ರಾಶಿ ಫಲ: ಈ ರಾಶಿಯವವರ ಆರೋಗ್ಯದಲ್ಲಿ ಏರುಪೇರು ಸಾಧ್ಯತೆ
Team Udayavani, Sep 16, 2022, 7:43 AM IST
ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ವೃಷಭ: ನೂತನ ಜನರ ಭೇಟಿ. ದೀರ್ಘ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ. ಮಕ್ಕಳಿಂದ ಸಂತಸದ ವಾತಾವರಣ.
ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಶಿಸ್ತು.
ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.
ಸಿಂಹ: ಆರೋಗ್ಯ ವೃದ್ಧಿ. ನಿರàಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫಲತೆ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.
ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ, ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು. ದಂಪತಿಗಳಲ್ಲಿ ತಾಳ್ಮೆ ಇರಲಿ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮಸ್ವಾಸ್ಥ್ಯ ವೃದ್ಧಿ.
ಧನು: ಆರೋಗ್ಯದಲ್ಲಿ ಪ್ರಗತಿ. ಆರ್ಥಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ. ಕುಟುಂಬಿಕರ ಉತ್ತಮ ಸಹಕಾರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.
ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಕಾರ್ಯ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ದಾಂಪತ್ಯ ಸುಖ ಉತ್ತಮ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫಲತೆ.
ಕುಂಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪ ವಸ್ತುಗಳ ಸಂಗ್ರಹ. ದೀರ್ಘ ಪ್ರಯಾಣದಿಂದ ದೇಹಾಯಾಸ ತೋರೀತು.
ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗುವಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.