ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ
Team Udayavani, Sep 12, 2022, 1:05 PM IST
ದೇವನಹಳ್ಳಿ: ಗ್ರಾಮೀಣ ಪ್ರದೇಶದ ಪ್ರತಿ ಹಳ್ಳಿಹಳ್ಳಿ ಯಲ್ಲೂ ರಸ್ತೆಗಳ ಅಭಿವೃದ್ಧಿ ಮಾಡಬೇಕು. ಮೂಲ ಸೌಕರ್ಯ ಒದಗಿಸಿಕೊಡಬೇಕು. ಗುಣಮಟ್ಟದ ಕಾಮ ಗಾರಿಗಳನ್ನು ಗುತ್ತಿಗೆದಾರರು ಮಾಡಬೇಕು. ಗುಣ ಮಟ್ಟದಲ್ಲಿ ಯಾವುದೇ ರಾಜಿಯಾಗುವುದಿಲ್ಲ ಎಂದು ಶಾಸಕ ಎಲ್.ಎನ್. ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ಕಸಬಾ ಹೋಬಳಿ ಕನ್ನಮಂಗಲ ಪಾಳ್ಯ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ವೀಕ್ಷಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನ ಸಮಗ್ರ ಅಭಿವೃದ್ಧಿಯ ಚಿಂತನೆ ಯೊಂದಿಗೆ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದೇವೆ. 2023 ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದರೆ ಅವರು ಒಂದು ದಿವಸದಲ್ಲೇ ಕನ್ನಮಂಗಲಪಾಳ್ಯ ರಸ್ತೆ ಅಗಲೀಕರಣ ಮಾಡಿ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಕನ್ನಮಂಗಲಪಾಳ್ಯವನ್ನು ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಪ್ರಾದೇಶಿಕ ಪಕ್ಷ ಬಲಪಡಿಸಿ: ಕನ್ನಮಂಗಲ ಪಾಳ್ಯ ಗ್ರಾಮಕ್ಕೆ 1 ಕೋಟಿ 95 ಲಕ್ಷ ರೂ.ಗಳ ಕಾಮಗಾರಿ ಮಾಡಿಸಲಾಗಿದೆ. 30 ಲಕ್ಷ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗುವುದು. ಇದೇ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆಗೆ 20 ಲಕ್ಷ ರೂ. ನೀಡಲಾಗಿದೆ. ಜೆಡಿಎಸ್ ಶಾಸಕರ ಅವಧಿಯಲ್ಲಿ ಕ್ಷೇತ್ರದಲ್ಲಿ ಹೆಚ್ಚು ಅಭಿವೃದ್ಧಿ ಕಾರ್ಯ ಆಗಿದೆ. ರಾಷ್ಟ್ರೀಯ ಪಕ್ಷಗಳು ಮುಸ ಲ್ಮಾನರನ್ನು ಓಟ್ ಬ್ಯಾಂಕ್‌ನ್ನಾಗಿ ಮಾಡಿಕೊಂಡಿದ್ದಾರೆ. ಅವರ ಆಸೆ ಅಮಿಷಗಳಿಗೆ ಒಳಗಾಗದೆ ಪ್ರಾದೇಶಿಕ ಪಕ್ಷ ಬಲಪಡಿಸಿ 2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದರು.
ಜನರ ಸಮಸ್ಯೆಗೆ ಸ್ಪಂದಿಸುವೆ: ಪ್ರತಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಕನ್ನಮಂಗಲ ಪಾಳ್ಯ ಗ್ರಾಮದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ಮುಖಂಡ ರಾಜ ಗೋಪಾಲ್, ಗ್ರಾಪಂ ಸದಸ್ಯ ನಾಗೇಶ್, ನಜೀರ್ ಅಹಮದ್ ಒಳಗೊಂಡಂತೆ ಎಲ್ಲರಿಂದ ಗ್ರಾಮಕ್ಕೆ ಏನು ಆಗಬೇಕು ಎಂದು ಮಾಹಿತಿ ಪಡೆದು ಅಭಿವೃದ್ಧಿಪಡಿ ಸಲಾಗುತ್ತಿದೆ ಎಂದು ಹೇಳಿದರು.
