ಅಧಿಕಾರಿಗಳ ನಿಂದಿಸಿದರೆ ಸಹಿಸಲ್ಲ
Team Udayavani, Sep 18, 2022, 9:01 PM IST
ಹೊನ್ನಾಳಿ: ತಹಶೀಲ್ದಾರ್‌ಗೆ ನಿಂದಿಸಿರುವುದು ಸತ್ಯವೆಂದು ಮಾಜಿ ಶಾಸಕರು ಮಾಧ್ಯಮಗಳ ಮುಂದೆ ಒಪ್ಪಿಕೊಳ್ಳುವ ಮೂಲಕ ಮತ್ತೆ ಉದ್ಧಟತನ ತೋರಿದ್ದಾರೆ. ತಕ್ಷಣ ಅವರು ರಾಜಕೀಯ ನಿವೃತ್ತಿ ಹೊಂದಬೇಕು. ಒಂದು ವೇಳೆ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ಮನೆ ಪರಿಹಾರ ಕೊಡಿಸಿದ್ದೇನೆ ಎಂದು ಸಾಬೀತುಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸವಾಲೆಸೆದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷಪಾತ ಮಾಡದೆ ಎಲ್ಲರಿಗೂ ಮನೆ ಹಾನಿ ಪರಿಹಾರ ಕೊಡಿಸುವ ಕೆಲಸ ಮಾಡುತ್ತಿದ್ದೇನೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಮನೆ ಹಾನಿ ಪರಿಹಾರ ತೆಗೆದುಕೊಂಡವರು ಶೇ. 70ರಷ್ಟು ಕಾಂಗ್ರೆಸ್‌ನವರೇ ಆಗಿದ್ದಾರೆ ಎಂದರು.
ನನ್ನ ಎದುರಿನಲ್ಲಿಯೇ ತಹಶೀಲ್ದಾರ್ ಕಚೇರಿಯಲ್ಲೇ ಮಾಜಿ ಶಾಸಕರು ತಹಶೀಲ್ದಾರರಿಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ. ಅವರಿಗೆ ನಾಚಿಕೆ ಆಗಬೇಕು. ತುಂಬು ಗರ್ಭಿಣಿಯಾಗಿರುವ ತಹಶೀಲ್ದಾರರಿಗೆ ಮಾಜಿ ಶಾಸಕರು ಅವಾಚ್ಯ ಶಬ್ದ ಬಳಸಿದ್ದಾರೆ. ಇದಕ್ಕೆ ಅವಳಿ ತಾಲೂಕಿನ ಜನರು ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಗುಡುಗಿದರು.
ಮಾಜಿ ಶಾಸಕರು ಅಧಿ ಕಾರಿಗಳಿಗೆ ಏಕವಚನದಲ್ಲಿ ಮಾತನಾಡುವುದನ್ನು ಬಿಡಬೇಕು ಎಂದು ತಾಕೀತು ಮಾಡಿದ ರೇಣುಕಾಚಾರ್ಯ, ಮಾಜಿ ಶಾಸಕರು ಅ ಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಅವರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಜನರಿಗೆ ಪರಿಹಾರ ಸಿಗದೇ ಇದ್ದರೆ ಅದಕ್ಕೆ ಮಾಜಿ ಶಾಸಕರೇ ನೇರ ಕಾರಣ ಎಂದರು.
ಎರಡು ದಿನಗಳ ಹಿಂದೆ ತಹಶೀಲ್ದಾರ್‌ಗೆ ಬೈದಿಲ್ಲ, ಇಂಜಿನಿಯರ್ ಅವರಿಗೆ ಬೈದಿದ್ದು ಎಂದು ಹೇಳಿಕೆ ನೀಡಿದ್ದ ಮಾಜಿ ಶಾಸಕರು ಈಗ ಯೂ ಟರ್ನ್ ಹೊಡೆದಿದ್ದಾರೆ. ತಹಶೀಲ್ದಾರ್‌ಗೆ ಬೈದಿದ್ದು ಸತ್ಯ ಎಂದು ಮಾಧ್ಯಮಗಳ ಮುಂದೆ ಹೇಳುತ್ತಿದ್ದು, ಅವರದ್ದು ಎಲುಬಿಲ್ಲದ ನಾಲಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅವಳಿ ತಾಲೂಕಿಗೆ ಮಾಜಿ ಶಾಸಕರ ಕೊಡುಗೆ ಶೂನ್ಯ. ಒಂದು ಬಾರಿ ಮಾಜಿ ಶಾಸಕ ಬಸವನಗೌಡ ಅವರ ಅನುಕಂಪದ ಆಧಾರದ ಮೇಲೆ ಗೆದ್ದಿದ್ದ ಅವರು, ಮತ್ತೂಮ್ಮೆ ಸಿದ್ದರಾಮಯ್ಯನವರ ಅಲೆಯಲ್ಲಿ ಗೆದ್ದಿದ್ದರು. ಈ ಬಾರಿ ಸೋಲುತ್ತೇನೆಂಬ ಹತಾಶ ಮನೋಭಾವದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಕುಟುಕಿದರು. ಮನೆ ಹಾನಿ ಬಗ್ಗೆ ಅಪ್‌ಲೋಡ್ ಮಾಡಲು ಕಳೆದ ತಿಂಗಳ 30 ಕೊನೆಯ ದಿನಾಂಕವಾಗಿತ್ತು. ಅದನ್ನು ಸೆ. 15ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಅವಳಿ ತಾಲೂಕಿನ ಜನರಿಗೆ ತೊಂದರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿ ಮತ್ತೆ ಅದನ್ನು ವಿಸ್ತರಿಸಿದ್ದೇನೆ. ಅವಳಿ ತಾಲೂಕಿನಲ್ಲಿ ಇನ್ನೂ 700ರಿಂದ 800 ಅರ್ಜಿ ಬಾಕಿ ಇದ್ದು, ಅವುಗಳಿಗೂ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ. ಯಾರೂ ಕೂಡ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.