ಸರ್ಕಾರ, ಸಾರಿಗೆ ನಿಗಮಗಳಿಗೆ ಹೈಕೋರ್ಟ್ ನೋಟಿಸ್
ಕೋವಿಡ್‌ನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಸ್ಥರಿಗೆ ಪರಿಹಾರ
Team Udayavani, Sep 17, 2022, 11:00 PM IST
ಬೆಂಗಳೂರು ಕೋವಿಂಡ್-19 ತುತ್ತಾಗಿ ಪ್ರಾಣ ಕಳೆದುಕೊಂಡಿರುವ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಸದಸ್ಯರಿಗೆ 30 ಲಕ್ಷ ರೂ. ಪರಿಹಾರ ಒದಗಿಸಲು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ತಾಹೇರ್ ಹುಸೇನ್ ಹಾಗೂ ಅಜೀಜ್ ಪಾಷಾ ಜಾಗೀರದಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ| ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ನಿಗಮ (ಬಿಎಂಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಮತ್ತು ವಾಯವ್ಯ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲೂಕೆಆರ್‌ಟಿಸಿ)ಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಕೋವಿಡ್-19ಯಿಂದ ಸಾರಿಗೆ ನೌಕರರು ಸಾವನ್ನಪ್ಪಿದ್ದರೆ, ಅವರ ಕುಟುಂಬಕ್ಕೆ 30 ಲಕ್ಷ ರೂ ಪರಿಹಾರ ಕಲ್ಪಿಸುವುದಾಗಿ ತಿಳಿಸಿ ಸಾರಿಗೆ ಇಲಾಖೆ 2021ರ ಫೆ. 10ರಂದು ಸುತ್ತೋಲೆ ಹೊರಡಿಸಿತ್ತು.
ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿ ಪ್ರಕಾರ 2020ರ ಮಾರ್ಚ್ ನಿಂದ 2021ರ ಜೂನ್‌ವರಗೆ ಕೋವಿಡ್‌ನಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ 351 ನೌಕರರು ಮೃತಪಟ್ಟಿದ್ದಾರೆ. ಅದರಲ್ಲಿ ಕೇವಲ 11 ನೌಕರರ ಕುಟುಂಬಗಳಿಗೆ ಪರಿಹಾರ ವಿತರಣೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.