ಹಿರಿಯ ಅಧಿಕಾರಿಗಳ ವಾಟ್ಸ್ ಆ್ಯಪ್ ನಕಲಿ ಪ್ರೊಫೈಲ್ ಸೃಷ್ಟಿಸಿ ವಂಚನೆ
Team Udayavani, Sep 19, 2022, 6:25 AM IST
ಮಂಗಳೂರು: ಹಿರಿಯ ಅಧಿಕಾರಿಗಳ ನಕಲಿ ವಾಟ್ಸ್ ಆ್ಯಪ್ ಪ್ರೊಫೈಲ್ ಅನ್ನು ಬಳಸಿ ಕಿರಿಯ ಅಧಿಕಾರಿಗಳಿಗೆ ಸಂದೇಶ ಕಳುಹಿಸಿ ವಂಚಿಸುತ್ತಿರುವ ಜಾಲದ ಬಗ್ಗೆ ಪೊಲೀಸರು ಎಚ್ಚರಿಸಿದ್ದಾರೆ.
ವಂಚಕರು ಹಿರಿಯ ಅಧಿಕಾರಿಗಳ ವಾಟ್ಸ್ ಆ್ಯಪ್ ಪ್ರೊಫೈಲ್‌ನ ಫೋಟೋವನ್ನು ತೆಗೆದು ನಕಲಿ ಪ್ರೊಫೈಲ್ ಸೃಷ್ಟಿಸಿ ಅದರ ಮೂಲಕ ಕೆಳ ಹಂತದ ಅಧಿಕಾರಿಗಳಿಗೆ ಕಳುಹಿಸುತ್ತಿದ್ದಾರೆ. ತಮ್ಮನ್ನು ಹಿರಿಯ ಅಧಿಕಾರಿ ಎಂದೇ ಪರಿಚಯಿಸಿಕೊಂಡು “ನಾನು ಬ್ಯುಸಿಯಾಗಿದ್ದೇನೆ.
ನೀನು ಒಂದು ನಂಬರ್‌ಗೆ ಕರೆ ಮಾಡಿ ಮಾಹಿತಿ ನೀಡು’ ಎನ್ನುವುದಾಗಿ ಸಂದೇಶ ಕಳುಹಿಸಲಾಗುತ್ತದೆ. ಒಂದು ವೇಳೆ ಕಿರಿಯ ಅಧಿಕಾರಿ ಆ ಸಂಖ್ಯೆಗೆ ಪ್ರತಿಕ್ರಿಯಿಸಿದರೆ ನಂಬರ್ ಅನ್ನು ಹ್ಯಾಕ್ ಮಾಡುವ ಅಪಾಯವಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಿಫ್ಟ್ ಕಾರ್ಡ್‌ಗಾಗಿ ಸಂಪರ್ಕಿಲು ಮನವಿ
ಕೆಲವೊಮ್ಮೆ ನಕಲಿ ವಾಟ್ಸ್ ಆ್ಯಪ್ ಪ್ರೊಫೈಲ್ ಮೂಲಕ ವಂಚಕರು ತಮ್ಮನ್ನು ಮೇಲಧಿಕಾರಿಗಳೆಂದು ಪರಿಚಯಿಸಿಕೊಂಡು ಕೆಳ ಅಧಿಕಾರಿಗಳಿಗೆ “ನೀವು ಒಂದು ಸಂಖ್ಯೆಯನ್ನು ಸಂಪರ್ಕಿಸಿ ಅವರಿಂದ ಅಮೆಜಾನ್ ಪೇ ಗಿಫ್ಟ್ ಕಾರ್ಡ್ ಖರೀದಿಸಿ’ ಎಂಬ ಸಂದೇಶ ಕೂಡ ಕಳುಹಿಸುತ್ತಾರೆ. ಹೆಚ್ಚಾಗಿ ಸಚಿವಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮೇಲಧಿಕಾರಿಗಳ ನಕಲಿ ಪ್ರೊಫೈಲ್ ಬಳಸಿ ಕೆಳ ಅಧಿಕಾರಿಗಳನ್ನು ಈ ರೀತಿ ವಂಚಿಸಲಾಗುತ್ತಿರುವುದು ಬೆಳಕಿಗೆ ಬರುತ್ತಲಿದೆ. ಈ ಬಗ್ಗೆ ಅಧಿಕಾರಿ ವರ್ಗದವರು ಜಾಗೃತವಾಗಿರಬೇಕು ಎಂದು ಸೈಬರ್ ಪೊಲೀಸರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.