ಕಾಂಕ್ರೀಟ್ ರಸ್ತೆ ನಿರ್ಮಾಣ: ಗ್ರಾಪಂ ಸದಸ್ಯ ಪಿ. ನಾಗೇಶ್ ಮಾತನಾಡಿ, ಕನ್ನಮಂಗಲ ಪಾಳ್ಯ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ಶಾಸಕರು ನೀಡಿದ್ದಾರೆ. ಗ್ರಾಮದಲ್ಲಿ ರಸ್ತೆಗಳಿಗೆ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಶಾಸಕರ ಅಭಿವೃದ್ಧಿ ಕಾರ್ಯ ಪ್ರತಿ ಮನೆಮನೆಗೆ ತಿಳಿಸಬೇಕು ಎಂದು ಹೇಳಿದರು.
ಗ್ರಾಪಂ ಸದಸ್ಯ ಸೋಮಶೇಖರ್, ತಾಲೂಕು ಜೆಡಿಎಸ್ ಅಧ್ಯಕ್ಷ ಆರ್. ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ತಾಪಂ ಮಾಜಿ ಸದಸ್ಯ ಸಾದಹಳ್ಳಿ ಎಸ್.ಮಹೇಶ್, ಮುಖಂಡ ರಾಜಗೋಪಾಲ್, ನಾರಾಯಣಗೌಡ, ಕೆಂಪೇಗೌಡ, ನಜೀರ್ ಅಹಮದ್, ವೆಂಕಟಗಿರಿಕೋಟೆ ಗ್ರಾಪಂ ಅಧ್ಯಕ್ಷ ಎಚ್. ಶ್ರೀನಿವಾಸ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಪಟಾಲಪ್ಪ, ತಾಲೂಕು ಸೊಸೈಟಿ ಅಧ್ಯಕ್ಷ ಎ.ದೇವರಾಜ್, ನಿರ್ದೇಶಕ ಕಾಮೇನಹಳ್ಳಿ ರಮೇಶ್, ಗಂಗಾಧರ್, ಕಸಬಾ ಹೋಬಳಿ ಜೆಡಿಎಸ್ ಅಧ್ಯಕ್ಷ ಚಿಕ್ಕನಾರಾಯಣಸ್ವಾಮಿ, ಬೊಮ್ಮವಾರ ವಿಎಸ್‌ಎಸ್ ಎನ್ ಅಧ್ಯಕ್ಷ ಟಿ. ರವಿ, ಮುಖಂಡ ಸಿರಾಜ್ ಸಾಬ್, ನಜೀರ್, ನರೇಂದ್ರ, ಪ್ರಭಾಕರ್, ಸೊಣ್ಣೇಗೌಡ, ಬಂಗಾರಪ್ಪ ಹಾಗೂ ಗ್ರಾಮಸ್ಥರು ಇದ್ದರು.
ಪ್ರತಿ ಹಳ್ಳಿಯಲ್ಲೂ ಕಾಂಕ್ರೀಟ್ ರಸ್ತೆ ನಿರ್ಮಾಣ : ಕನ್ನಮಂಗಲ ಪಾಳ್ಯ ಗ್ರಾಮಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಕರೆಸಿ ಒಂದು ಕಾರ್ಯಕ್ರಮ ಮಾಡಲಾಗುವುದು. ಈಗಾಗಲೇ ಪ್ರತಿ ಹಳ್ಳಿಯಲ್ಲೂ 50 ಲಕ್ಷದಿಂದ ಒಂದು ಕೋಟಿವರೆಗೆ ಕಾಂಕ್ರೀಟ್ ರಸ್ತೆ ಮಾಡ ಲಾಗಿದೆ. ಕೆಲವರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದು ಟೀಕೆ ಮಾಡುತ್ತಾರೆ. ನಾವು ಮಾಡಿರುವ ಅಭಿವೃದ್ಧಿ ಕಾರ್ಯ ಒಂದು ಬಾರಿ ನೋಡಲಿ. ಯಾವುದೇ ಗ್ರಾಮದಲ್ಲಿ ಶಾಸಕರು ಇಂತಹ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ನಾಮಫಲಕ ಹಾಕಿಸಿಲ್ಲ ಎಂದು ಶಾಸಕ ಎಲ್. ಎನ್. ನಾರಾಯಣಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.