ಭಾರತ್ ಜೋಡೋ ಯಾತ್ರೆಗೆ ಹೊಣೆಗಾರಿಕೆ ಹಂಚಿಕೆ: ಡಿಕೆಶಿ
Team Udayavani, Sep 18, 2022, 6:30 AM IST
ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆಗೆ ರಾಜ್ಯದಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದ್ದು, ಕೆಲವು ಸಮಿತಿಗಳನ್ನು ರಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾತ್ರೆಯ ಪ್ರಚಾರದ ಜವಾಬ್ದಾರಿಯನ್ನು ರಾಮಲಿಂಗಾ ರೆಡ್ಡಿ ಅವರಿಗೆ, ಬಳ್ಳಾರಿ ಸಮಾವೇಶದ ಜವಾಬ್ದಾರಿಯನ್ನು ಎಂ.ಬಿ.ಪಾಟೀಲ್ ನೇತೃತ್ವದ ಸಮಿತಿಗೆ ವಹಿಸಲಾಗಿದೆ ಎಂದರು.
ಸಂಚಾರ ವ್ಯವಸ್ಥೆಯನ್ನು ರೇವಣ್ಣ ಅವರಿಗೆ, ಪ್ರತಿನಿತ್ಯದ ಸಭೆಗಳ ಜವಾಬ್ದಾರಿಯನ್ನು ಕೃಷ್ಣ ಭೈರೇಗೌಡ ನೇತೃತ್ವದ ಸಮಿತಿಗೆ, ವಾಸ್ತವ್ಯ ವ್ಯವಸ್ಥೆಗೆ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಹಾಗೂ ಮೈಸೂರು ಚಾಮರಾಜನಗರ ಭಾಗದ ಉಸ್ತುವಾರಿಗೆ ಧ್ರುವನಾರಾಯಣ ನೇತೃತ್ವದ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.
ಮೈಸೂರು ನಗರದ ಉಸ್ತುವಾರಿ ಮಹದೇವಪ್ಪ ಹಾಗೂ ಯತೀಂದ್ರ ಅವರಿಗೆ, ಮಂಡ್ಯ ಭಾಗದ ಉಸ್ತುವಾರಿ ಚಲುವರಾಯ ಸ್ವಾಮಿಗೆ, ತುಮಕೂರು ಭಾಗಕ್ಕೆ ಪರಮೇಶ್ವರ್, ಚಳ್ಳಕೆರೆ ಭಾಗದಲ್ಲಿ ಸಲೀಂ ಅಹ್ಮದ್ ಅವರು ಸ್ಥಳೀಯ ಶಾಸಕರ ಜತೆ ಜವಾಬ್ದಾರಿ ನಿಭಾಯಿಸುತ್ತಾರೆ. ರಾಯಚೂರು ಉಸ್ತುವಾರಿಯನ್ನು ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರು ನೋಡಿಕೊಳ್ಳುತ್ತಾರೆ ಎಂದರು.
ಮಹಿಳೆಯರ ಸಂಘಟನೆಗೆ ಐದಾರು ತಂಡಗಳನ್ನು ರಚಿಸಲಾಗಿದೆ. ಗಾಂಧಿ ಜಯಂತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಿ.ಎಲ್. ಶಂಕರ್ ಅವರಿಗೆ ಉಸ್ತುವಾರಿ ನೀಡಲಾಗಿದೆ. ಉಳಿದ ಜವಾಬ್ದಾರಿಗಳನ್ನು ಬೇರೆ ಶಾಸಕರಿಗೆ ನೀಡಲಾಗುವುದು ಎಂದು ಹೇಳಿದರು.
ನಮ್ಮ ಶಾಸಕರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಟಾರ್ಗೆಟ್ ನೀಡಿದ್ದಾರೆ. ಶಾಸಕರು ಎಂದರೆ ಕೇವಲ ಮದುವೆ ಸಮಾರಂಭ, ಟೇಪ್ ಕಟ್ ಕಾರ್ಯಕ್ರಮಕ್ಕೆ ಹೋಗುವುದಲ್ಲ. ಮನೆ ಮನೆಗೆ ಹೋಗಿ ಬೂತ್ ಯಾತ್ರಾ ಮಾಡಬೇಕು ಎಂದರು.
ಎಲ್ಲವೂ ನನ್ನಿಂದಲೇ ಆಗದು..
ನಮ್ಮ ನಾಯಕರು ಸ್ಪಂದಿಸುತ್ತಿಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ. ಎಲ್ಲರೂ ಸ್ಪಂದಿಸುತ್ತಾ ಕೆಲಸ ಮಾಡುತ್ತಿದ್ದಾರೆ. ಸಂಪೂರ್ಣವಾಗಿ ತೊಡಗಿಸಿಕೊಳ್ಳಿ ಎಂದು ಹೇಳಿದ್ದೇನೆ. ನನ್ನ ವೇಗ ಹೆಚ್ಚಾಗಿರಬಹುದು. ಕೆಲವರಿಗೆ ಅವರ ಕ್ಷೇತ್ರದ ಜವಾಬ್ದಾರಿ ಹೆಚ್ಚಾಗಿದೆ. ಎಲ್ಲವನ್ನೂ ನನ್ನಿಂದಲೇ ಮಾಡಲು ಆಗುವುದಿಲ್ಲ. ನಮ್ಮ ನಾಯಕರು ಅವರವರ ಕೆಲಸ ಮಾಡುತ್ತಿದ್ದಾರೆ. ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಪ್ರತಿ ಕ್ಷೇತ್ರಕ್ಕೂ ಹೋಗಬೇಕು, ಪ್ರಧಾನ ಕಾರ್ಯದರ್ಶಿಗಳು ಪ್ರತಿ ಪಂಚಾಯತ್ಗೆ ಹೋಗಿ ಪಕ್ಷ ಸಂಘಟನೆ ಮಾಡಬೇಕು. ಸಂಘಟನೆ ಇಲ್ಲದೇ ಯಶಸ್ಸು ಸಿಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.