ಸಾಗರ: ಅಪರಿಚಿತ ವಾಹನ ಢಿಕ್ಕಿ; ಯುವಕ ಸಾವು
Team Udayavani, Sep 13, 2022, 6:32 PM IST
ಸಾಗರ: ಇಲ್ಲಿನ ಜೋಗ ರಸ್ತೆಯ ಪ್ರಗತಿ ಶಾಲೆ ಎದುರಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ರಂಜಿತ್ ಕುಮಾರ್ (26) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.
ಸಾಗರದಲ್ಲಿ ಕಂಪ್ಯೂಟರ್ ಮತ್ತು ಸಿಸಿ ಕ್ಯಾಮರಾ ರಿಪೇರಿ ಮಾಡುವ ಕೆಲಸ ಮಾಡುವ ರಂಜಿತ್ ಕುಮಾರ್ ಸೋಮವಾರ ರಾತ್ರಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕರ ಆಕ್ರೋಶ: ಬೈಕ್ ಸವಾರ ರಂಜಿತ್ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಮರ ಕಡಿತಲೆ ಮಾಡಿದ ಗುತ್ತಿಗೆದಾರರೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಇಕ್ಕೆಲಗಳಲ್ಲಿದ್ದ ಮರಗಳನ್ನು ಕಡಿತಲೆ ಮಾಡಿ ಅಲ್ಲಿಯೇ ಬಿಡಲಾಗಿತ್ತು. ರಾತ್ರಿ ಬೈಕ್‌ನಲ್ಲಿ ಮರವನ್ನು ಬಳಸಿಕೊಂಡು ಹೋಗುವಾಗ ಎದುರಿನಿಂದ ಅಪರಿಚಿತ ವಾಹನ ಬಡಿದು ರಂಜಿತ್ ಕುಮಾರ್ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಮರ ಕಡಿತಲೆ ಗುತ್ತಿಗೆ ಹಿಡಿದ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸ್ಥಳದಲ್ಲಿದ್ದ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಹೊಸ ಸೇರ್ಪಡೆ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.