ಹಿರಿಯಡಕ-ಗುಡ್ಡೆಯಂಗಡಿ ರಸ್ತೆಯಲ್ಲಿ ಯಮಕೂಪ


Team Udayavani, Sep 15, 2022, 12:29 PM IST

6

ಮಣಿಪಾಲ: ಹಿರಿಯಡಕ- ಗುಡ್ಡೆಯಂಗಡಿ ರಸ್ತೆಯಲ್ಲಿ (ರಾಜ್ಯ ಹೆದ್ದಾರಿ) ಯಮಕೂಪದ ದರ್ಶನ ಸವಾರರನ್ನು ದಂಗು ಬಡಿಸುವಂತಿವೆ.

ಹಿರಿಯಡಕದಿಂದ ಗುಡ್ಡೆಯಂಗಡಿ ಐದಾರು ಕಿಲೋಮೀಟರ್‌ ರಸ್ತೆಯಲ್ಲಿ ಬೃಹದಾಕಾರದಲ್ಲಿ ಗುಂಡಿಗಳು ಬಾಯೆ¤ರೆದುಕೊಂಡು ವಾಹನ ಸವಾರರಿಗೆ ಅಪಾಯ ಆಹ್ವಾನಿಸುತ್ತಿದೆ. ಹಿರಿಯಡಕ ಕೋಟ್ನಕಟ್ಟೆ ಫ್ರೆಂಡ್ಸ್‌ ಸರ್ಕಲ್‌ನಿಂದ ಆರಂಭಗೊಂಡು ಗುಡ್ಡೆಯಂಗಡಿವರೆಗೆ ರಸ್ತೆಯ ತೀರ ದುಃಸ್ಥಿತಿಯಲ್ಲಿದ್ದು, ವಾಹನಗಳ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದೆ.

ಗುಡ್ಡೆಯಂಗಡಿ ಕಾರ್ಕಳ ಲೋಕೋಪಯೋಗಿ ಇಲಾಖೆ ಉಪ ವಲಯ ವ್ಯಾಪ್ತಿಯಿಂದ ಕಾರ್ಕಳವರೆಗೆ ಇತ್ತೀಚೆಗೆ ಹೊಸ ರಸ್ತೆ ನಿರ್ಮಾಣಗೊಂಡಿದ್ದು, ಉತ್ತಮ ಸಂಚಾರ ರಸ್ತೆಯಾಗಿ ಅಭಿವೃದ್ಧಿಗೊಂಡಿದೆ. ಆದರೆ ಹಿರಿಯಡಕದಿಂದ ಗುಡ್ಡೆಯಂಗಡಿವರೆಗಿನ ರಸ್ತೆ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ಇಲ್ಲಿ ಗುಂಡಿಗಳನ್ನು ತಪ್ಪಿಸಿಕೊಂಡು ಹೋಗಲು ಸವಾರರು ಹರಸಾಹಸವನ್ನೇ ಮಾಡಬೇಕಿದೆ. ಗುಂಡಿಗಳಿರುವ ಪರಿಣಾಮ ಹಲವಾರು ಮಂದಿ ಸ್ಕೂಟರ್‌ ಸವಾರರು ನಿಯಂತ್ರಣ ತಪ್ಪಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಈ ಮಾರ್ಗದಲ್ಲಿ ಸಂಚರಿಸುವ ಘನ ಮತ್ತು ಲಘು ವಾಹನಗಳ ತಾಂತ್ರಿಕ ಸಮಸ್ಯೆಗೂ ರಸ್ತೆ ಕಾರಣವಾಗುತ್ತಿದೆ.

