![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 13, 2022, 4:40 PM IST
ಭೋಪಾಲ್: ಮೂರುವರೆ ವರ್ಷದ ನರ್ಸರಿ ಮಗುವನ್ನು ಶಾಲಾ ಬಸ್ ನಲ್ಲಿ ಅತ್ಯಾಚಾರಗೈದ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಶಾಲಾ ಬಸ್ ಚಾಲಕನೇ ಈ ಕೃತ್ಯ ಮಾಡಿದ ಆರೋಪಿ.
ಸ್ಕೂಲ್ ಬಸ್ ಚಾಲಕನು ಮಹಿಳಾ ಸಹಾಯಕಿಯ ಉಪಸ್ಥಿತಿಯಲ್ಲೇ ಈ ಕೃತ್ಯ ನಡೆಸಿದ್ದಾನೆ. ಕೃತ್ಯವನ್ನು ಮುಚ್ಚಿಡಲು ಆಕೆ ಪ್ರಯತ್ನಪಟ್ಟಿದ್ದರು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
ಮಗುವಿನ ಮೈಮೇಲೆ ಆಗಿರುವ ಗಾಯಗಳನ್ನು ಗಮನಿಸಿದ ತಾಯಿ ಆಕೆಯನ್ನು ಪ್ರಶ್ನಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಮಗು ತನ್ನ ತಾಯಿಗೆ ಘಟನೆಯ ಬಗ್ಗೆ ತಿಳಿಸಿದಾಗ, ಕುಟುಂಬವು ಶಾಲಾ ಆಡಳಿತವನ್ನು ಸಂಪರ್ಕಿಸಿದೆ. ಆದರೆ ಆಡಳಿತ ಮಂಡಳಿಯು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.
ಇದನ್ನೂ ಓದಿ:ಕೆಲಸ ಕಳೆದುಕೊಳ್ತೀರಿ… ಏನಿದು ಮೂನ್ ಲೈಟಿಂಗ್?ಉದ್ಯೋಗಿಗಳಿಗೆ ಇನ್ಫೋಸಿಸ್ ಎಚ್ಚರಿಕೆ
ಇದರ ಬಳಿಕ ಮಗುವು ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ಚಾಲಕನನ್ನು ಪೋಕ್ಸೊ ಕಾಯ್ದೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿದೆ. ಅಪರಾಧವನ್ನು ಮರೆಮಾಚಲು ಯತ್ನಿಸಿದ ಸಹಾಯಕಿಯನ್ನೂ ಬಂಧಿಸಲಾಗಿದೆ.
ಘಟನೆಯ ಬಗ್ಗೆ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಪ್ರತಿಕ್ರಿಯೆ ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯೂ ಕೃತ್ಯವನ್ನು ಮುಚ್ಚಿ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಅವರು ತಪ್ಪಿತಸ್ಥರೆಂದು ಗೊತ್ತಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.