ಅಮಿತ್ ಶಾ ಅವರು ಧರಿಸುವ ಮಫ್ಲರ್ ಬೆಲೆ 80,000 ರೂಪಾಯಿ :ಅಶೋಕ್ ಗೆಹ್ಲೋಟ್
Team Udayavani, Sep 12, 2022, 9:57 PM IST
ಜೈಪುರ: ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ಮುಂದುವರೆದಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಧರಿಸುವ ಮಫ್ಲರ್ ಬೆಲೆ 80,000 ರೂಪಾಯಿ ಎಂದು ತಿರುಗೇಟು ನೀಡಿದ್ದಾರೆ.
ಚುರುದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೆಹ್ಲೋಟ್, ಭಾರತ್ ಜೋಡೋ ಯಾತ್ರೆಗೆ ಜನರಿಂದ ಅಸಾಧಾರಣ ಪ್ರತಿಕ್ರಿಯೆ ಸಿಗುತ್ತಿರುವುದರಿಂದ ಆಡಳಿತಾರೂಢ ಬಿಜೆಪಿ ಚಿಂತಿತವಾಗಿದೆ. ಅವರು ರಾಹುಲ್ ಗಾಂಧಿಯವರ ಟೀ ಶರ್ಟ್ ಬಗ್ಗೆ ಮಾತನಾಡುತ್ತಿದ್ದಾರೆ, ಅವರು ಸ್ವತಃ 2.5 ಲಕ್ಷ ರೂ. ಸನ್ ಗ್ಲಾಸ್ ಮತ್ತು 80,000 ರೂ. ಮಫ್ಲರ್ ಧರಿಸುತ್ತಾರೆ. ಗೃಹ ಸಚಿವರು ಧರಿಸಿರುವ ಮಫ್ಲರ್ ಬೆಲೆ 80,000 ರೂ.ಎಂದು ಹೇಳಿದ್ದಾರೆ.
”ಬಿಜೆಪಿಯವರು ಟಿ-ಶರ್ಟ್ನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಯಾತ್ರೆಗೆ ಸಾರ್ವಜನಿಕ ಪ್ರತಿಕ್ರಿಯೆ ಅಸಾಧಾರಣವಾಗಿದೆ. ಬಿಜೆಪಿ ನಾಯಕರು ವಿಚಲಿತರಾಗಿದ್ದಾರೆ. ಪ್ರಧಾನಿ, ಗೃಹ ಸಚಿವರು ಮತ್ತು ಇತರ ನಾಯಕರು ತಮ್ಮ ಕೆಲಸವನ್ನು ಬಿಟ್ಟು ರಾಹುಲ್ ಗಾಂಧಿ ಅವರ ಟೀಕೆ ಮಾಡುತ್ತಿದ್ದಾರೆ” ಎಂದರು.
ಕಳೆದ ವಾರ ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ 41,000 ರೂಪಾಯಿಗೂ ಹೆಚ್ಚು ಬೆಲೆಯ ಟೀ ಶರ್ಟ್ ಧರಿಸಿದ್ದರು ಎಂದು ಬಿಜೆಪಿ ಶುಕ್ರವಾರ ಆರೋಪಿಸಿದ ನಂತರ ಮಾತಿನ ಸಮರ ಪ್ರಾರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.