![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 18, 2022, 12:50 PM IST
ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭಾನುವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಗಡಿಭಾಗದ ಅಭಿವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದರು.
ಮೂಲಗಳ ಪ್ರಕಾರ, ಬೊಮ್ಮಾಯಿ ಮತ್ತು ಪಿಣರಾಯಿ ಗಡಿ ಭಾಗದ ಅಭಿವೃದ್ಧಿ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ರಾತ್ರಿ ಸಂಚಾರಕ್ಕೆ ಮುಕ್ತಗೊಳಿಸುವುದು ಕೇರಳದ ಬಹುಕಾಲದ ಬೇಡಿಕೆಯಾಗಿತ್ತು.
ರಾತ್ರಿ ಸಂಚಾರಕ್ಕೆ ಅವಕಾಶ ನೀಡುವಂತೆ ಕೇರಳ ರಾಜ್ಯವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಈ ರಾತ್ರಿ ಸಂಚಾರ ನಿಷೇಧದಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರು ಮುಕ್ತವಾಗಿ ಚಲಿಸುವ ಹಕ್ಕನ್ನು ನಿರ್ಬಂಧಿಸಿದಂತಾಗುತ್ತದೆ ಎಂದು ಹೇಳಿದೆ.
ಇದನ್ನೂ ಓದಿ:ರಾಹುಲ್ ಅಧ್ಯಕ್ಷರಾಗಲಿ…: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನಿರ್ಣಯ
ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ರಾತ್ರಿ ಸಂಚಾರಕ್ಕೆ ಮುಕ್ತಗೊಳಿಸಲು ಸಾಧ್ಯವಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ.
ಇದರೊಂದಿಗೆ ಹಳೆಯ ಯೋಜನೆಯಾದ ತಲಚೇರಿ- ಮೈಸೂರು ರೈಲು ಯೋಜನೆಯನ್ನೂ ಪ್ರಸ್ತಾಪಿಸಿದರು. ಆದರೆ ಈ ಯೋಜನೆಯ ರೈಲು ಮಾರ್ಗವು ಬಂಡಿಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮಧ್ಯಭಾಗದಲ್ಲಿ ಹಾದು ಹೋಗುವುದರಿಂದ ಅಲ್ಲಿನ ವನ್ಯ ಜೀವಿ ಸಂಪತ್ತು ಹಾಗೂ ಅರಣ್ಯ ಸಂಪತ್ತಿಗೆ ಹಾನಿಯಾಗುವುದು. ಆದ್ದರಿಂದ ಇದಕ್ಕೆ ಸಮ್ಮತಿಸಲು ಸಾಧ್ಯವಿಲ್ಲ ಎಂದು ತಿಳಿಸಲಾಯಿತು. ಆಗ ಭೂಗತ ರೈಲು ಮಾರ್ಗ ನಿರ್ಮಿಸುವ ಕುರಿತು ಕೇರಳ ಸರ್ಕಾರವು ಪ್ರಸ್ತಾಪಿಸಿತು. ಆದರೆ ಇದರಿಂದಲೂ ನಿರ್ಮಾಣ ಚಟುವಟಿಕೆ ಸಂದರ್ಭದಲ್ಲಿ ಪರಿಸರ ಹಾನಿಯಾಗುವುದು . ಆದ್ದರಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಯಿತು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.