ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ
Team Udayavani, Sep 13, 2022, 10:17 PM IST
ಬೆಂಗಳೂರು: ಅನಧಿಕೃತ ಸಾಗುವಳಿ ಮಾಡುತ್ತಿರುವ ಸರಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-57ರಲ್ಲಿ ಸಲ್ಲಿಸುವ ಕೊನೇ ದಿನಾಂಕವನ್ನು ಮತ್ತೂಂದು ವರ್ಷಕ್ಕೆ ವಿಸ್ತರಿಸಲು ಅವಕಾಶ ಮಾಡಿಕೊಡುವ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ-2022 ಅನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.
ವಿಧೇಯಕ ಮಂಡಿಸಿದ ಕಂದಾಯ ಸಚಿವ ಆರ್. ಅಶೋಕ್, ಅನಧಿಕೃತ ಸಾಗುವಳಿ ವಿಚಾರಕ್ಕೆ ಸಂಬಂಧಿಸಿ 2005ರ ಜ. 1ರ ಹಿಂದಿನಿಂದ ಸಾಗುವಳಿ ಮಾಡಲಾಗುತ್ತಿರುವ, 2018ರ ಮಾ. 17ರಿಂದ 2019ರ ಮಾ. 16ರ ವರೆಗೆ ಅನಧಿಕೃತ ಸಾಗುವಳಿ ಮಾಡುತ್ತಿರುವ ಸರಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-57ರಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ 2019ರ ಮಾ. 10ರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿರಲಿಲ್ಲ. ಅವಧಿ ವಿಸ್ತರಿಸುವಂತೆ ಶಾಸಕರು ಮತ್ತು ಸಾರ್ವಜನಿಕರಿಂದ ಮನವಿ ಬಂದಿತ್ತು.
ವಿಧಾನಮಂಡಳದ ಅಧಿವೇಶನ ಇಲ್ಲದ ಕಾರಣ ಅರ್ಜಿ ಸಲ್ಲಿಕೆ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿ 2022ರ ಮೇ 26ರಂದು ಆಧ್ಯಾದೇಶ ಹೊರಡಿಸಲಾಗಿತ್ತು. ಈಗ ಪ್ರಸಕ್ತ ಅಧಿವೇಶನದಲ್ಲಿ ಆಧ್ಯಾದೇಶದ ಬದಲಿಗೆ ತಿದ್ದುಪಡಿ ವಿಧೇಯಕ ತರಲಾಗಿದೆ ಎಂದು ಹೇಳಿದರು.
ಇದೇ ವೇಳೆ 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ವಿಧೇಯಕ, ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ರೇಷ್ಮೆಹುಳು ಬಿತ್ತನೆ ಮತ್ತು ರೇಷ್ಮೆ ನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ನಿಯಮ ವಿಧೇಯಕ 2022 ಅನ್ನು ಮಂಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.