ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ: ಶಶಿಕಲಾ ಜೊಲ್ಲೆ

ಕಟ್ಟುನಿಟ್ಟಿನ ಸೂಚನೆ ;ಅಧಿಕಾರಿಗಳ ಮೇಲೂ ಕಠಿಣ ಕ್ರಮ

Team Udayavani, Sep 14, 2022, 4:25 PM IST

shashikala-jolle

ಬೆಂಗಳೂರು (ವಿಧಾನಪರಿಷತ್ತು): ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿರುವ ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಬುಧವಾರ ತಿಳಿಸಿದ್ದಾರೆ.

ವಿಧಾನಪರಿಷತ್ತಿನ ಪ್ರಶ್ನೋತ್ತರ ಕಾರ್ಯಕಲಾಪದಲ್ಲಿ ಸದಸ್ಯರಾದ ಎನ್‌ ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿ, ಬೆಂಗಳೂರು ನಗರ ತಿಗಳರ ಪೇಟೆಯಲ್ಲಿರುವ ಶ್ರೀ ಧರ್ಮರಾಯ ಸ್ವಾಮಿ ದೇವಾಲಯವು ಪ್ರವರ್ಗ “ಬಿ” ವರ್ಗದ ಧಾರ್ಮಿಕ ಸಂಸ್ಥೆಯಾಗಿರುತ್ತದೆ. ಪ್ರಸ್ತಾವಿತ ದೇವಾಲಯವು ಬೆಂಗಳೂರು ನಗರ ನೀಲಸಂದ್ರ ಗ್ರಾಮದ ಸರ್ವೇ ನಂ 79 ರಲ್ಲಿ 15 ಎಕರೆ 12 ಗುಂಟೆ ವಿಸ್ತೀರ್ಣ, ಹೊಂಗಸಂದ್ರ ಗ್ರಾಮದ ಸರ್ವೇ ನಂ. 33 ರಲ್ಲಿ 16 ಎಕರೆ 25 ಗುಂಟೆ ಜಮೀನು ಕಂದಾಯ ದಾಖಲಾತಿಯಂತೆ ದೇವಸ್ಥಾನದ ಹೆಸರಿನಲ್ಲಿದೆ.ಈ ಜಮೀನಿನಲ್ಲಿ ಅತಿಕ್ರಮವಾಗಿ 229 ಕುಟುಂಬಗಳು ಮನೆಗಳನ್ನು ನಿರ್ಮಿಸಿಕೊಂಡಿವೆ. ಇದಕ್ಕೆ ಸಂಬಂಧಪಟ್ಟಂತೆ 13 ಜನರ ವಿರುದ್ದ ಕರ್ನಾಟಕ ಭೂಕಬಳಿಕೆ ನಿಷೇದ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅತಿಕ್ರಮಣಕಾರರ ಪರ ಸಲ್ಲಿಸಲಾಗಿದ್ದ ಬೆಂಗಳೂರಿನ 8ನೇ ಹೆಚ್ಚುವರಿ ಸಿಟಿ ಸಿವಿಲ್‌ ಜಡ್ಜ್‌ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವು ವಜಾಗೊಂಡಿದ್ದು, ಅರ್ಜಿದಾರರು ಸರ್ವೋಚ್ಚ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಇಲಾಖೆಯ ವತಿಯಿಂದ ಸೂಕ್ತ ವಾದವನ್ನು ಮಂಡಿಸಲಾಗುತ್ತಿದೆ ಎಂದರು.

ನೀಲಸಂದ್ರ ಗ್ರಾಮದಲ್ಲಿನ ಅನಧಿಕೃತ ಅತಿಕ್ರಮಣಗಾರರನ್ನು ತೆರವುಗೊಳಿಸಿ 9 ಎಕರೆ ಜಮೀನಿಗೆ ಕಾಂಪೌಂಡ್‌ ನಿರ್ಮಿಸಲು ಈಗಾಗಲೇ 80 ಲಕ್ಷ ರೂಪಾಯಿಗಳನ್ನು ಜಿಲ್ಲಾಧಿಕಾರಿಗಳಿಗೆ ಮಂಜೂರು ಮಾಡಲಾಗಿದೆ. ಆದರೆ, ಈ ಕಾಮಗಾರಿಯನ್ನು ಕೈಗೊಳ್ಳುವ ಕೆಲವು ತಾಂತ್ರಿಕ ಅಡಚಣೆಗಳಿದ್ದು, ಕಂದಾಯ ಸಚಿವರ ಗಮನಕ್ಕೆ ಈ ವಿಷಯವನ್ನು ತಂದಿದ್ದು ಶೀಘ್ರದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಅನಧಿಕೃತವಾಗಿ ನಿರ್ಮಸಲಾದ ಮನೆಗಳಿಗೆ ವಿದ್ಯುತ್‌, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಮಾಡದಂತೆ ಹಾಗೂ ಖಾತೆಯನ್ನು ನೊಂದಾಯಿಸದಂತೆ ಬಿಬಿಎಂಪಿ ಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವೆ ತಿಳಿಸಿದರು.

ದೇವಸ್ಥಾನಗಳ ಆಸ್ತಿಗಳ ಒತ್ತುವರಿದಾರರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ
ದೇವಸ್ಥಾನಗಳ ಆಸ್ತಿಗಳು ದೇವಸ್ತಾನಗಳ ಹೆಸರಿನಲ್ಲೇ ಇರಬೇಕು. ದೇವಸ್ಥಾನಗಳ ಆಸ್ತಿಗಳನ್ನು ಸರ್ವೇ ಕಾರ್ಯವೂ ಭರದಿಂದ ಸಾಗಿದೆ. ಈ ಸರ್ವೇ ಕಾರ್ಯ ದ ವರದಿಯ ಆಧಾರದ ಮೇಲೆ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಅತಿಕ್ರಮಣ ತಡೆಯದ ಅಧಿಕಾರಿಗಳ ಮೇಲೂ ಕಠಿಣ ಕ್ರಮ
ಧರ್ಮರಾಯ ದೇವಸ್ಥಾನದ ಜಮೀನು ಅತಿಕ್ರಮಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕರ್ತವ್ಯಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ 6 ಅಧಿಕಾರಿಗಳಿಗೆ ನೋಟೀಸ್‌ ನೀಡಲಾಗಿದೆ. ಈಗಾಗಲೇ ಅತಿಕ್ರಮಣ ಮಾಡಿಕೊಂಡು ಮನೆಗಳನ್ನು ನಿರ್ಮಿಸಿಕೊಳ್ಳಲು ಅವಕಾಶ ನೀಡಿದ ಅಧಿಕಾರಿಗಳ ಮೇಲೂ ಕ್ರಮಕೈಗೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸದಸ್ಯರು ಈ ಸಂಧರ್ಭದಲ್ಲಿ ಒತ್ತಾಯಿಸಿದರು.

ಟಾಪ್ ನ್ಯೂಸ್

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.