ರೈಲು ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Sep 13, 2022, 3:07 PM IST
ಶಹಾಬಾದ: ಕೋವಿಡ್‌ಕ್ಕಿಂತಲೂ ಮುಂಚೆ ನಿಲ್ಲುತ್ತಿದ್ದ ಎಲ್ಲಾ ರೈಲುಗಳನ್ನು ಶಹಾಬಾದ ರೇಲ್ವೆ ನಿಲ್ದಾಣದಲ್ಲಿ ನಿಲ್ಲಬೇಕೆಂದು ಆಗ್ರಹಿಸಿ ಮಂಗಳವಾರ ಶಹಾಬಾದ ತಾಲೂಕು ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ರೈಲ್ವೆ ನಿಲ್ದಾಣ ಅಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಹಾಬಾದ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ಮಯೂರ, ನಗರದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚಿನ ಜನರು ವಾಸಿಸುತ್ತಿದ್ದಾರೆ.ಇಲ್ಲಿನ ಜನರಿಗೆ ಕಲಬುರಗಿಗೆ, ಸೋಲಾಪೂರಗೆ ಹೋಗಲೂ ತೊಂದರೆಯಾಗುತ್ತಿದೆ. ನೌಕರಸ್ಥರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಎಲ್ಲಿಲ್ಲದ ತೊಂದರೆಯಾಗುತ್ತಿದೆ. ಕೇವಲ ಕಡಿಮೆ ಜನಸಂಖ್ಯೆ ಹೊಂದಿರುವ ಚಿತ್ತಾಪುರ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಯಾಗುತ್ತಿದೆ. ಅದೇ ಒಂದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ನಗರದಲ್ಲಿ ರೈಲು ನಿಲುಗಡೆಯಾಗುತ್ತಿಲ್ಲ.ಈಗಾಗಲೇ ಹಲವು ಬಾರಿ ಪ್ರತಿಭಟನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಶಾಸಕ, ಸಂಸದರಿಗೆ ಮನವಿ ಸಲ್ಲಿಸಿದ್ದೇವೆ. ಆದರೂ ಯಾವುದೇ ಕ್ರಮಕೈಗೊಂಡಿಲ್ಲ. ಆದ್ದರಿಂದ ಕೂಡಲೇ ರೈಲು ನಿಲ್ಲಿಸಲು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೇ ಇದೇ ಸೆಪ್ಟೆಂಬರ್ 17ರಂದು ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಶೇಖ ಬಾಬು ಉಸ್ಮಾನ, ನರಸಿಂಹಲೂ ರಾಯಚೂರಕರ್, ಭೀಮಾಶಂಕರ ಕಾಂಬಳೆ, ಪಿನಿತ್ ಹಳ್ಳಿ, ಮರ್ಗು, ನಾಗಪ್ಪ ರಾಯಚೂರಕರ್, ರಾಮು, ಶಿವಶಾಲಕುಮಾರ ಪಟ್ಟಣಕರ್, ಕಿರಣ ಚವ್ಹಾಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.