ಕೊರಟಗೆರೆ: ಪ್ರಧಾನಿ ಜನ್ಮದಿನದ ಅಂಗವಾಗಿ ಬಿಜೆಪಿಯಿಂದ ಜನೋಪಯೋಗಿ ಕಾರ್ಯ
15 ದಿನಗಳ ಕಾಲ ರಕ್ತದಾನ, ಗಿಡ ನೆಡುವ ಕಾರ್ಯಕ್ರಮ....
Team Udayavani, Sep 16, 2022, 7:03 PM IST
ಕೊರಟಗೆರೆ:ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ 15 ದಿನಗಳ ಕಾಲ ನಾನಾ ರೀತಿಯ ಜನೋಪಯೋಗಿ ಕಾರ್ಯಗಳನ್ನು ತಾಲೂಕು ಬಿಜೆಪಿ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಎಸ್ ಪವನ್ ಕುಮಾರ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ರಕ್ತದಾನ ಶಿಬಿರ, ಗಿಡ ನೆಡುವ ಕಾರ್ಯಕ್ರಮ, ಜೀವ ರಕ್ಷಕ ಅಭಿಯಾನ, ಉಚಿತ ಆರೋಗ್ಯ ಶಿಬಿರ ಸೇರಿದಂತೆ ವಿವಿಧ ರೀತಿಯ ಜನರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ನಡೆಸಲಾಗುವುದು. ತಾಲೂಕು ಮಟ್ಟ ಹಾಗೂ ಬೂತ್ ಮಟ್ಟದಲ್ಲಿ ಈ ಕಾರ್ಯಗಳು ನಡೆಯಲಿವೆ ಎಂದರು.
ಪ್ರತಿ ಬೂತ್ ಮಟ್ಟದಲ್ಲಿ ಕೇಂದ್ರ ಸರ್ಕಾರದಿಂದ ಅನುಕೂಲ ಪಡೆದಿರುವ 50 ಫಲಾನುಭವಿಗಳಿಂದ ಪ್ರಧಾನಿ ಮೋದಿ ಅವರಿಗೆ ಕೃತಜ್ಞತಾ ಪತ್ರ ಬರೆಯುವ ಹಾಗೂ ಖಾದಿ ವಸ್ತು ಖರೀದಿಸುವ ಮತ್ತು ಧರಿಸುವ ಬಗ್ಗೆಯೂ ಯೋಜನೆ ಇದೆ. ಮೋದಿ@20 ಹೆಸರಿನಲ್ಲಿ ಅವರ ಬದುಕು, ಜೀವನ ನಡೆದು ಬಂದ ದಾರಿ, ಅವರ ಆಡಳಿತ ಶೈಲಿ ಎಲ್ಲವನ್ನು ತೋರಿಸಲಾಗುವುದು. ಬಿಜೆಪಿಯ ಬೂತ್ ಮಟ್ಟದ ಎಲ್ಲಾ ಕಾರ್ಯಕರ್ತರು ಭಾಗವಹಿಸಿ ವಿನೂತನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿದರು.
ಮುಖಂಡ ತಿಮ್ಮಜ್ಜ ಮಾತನಾಡಿ ಪಕ್ಷದ ತೀರ್ಮಾನದಂತೆ 15 ರೀತಿಯ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು ಇದರೊಂದಿಗೆ ಪಂಡಿತ್ ದೀನ ದಯಾಳ್ ಹಾಗೂ ಮಹಾತ್ಮ ಗಾಂಧೀಜಿ ಅವರ ಜಯಂತಿಗಳನ್ನು ವಿಶೇಷವಾಗಿ ಆಚರಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಪಕ್ಷದ ನಾನಾ ಮೋರ್ಚಾಗಳು ಹಲವು ರೀತಿಯ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದರು.
ಮುಖಂಡ ವಿಜಯ್ ಕುಮಾರ್ ಮಾತನಾಡಿ ಎಸ್ಟಿ ಮೋರ್ಚಾ ವತಿಯಿಂದ ಸಚಿವ ಶ್ರೀರಾಮುಲು ಅವರು ಎಸ್ಸಿ ಎಸ್ಟಿ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ ನಡೆಯಲಿದೆ ಹಾಗೂ ರೈತ ಮೋರ್ಚಾದಿಂದ ಕೆರೆಗಳ ನಿರ್ವಹಣೆಯನ್ನು ನೋಡಿಕೊಳ್ಳಲಾಗುವುದು ಮಹಿಳಾ ಮೋರ್ಚಾ ವತಿಯಿಂದ ಅಂಗನವಾಡಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದರು.
ಈಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಸುರೇಶ್, ನಟರಾಜು, ಪ್ರಸನ್ನ ಕುಮಾರ್, ಬಾಲರಾಜು, ಮುಕ್ಕಣ್ಣಪ್ಪ, ರಂಗನಾಥ್, ಸ್ವಾಮಿ, ಗುರು, ನಂಜುಂಡ ಶೆಟ್ಟಿ, ಹೇಮಲತಾ, ಮಮತಾ, ಗಿರಿಜಮ್ಮ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.