ಚಿತ್ತಾಪುರದಲ್ಲಿ ಪಕ್ಷಾಂತರ ಪರ್ವ ಆರಂಭ
Team Udayavani, Sep 14, 2022, 4:38 PM IST
ವಾಡಿ: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಚಿತ್ತಾಪುರ ಮೀಸಲು ಮತಕ್ಷೇತ್ರದಲ್ಲಿ ಪûಾಂತರ ಪರ್ವ ಆರಂಭವಾಗಿದ್ದು, ಕೆಲ ಮುಖಂಡರು ಬಿಜೆಪಿ ತೊರೆದು ಶಾಸಕ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರೆ, ಇನ್ನು ಕೆಲ ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.
ಚಿತ್ತಾಪುರ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಅರವಿಂದ ಚವ್ಹಾಣ ಹಾಗೂ ದ್ವೀದಳ ಧಾನ್ಯ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ, ಬಿಜೆಪಿ ಹಿರಿಯ ಮುಖಂಡ ಲಿಂಗಾರೆಡ್ಡಿಗೌಡ ಬಾಸರೆಡ್ಡಿ ಮುಂದಾಳತ್ವದಲ್ಲಿ ಸೋಮವಾರ ಬೆಂಗಳೂರಿಗೆ ತೆರಳಿದ್ದ ಮಹರ್ಷಿ ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ, ಡಾ|ಮಲ್ಲಿಕಾರ್ಜುನ ಖರ್ಗೆ ಆಪ್ತ ಭೀಮರಾವ ದೊರೆ, ವೀರಶೈವ ಲಿಂಗಾಯಿತ ಸಮಾಜದ ವಾಡಿ ಅಧ್ಯಕ್ಷ ಶರಣಗೌಡ ಪಾಟೀಲ ಚಾಮನೂರ, ಮುಖಂಡರಾದ ಸುಭಾಷ ರದ್ದೇವಾಡಗಿ ಚಾಮನೂರ, ಅಬ್ದುಲ್ ರಶೀದ್ ಆಜಾದ್ ವಾಡಿ, ಗುಂಡುಗೌಡ ಮಾಲಿಪಾಟೀಲ ಚಾಮನೂರ, ಮುಕುºಲ್ ಸಾಹೇಬ್, ರಾಘವೇಂದ್ರ, ಕಾಶೀನಾಥ, ಭಾಗಣ್ಣ ದೊರೆ, ಮಲ್ಲಿಕಾರ್ಜುನ ದೊಡ್ಡಮನಿ, ಶಮಶೀರ್ ಪಟೇಲ್, ಇಬ್ರಾಹಿಂ ಪಟೇಲ್ ಕುಂದನೂರ, ಸೂಫಿ ಸಾಹೇಬ್ ಚಾಮನೂರ, ನೂರ್ ಮಹ್ಮದ್ ಹಾಗೂ ಒಟ್ಟು 17 ಕಾಂಗ್ರೆಸ್ ಮುಖಂಡರು ಅಧಿಲೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪಕ್ಷದ ಕಚೇರಿಯಲ್ಲಿ ಎಲ್ಲ ಮುಖಂಡರಿಗೆ ಕಮಲ ಚಿನ್ಹೆಯ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.
ಸಂಸದ ಡಾ|ಉಮೇಶ ಜಾಧವ, ಶಾಸಕ ರಾಜುಗೌಡ, ಲಿಂಗಾರೆಡ್ಡಿಗೌಡ ಬಾಸರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಜಿಪಂ ಮಾಜಿ ಸದಸ್ಯ ಅರವಿಂದ ಚವ್ಹಾಣ, ವಾಡಿ ಶಕ್ತಿಕೇಂದ್ರ ಅಧ್ಯಕ್ಷ ಶಿವರಾಮ ಪವಾರ, ಪ್ರಧಾನ ಕಾರ್ಯದರ್ಶಿ ರಾಹುಲ ಸಿಂಧಗಿ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.