ಬೆಂಗಳೂರು ನಗರದಲ್ಲಿ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡಲ್ಲ: ಆರಗ ಜ್ಞಾನೇಂದ್ರ
Team Udayavani, Sep 17, 2022, 11:46 AM IST
ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರಕಾರದ ಮುಂದಿಲ್ಲವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ, ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಮೋದಿ@72:8 ಚೀತಾಗಳನ್ನು ಕುನೋ ನ್ಯಾಷನಲ್ ಅರಣ್ಯಕ್ಕೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸಾರ್ವಜನಿಕರಿಂದ, ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ, ಸ್ಥಗಿತಗೊಳಿಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.