ಇಂದು ಉಪ್ಪಿ ಹ್ಯಾಪಿ ಬರ್ತ್ಡೇ: ಕಬ್ಜ ಟೀಸರ್ ನಿಂದ ಹೆಚ್ಚಾಯ್ತು ನಿರೀಕ್ಷೆ
Team Udayavani, Sep 18, 2022, 9:14 AM IST
ಇಂದು ಉಪೇಂದ್ರ ಅವರ ಹುಟ್ಟುಹಬ್ಬ. ಕಳೆದ ಮೂರು ವರ್ಷಗಳಿಂದ ಉಪೇಂದ್ರ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಆದರೆ, ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳಲು ನಿರ್ಧರಿಸಿರುವ ಉಪೇಂದ್ರ, ಅಭಿಮಾನಿಗಳಿಗೆ ಆಹ್ವಾನ ನೀಡಿದ್ದಾರೆ. ಈ ಮೂಲಕ ಉಪ್ಪಿ ಅಭಿಮಾನಿಗಳು ಖುಷಿಯಾಗಿದ್ದಾರೆ.
ತಮ್ಮ ಹುಟ್ಟುಹಬ್ಬದ ದಿನ ಆಗಮಿಸುವ ಅಭಿಮಾನಿಗಳಿಗೆ ಉಪೇಂದ್ರ ಟಾಸ್ಕ್ ವೊಂದನ್ನು ನೀಡಿದ್ದಾರೆ. ಅದೇನೆಂದರೆ ಒಂದು ಹಾಳೆಯಲ್ಲಿ ಏನಾದರೊಂದು ಉತ್ತಮ ವಿಚಾರವನ್ನು ಬರೆದು ತರಬೇಕು. ಆ ಬರಹ 18 ಪದಗಳನ್ನು ಮೀರಬಾರದು… ಹೀಗೊಂದು ಟಾಸ್ಕ್ ಅನ್ನು ಅಭಿಮಾನಿಗಳಿಗೆ ಉಪೇಂದ್ರ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ, “ವಿಚಾರವಂತರಾಗೋಣಾ.. ಇದೇ ಸೆಪ್ಟೆಂಬರ್ 18 ಅಭಿಮಾನಿಗಳ ದಿನದಂದು ನಿಮ್ಮನ್ನ ನಮ್ಮ ಮನೆಯಲ್ಲಿ ಭೇಟಿಯಾಗುತ್ತೇನೆ. ಆ ದಿನ ಕೇಕ್, ಹೂಗುಚ್ಚ ಗಿಫ್ಟ್ ಎಲ್ಲಾ ಬಿಟ್ಟು, ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಒಂದು ಉತ್ತಮ ವಿಚಾರವನ್ನು ಬರೆದು ತರುತ್ತೀರಾ? ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನವಿರುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು, ಉಪೇಂದ್ರ ಅವರ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ ಅವರ ಪ್ಯಾನ್ ಇಂಡಿಯಾ ಚಿತ್ರ “ಕಬj’ ಚಿತ್ರೀಕರಣ ಪೂರ್ಣಗೊಳಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಕೊಂಡಿದೆ. ಆರ್.ಚಂದ್ರು ನಿರ್ಮಾಣ, ನಿರ್ದೇಶನದ ಈ ಚಿತ್ರದ ಮೇಲೆ ಈಗಾಗಲೇ ನಿರೀಕ್ಷೆ ಹೆಚ್ಚಾಗಿದೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದಲ್ಲದೇ ಉಪೇಂದ್ರ ಅವರದ್ದೇ ನಿರ್ದೇಶನದ “ಯು-ಐ’ ಚಿತ್ರದ ಚಿತ್ರೀಕರಣ ಕೂಡಾ ಭರದಿಂದ ಸಾಗುತ್ತಿದೆ. ಜೊತೆಗೆ “ಬುದ್ಧಿವಂತ-2′, “ಲಗಾಮ್’ ಸಿನಿಮಾಗಳು ಕೂಡಾ ಚಿತ್ರೀಕರಣ ಮುಗಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.