ಆತಂಕ ಸೃಷ್ಟಿಸಿದ ಜಲಸಿರಿ ಕುಡಿಯುವ ನೀರು
Team Udayavani, Sep 19, 2022, 11:49 AM IST
ಕುಂದಾಪುರ: ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ 24 ತಾಸು ನಿರಂತರ ಕುಡಿಯುವ ನೀರು ಸರಬರಾಜು ಯೊಜನೆ ಯಡಿಯಲ್ಲಿ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಶುಚಿಯಾಗಿಲ್ಲ ಎಂಬ ಆಪಾದನೆ ಕೇಳಿ ಬರುತ್ತಿದೆ. ನಗರದ ಕೆಲವು ಭಾಗದಲ್ಲಿ ಸರಬರಾಜಾಗುತ್ತಿರುವ ನೀರು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.
ಪುರಸಭೆ ವ್ಯಾಪ್ತಿಯಲ್ಲಿನ ಚಿಕನ್ ಸಾಲ್, ಸಂಗಮ್ ರಸ್ತೆಯಲ್ಲಿನ ಮನೆಗಳಲ್ಲಿ ಜಲಸಿರಿಯ ಕುಡಿಯುವ ನೀರು ಕುಡಿಯಲು ಯೋಗ್ಯವಲ್ಲ ಎನ್ನುವ ಅನುಮಾನ ಆರಂಭವಾಗಿದೆ. ನಲ್ಲಿಗಳಲ್ಲಿ ಸರಬರಾಜಾಗುವ ನೀರು ಸಾಬೂನಿನ ನೊರೆಯಂತೆ ತೋರುತ್ತಿದ್ದು, ಸ್ವಲ್ಪ ಸಮಯದ ಅನಂತರ ನೊರೆ ಮಾಯವಾಗುತ್ತದೆ. ಹೀಗೆ ಸರಬರಾಜಾದ ಕುಡಿಯುವ ನೀರು ಶುದ್ಧವೋ, ಅಶುದ್ಧವೋ ಎಂಬ ಪ್ರಶ್ನೆ ಸಾರ್ವಜನಿಕರದ್ದು. ಸಾವಜನಿಕರು ನೀರಿನಲ್ಲಾಗುವ ಬದಲಾವಣೆಗಳನ್ನು ಗಮನಿಸಿ ಆತಂಕಗೊಂಡು ಕಳವಳ ವ್ಯಕ್ತಪಡಿಸಿದ್ದು, ಈ ಕಲುಷಿತ ನೀರಿನ ಸೇವನೆಯಿಂದ ಅನೇಕರಿಗೆ ಆರೋಗ್ಯದಲ್ಲಿ ಏರುಪೇರು ಆಗಿ ಈಗಾಗಲೇ ಅನಾರೋಗ್ಯ ಕಾಣಿಸಿಕೊಂಡಿದೆ ಎಂದೂ ಹೇಳುತ್ತಾರೆ.
ನೀರಿನ ಗುಣಮಟ್ಟವನ್ನು ಪ್ರತಿ ಹಂತದಲ್ಲೂ ಪರೀಕ್ಷಿಸಿ ಸರಬರಾಜು ಮಾಡಲಾಗುತ್ತದೆ ಎನ್ನುವುದು ಈ ಯೋಜನೆಯ ಮುಖ್ಯ ಆಶ್ವಾಸನೆ. ಈ ನಿಟ್ಟಿನಲ್ಲಿ ಯೋಜನೆಯನ್ನು ನಿರ್ವಹಣೆ ಮಾಡುವ ಸಂಸ್ಥೆ ಈ ಕುರಿತು ಪರಿಶೀಲನೆ ನಡೆಸಬೇಕಿದೆ. ಸಾರ್ವಜನಿಕರ ಸಂಶಯ ನಿವಾರಿಸಬೇಕಿದೆ.
ಈ ಕಲುಷಿತ ನೀರು ಕುಡಿದು ಅನೇಕರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು ತತ್‌ಕ್ಷಣ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ ಸಂಬಂಧ ಅಧಿ ಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿ ಕಾರಿಗಳು ಎಚ್ಚೆತ್ತುಕೊಂಡು ನೀರನ್ನು ಪರಿಶೀಲಿಸಿ (ಪರೀಕ್ಷಿಸಿ) ಕುಡಿಯಲು ಯೋಗ್ಯವಾಗಿದ್ದಲ್ಲಿ ಮಾತ್ರ ನೀರನ್ನು ಸರಬರಾಜು ಮಾಡಿ. ಜನರ ಆರೋಗ್ಯವನ್ನು ಕಾಪಾಡಿ. -ಕೋಡಿ ಅಶೋಕ್ ಪೂಜಾರಿ, ಸಾಮಾಜಿಕ ಕಾರ್ಯಕರ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.