ಕಾರ್ಕಳದಿಂದ ಉಡುಪಿ ಕೆಎಂಸಿ ಆಸ್ಪತ್ರೆಗೆ ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳನ್ನು ಕರೆ ತರಲಾಗುತ್ತದೆ. ಆದರೆ ಈ ರಸ್ತೆಯಲ್ಲಿ ಆ್ಯಂಬುಲೆನ್ಸ್‌ ಸಹ ಚಲಿಸಲು ಅಸಾಧ್ಯವಾಗಿದೆ. ಈಗಾಗಲೇ ಹಲವಾರು ಜನಪ್ರತಿನಿಧಿಗಳಿಗೆ, ಇಲಾಖೆ ಅವರಿಗೆ ದೂರು ನೀಡಿದರು ಸ್ಪಂದನೆ ದೊರೆತಿಲ್ಲ ಎನ್ನುತ್ತಾರೆ ಸಾರ್ವಜನಿಕರು. ರಸ್ತೆ ಅಭಿವೃದ್ಧಿ ತಡವಾದಲ್ಲಿ, ಕೂಡಲೇ ಗುಂಡಿಗಳನ್ನು ಮುಚ್ಚಿಕೊಡುವಂತೆ ನಾಗರಿಕರು ಸಂಬಂಧಪಟ್ಟ ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳಲ್ಲಿ ಕೋರಿಕೊಂಡಿದ್ದಾರೆ.

ರಸ್ತೆ ಅಭಿವೃದ್ಧಿಗೆ 3 ಕೋ.ರೂ. ಮಂಜೂರು: ಪೇತ್ರಿ-ಹಿರಿಯಡಕ-ಗುಡ್ಡೆಯಂಗಡಿ 11ರಿಂದ 13 ಕಿ.ಮೀ. ವ್ಯಾಪ್ತಿ ಕಾರ್ಕಳ ಸಂಪರ್ಕ ರಸ್ತೆ ಅಭಿವೃದ್ಧಿಗೆ 3 ಕೋ. ರೂ. ಅನುದಾನ ಮಂಜೂರಾಗಿದೆ. ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದ್ದು, ಐದಾರು ಮಂದಿ ಟೆಂಡರ್‌ ಸಲ್ಲಿಸಿದ್ದಾರೆ. ಸೆ.28ಕ್ಕೆ ಟೆಂಡರ್‌ ಸ್ವೀಕಾರ ಕೊನೆಯ ದಿನಾಂಕ. ಟೆಂಡರ್‌ ಅಂತಿಮಗೊಂಡ ಬಳಿಕ ಸರಕಾರದ ಹಂತದಲ್ಲಿ ಪರಿಶೀಲನೆಯಾಗಿ ಅನುಮೋದನೆಯಾಗಲು 15 ದಿನ ಬೇಕಾಗುತ್ತದೆ. ತಾಂತ್ರಿಕ ಬಿಡ್‌ನ‌ಲ್ಲಿ ಅರ್ಹತೆ ಪಡೆದ ಅನಂತರ ಫೈನಾನ್ಶಿಯನ್‌ ಬಿಡ್‌ ಓಪನ್‌ ಆಗುತ್ತದೆ. ಒಟ್ಟಾರೆ ಪ್ರಕ್ರಿಯೆ ನಡೆದು ನವೆಂಬರ್‌ನಿಂದ ಕಾಮಗಾರಿ ಆರಂಭಗೊಳ್ಳುತ್ತದೆ. ಮಳೆಗಾಲವು ಮುಗಿದಿರುವುದರಿಂದ ಅನುಕೂಲವಾಗಲಿದ್ದು, ದ್ವಿಪಥ ರಸ್ತೆ ಕಾಮಗಾರಿ ತತ್‌ಕ್ಷಣ ಆರಂಭಿಸಿ, ವ್ಯವಸ್ಥಿತವಾಗಿ ಪೂರ್ಣಗೊಳಿಸಲಾಗುವುದು. ಪ್ರಸ್ತುತ ಸವಾರರಿಗೆ ಆಗುತ್ತಿರುವ ತೊಂದರೆ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಂಡಿದ್ದೇವೆ. ಸ್ವಲ್ಪ ಮಳೆ ಕಡಿಮೆಯಾಗಿರುವುದರಿಂದ ಈ ವಾರದೊಳಗೆ ಗುಂಡಿಗಳಿಗೆ ತೇಪೆ ಹಾಕಲಾಗುವುದು. – ಜಗದೀಶ್‌ ಭಟ್‌, ಎಇಇ, ಲೋಕೋಪಯೋಗಿ ಇಲಾಖೆ, ಉಡುಪಿ

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.