ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಶಿಕ್ಷಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
Team Udayavani, Sep 18, 2022, 10:31 AM IST
ಫಿರೋಜಾಬಾದ್ : ಎಂಟು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಾಥಮಿಕ ಶಾಲಾ ಶಿಕ್ಷಕನಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಆರೋಪಿಯನ್ನು ವಿಜಯ್ ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ.
ಏಳು ವರ್ಷಗಳ ಹಿಂದೆ ನಡೆದ ಘಟನೆ ಇದಾಗಿದ್ದು ಬಾಲಕ ಅದೇ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದ ಸಂದರ್ಭ ಅದೇ ಶಾಲೆಯ ಶಿಕ್ಷಕರಾಗಿದ್ದ ವಿಜಯ್ ಪಾಲ್ ಸಿಂಗ್ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎನ್ನಲಾಗಿದೆ.
ಈ ಕುರಿತು ಬಾಲಕ ತನ್ನ ಪೋಷಕರಲ್ಲಿ ಹೇಳಿದ್ದು ಪೋಷಕರು ಶಾಲಾ ಶಿಕ್ಷಕರ ವಿರುದ್ಧ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಈ ಕುರಿತು ತನಿಖೆ ಕೈಗೆತ್ತಿಕೊಂಡ ಪೊಲೀಸರು ಶಾಲಾ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಶಾಲಾ ಶಿಕ್ಷಕನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 377, 507 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : ಮಡಿಕೇರಿ : ಆತಂಕ ಮೂಡಿಸಿದ ಹುಲಿ ಸಂಚಾರ, ಚುಚ್ಚುಮದ್ದು ನೀಡಿದರೂ ತಪ್ಪಿಸಿಕೊಂಡ ಹುಲಿ
ಎಫ್‌ಐಆರ್‌ನ ಪ್ರಕಾರ, ಮಗುವಿನ ದೌರ್ಜನ್ಯ ನಡೆಸಿದ ಬಳಿಕ ಸಿಂಗ್, ಮಗುವನ್ನು ಯಾರೊಂದಿಗಾದರೂ ಮಾತನಾಡಿದರೆ “ಹೊಡೆದು ಕೊಲ್ಲುವುದಾಗಿ” ಬೆದರಿಕೆ ಹಾಕಿದ್ದಾನೆ. ಮಗುವಿನ ಆರೋಗ್ಯ ಹದಗೆಟ್ಟ ನಂತರ ಹಲ್ಲೆ ನಡೆದಿರುವ ವಿಷಯ ತಿಳಿಯಿತು ಎಂದು ಮಗುವಿನ ತಂದೆ ತಿಳಿಸಿದ್ದಾರೆ. ಆತನನ್ನು ವಿಚಾರಿಸಿದಾಗ ಕಳೆದ ಹಲವು ದಿನಗಳಿಂದ ಶಿಕ್ಷಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಬಾಲಕ ಹೇಳಿದ್ದಾನೆ ಎಂದು ಪೋಷಕರು ತಿಳಿಸಿದ್ದಾರೆ.
ಘಟನೆ ಸಂಬಂಧ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಗೊಂಡಿದ್ದು ಆರೋಪಿ ಶಾಲಾ ಶಿಕ್ಷಕನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.