ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆಗೆ ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಹಾಲಪ್ಪ ಆಚಾರ್
Team Udayavani, Sep 16, 2022, 8:51 PM IST
ವಿಧಾನಸಭೆ: ರಾಜ್ಯದ 1,002 ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಹಾಗೂ 2329 ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೇಮಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಪ್ರಶ್ನೆಗೆ ಉತ್ತರಿಸಿದ ಸಚಿವರು, 400ರಿಂದ 800 ಜನಸಂಖ್ಯೆ ಇರುವ 1,002 ಮಿನಿ ಅಂಗನವಾಡಿ ಕೇಂದ್ರಗಳನ್ನು ಆದ್ಯರ್ಪಿಸಿ 1,002 ಮುಖ್ಯ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ 2022 ಏ.4 ಹಾಗೂ ಜು.17ರಂದು ಪ್ರಸ್ತಾವನೆ ಸಲ್ಲಿಸಲಾಗಿದೆ.
ಉಳಿದ 2,329 ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದೆಯನ್ನು ಮಂಜೂರು ಮಾಡಲು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ. ಕೇಂದ್ರದಿಂದ ಮಂಜೂರಾತಿ ದೊರೆತ ನಂತರ 1,002 ಮಿನಿ ಅಂಗನವಾಡಿ ಕೇಂದ್ರಗಳು ಮುಖ್ಯ ಅಂಗನವಾಡಿ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.