ಪದಾಧಿಕಾರಿಗಳು ಮತ್ತು ರೈತರು ಆಡಳಿತ ಮಂಡಳಿಗೆ ಮನವಿ ಮಾಡಿದ ಅವರು, ವಿಜಯಪುರ ಜಿಲ್ಲೆಯ ಕಾರಜೋಳದಲ್ಲಿರುವ ಬಸವೇಶ್ವರ ಸಕ್ಕರೆ ಕಾರ್ಖಾನೆ ಮತ್ತು ಬೀಳಗಿ ತಾಲೂಕಿನ ಬಾಡಗಂಡಿ ಸಕ್ಕರೆ ಕಾರ್ಖಾನೆಯವರು ಕಳೆದ ವರ್ಷದಿಂದ ಒಂದು ಟನ್ ಕಬ್ಬಿಗೆ 2700 ರೂ. ಗಳನ್ನು ರೈತರ ಖಾತೆಗೆ ಮಾಡುತ್ತಿದ್ದಾರೆ. ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆಯವರು ಸರ್ಕಾರದ ನಿರ್ದೇಶನವನ್ನು ಗಾಳಿಗೆ ತೂರಿ 2456 ರೂ. ಮಾತ್ರ ರೈತರ ಖಾತೆಗಳಿಗೆ ಜಮಾ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಆಡಳಿತಮಂಡಳಿಯವರು ಕೂಡಲೇ ಸರ್ಕಾರ ನಿಗದಿಪಡಿಸಿದ ದರದಂತೆ ರೈತರಿಗೆ ಹಣ ಜಮಾ ಮಾಡಬೇಕು. ಇಲ್ಲದಿದ್ದರೆ ಕಾರ್ಖಾನೆ ವಿರುದ್ದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ, ಮುತ್ತು ದೇಸಾಯಿ, ಸಾಬಣ್ಣ ಅಂಗಡಿ, ರಾಜು ಯಲಿಗಾರ, ಸುಭಾಷ್ ಚೋಪಡೆ, ವೆಂಕಟೇಶ ವಡ್ಡರ ಮೊದಲಾದವರಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.