ಭಾರತದಲ್ಲಿ 24 ಗಂಟೆಯಲ್ಲಿ 5,747 ಕೋವಿಡ್ ಸೋಂಕು ಪ್ರಕರಣ ಪತ್ತೆ, 13 ಮಂದಿ ಸಾವು
ಭಾರತದ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.71ರಷ್ಟಿದೆ.
Team Udayavani, Sep 17, 2022, 12:31 PM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 5,747 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,45,28,524 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಸೆಪ್ಟೆಂಬರ್ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಭುವನೇಶ್ವರದಲ್ಲಿ ಜನರ ನಿದ್ದೆಗೆಡಿಸಿದ ಕರಿ ಬೆಕ್ಕು : 25 ಜನರ ಮೇಲೆ ದಾಳಿ, ಶೋಧ ಕಾರ್ಯ…
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 46,848ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,302ಕ್ಕೆ ತಲುಪಿದೆ.
ಭಾರತದ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.71ರಷ್ಟಿದೆ. ಒಂದೇ ದಿನದಲ್ಲಿ 100 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ದೇಶದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.1.69ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.1.74ರಷ್ಟಿದೆ.
ಕೋವಿಡ್ ಸೋಂಕಿನಿಂದ ಒಟ್ಟು 4,39,53,374 ಕೋಟಿ ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿನ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 216.41 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.