ಇ.ಡಿ.ದಾಳಿ ಪ್ರಮಾಣ ಶೇ.27ರಷ್ಟು ಹೆಚ್ಚಳ; 2014ರಿಂದ 2022ರ ವರೆಗೆ 3,010 ದಾಳಿ
Team Udayavani, Sep 12, 2022, 6:40 AM IST
ನವದೆಹಲಿ: ದೇಶದಲ್ಲಿ ಆರ್ಥಿಕ ಅಪರಾಧಗಳ ಬಗ್ಗೆ ವಿಶೇಷವಾಗಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸುತ್ತಿರುವ ದಾಳಿಗಳ ಪ್ರಮಾಣ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ.
ಜತೆಗೆ ಈ ದಾಳಿಗಳ ವೇಳೆ 1 ಲಕ್ಷ ಕೋಟಿ ರೂ.ಗಳನ್ನು ವಶಕ್ಕೆ ಪಡೆದುಕೊಂಡಿದೆ. 2004ರಿಂದ 2014ರ ವರೆಗೆ ಇ.ಡಿ. ಕೇವಲ 112 ದಾಳಿಗಳನ್ನು ನಡೆಸಿದ್ದರೆ, 2014ರಿಂದ 2022ರವರೆಗೆ 3,010 ದಾಳಿಗಳನ್ನು ನಡೆಸಲಾಗಿದೆ. ಶೇಕಡಾವಾರು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 27ರಷ್ಟು ಹೆಚ್ಚಾಗಿದೆ.
ಕೋಲ್ಕತಾದ ಮೊಬೈಲ್ ಗೇಮಿಂಗ್ ಆ್ಯಪ್ ವ್ಯಾಪಾರಿಯ ನಿವಾಸ ಮತ್ತು ಇತರ ಸ್ಥಳಗಳ ಮೇಲೆ ಶನಿವಾರ ನಡೆಸಲಾಗಿದ್ದ ದಾಳಿಯ ವೇಳೆ 17 ಕೋಟಿ ರೂ.ನಗದು ವಶಪಡಿಸಿಕೊಳ್ಳಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕ ಹಗರಣಕ್ಕೆ ಸಂಬಂಧಿಸಿ ಟಿಎಂಸಿ ಶಾಸಕ ಪಾರ್ಥ ಚಟರ್ಜಿ ನಿವಾಸ-ಕಚೇರಿಗಳ ಮೇಲೆ ದಾಳಿ ನಡೆಸಿದ್ದಾಗ 27 ಕೋಟಿ ರೂ. ನಗದು, ಚಿನ್ನಾಭರಣ ವಶಪಡಿಸಿಕೊಳ್ಳಲಾಗಿತ್ತು. ಜಾರ್ಖಂಡ್‌ನಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆದಿದ್ದ ಹಗರಣದ ವೇಳೆ ಐಎಎಸ್ ಅಧಿಕಾರಿ ಪೂಜಾ ಸಿಂಘಲ್ ನಿವಾಸದಲ್ಲಿ 20 ಕೋಟಿ ರೂ. ಪತ್ತೆಯಾಗಿತ್ತು.
ಕಳೆದ ಮಾ.31ಕ್ಕೆ ಜಾರಿ ನಿರ್ದೇಶನಾಲಯದ ವಶದಲ್ಲಿ 1 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಇತ್ತು. ಅವುಗಳೆಲ್ಲವೂ ವಿವಿಧ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಂಡದ್ದು. ಜಪ್ತಿ ಮಾಡಲಾಗಿರುವ ಆಸ್ತಿಯ ಪೈಕಿ 57 ಸಾವಿರ ಕೋಟಿ ರೂ. ಮೌಲ್ಯದ್ದು ಬ್ಯಾಂಕ್ ವಂಚನೆ ಮತ್ತು ಹಣಕಾಸು ವಂಚನೆ ಪ್ರಕರಣಗಳಿಗೆ ಸೇರಿವೆ.
ಏನಾಗಲಿದೆ ವಶಪಡಿಸಿಕೊಳ್ಳಲಾದ ಹಣ?
ವಶಪಡಿಸಿಕೊಂಡ ನಗದು, ಆಭರಣ ಸೇರಿ ಮುಟ್ಟುಗೋಲು ಹಾಕಿಕೊಳ್ಳಲಾಗಿರುವ ಆಸ್ತಿಯ ಬಗ್ಗೆ ಪಂಚನಾಮೆ ನಡೆಸಲಾಗುತ್ತದೆ. ಅಂದರೆ ಅವುಗಳ ಸಂಪೂರ್ಣ ವಿವರಗಳು ಅದರಲ್ಲಿರುತ್ತವೆ. ನಗದು ಮೊತ್ತವನ್ನು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ನಲ್ಲಿರುವ ತನಿಖಾ ಸಂಸ್ಥೆಯ ಖಾತೆಯಲ್ಲಿ ಇರಿಸಲಾಗುತ್ತದೆ. ಸಾಕ್ಷಿಯಾಗಿ ಪರಿಗಣಿತವಾಗಿರುವ ನಗದು ಅಥವಾ ಚಿನ್ನವನ್ನು ಕೋರ್ಟ್‌ನಲ್ಲಿ ಸಾಕ್ಷ್ಯ ರೂಪದಲ್ಲಿ ಹಾಜರುಪಡಿಸಬೇಕಾಗಿರುವುದರಿಂದ ಅದನ್ನು ಮೊಹರು ಮಾಡಿ ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.