ಇತಿಹಾಸದ ಪುಟ ಸೇರಿದ ಹಳೆ ಮುನ್ಸಿಪಾಲಿಟಿ ಕಚೇರಿ ಕಟ್ಟಡ


Team Udayavani, Sep 19, 2022, 12:21 PM IST

11

ಬಂದರು: ಶತಮಾನಗಳ ಇತಿಹಾಸ ಹೊಂದಿದ್ದ ಹಾಗೂ ಮಂಗಳೂರಿನ ಸ್ಥಳೀಯಾಡಳಿತದಲ್ಲಿ ಮಹತ್ವದ ನಿರ್ಧಾರಗಳಿಗೆ ಸಾಕ್ಷಿಯಾಗಿದ್ದ ಹಳೆ ಬಂದರು ಸ್ಟರಕ್‌ ವೃತ್ತದ ಬಳಿಯ ಮುನ್ಸಿಪಾಲಿಟಿ ಕಚೇರಿ ಕಟ್ಟಡವು(ಹಳೆ ಪಾಲಿಕೆ ಕಟ್ಟಡ) ಇನ್ನು ನೆನಪು ಮಾತ್ರ!

ಜಿಲ್ಲಾಧಿಕಾರಿ ಕಚೇರಿಯಿಂದ ಮೀನುಗಾರಿಕೆ ಬಂದರಿಗೆ ತೆರಳುವ ರಸ್ತೆಯ ಬಲಬದಿಯಲ್ಲಿರುವ ನಗರ ಆರೋಗ್ಯ ಪ್ರಾಥಮಿಕ ಕೇಂದ್ರದ ಮುಂಭಾಗದಲ್ಲಿನ ಹಿಂದಿನ ಮುನ್ಸಿ ಪಾಲಿಟಿ ಕಟ್ಟಡವನ್ನು ರಸ್ತೆ ಅಭಿವೃದ್ಧಿ ಹಿನ್ನೆಲೆಯಲ್ಲಿ ತೆರವು ಗೊಳಿಸಲಾಗಿದೆ. ಸಂಪೂರ್ಣ ಶಿಥಿಲಾ ವಸ್ಥೆಯಲ್ಲಿದ್ದ ಈ ಕಟ್ಟಡದ ಜಾಗವನ್ನು ರಸ್ತೆ ಅಭಿವೃದ್ಧಿ ಹಾಗೂ ಪಾಲಿಕೆಯ ಇತರ ಕಾರ್ಯಗಳಿಗೆ ಮೀಸಲಿಡಲು ಉದ್ದೇಶಿಸಲಾಗಿದೆ.

ಪಾಲಿಕೆಯ 45ನೇ ಪೋರ್ಟ್‌ ವಾರ್ಡ್‌ಗೆ ಸಂಬಂಧಿಸಿ ಸ್ಮಾರ್ಟ್‌ ಸಿಟಿಯಿಂದ ರಸ್ತೆಗಳ ಅಭಿವೃದ್ಧಿ ಕಾಮಗಾರಿಯು ಪ್ರಗತಿಯಲ್ಲಿದೆ. ಬದ್ರಿಯಾ ಶಾಲೆ ರಸ್ತೆ ಜಂಕ್ಷನ್‌ಗೆ ಸಂಪರ್ಕಿ ಸುವ ಕೆನರಾ ಚೇಂಬರ್‌ ರಸ್ತೆಯ ಕಾಮಗಾರಿ ಪ್ರಗತಿಯಲ್ಲಿದೆ. ಇದರಂತೆ ಪಾಲಿಕೆ ಹಳೆ ಕಚೇರಿ ಕಟ್ಟಡ ವನ್ನು ನೆಲಸಮಗೊಳಿಸುವಂತೆ ಸ್ಮಾರ್ಟ್‌ ಸಿಟಿ ಯಿಂದ ಮಂಗಳೂರು ಪಾಲಿಕೆಗೆ ಪತ್ರ ಬರೆಯಲಾಗಿತ್ತು.

ಸ್ಮಾರ್ಟ್‌ಸಿಟಿಯವರು ಪಾಲಿಕೆಗೆ ಸಲ್ಲಿಸಿರುವ ನಕ್ಷೆಯ ಅನ್ವಯ ಒಟ್ಟು 35.60 ಚ.ಮೀ. (0.88 ಸೆಂಟ್ಸ್‌)ಜಾಗವು ರಸ್ತೆ ಅಭಿವೃದ್ಧಿಗೆ ಆವಶ್ಯಕವಾಗಿದ್ದು, ಹೀಗಾಗಿ ಕಟ್ಟಡ ಇರುವ ಒಂದು ಭಾಗವನ್ನು ತೆರವುಗೊಳಿಸಿದರೆ ಉಳಿದ ಭಾಗವು ಅಪಾಯಕ್ಕೆ ಕಾರಣವಾಗಬಹುದು. ಈ ಕಾರಣದಿಂದ ಶಿಥಿಲಾವಸ್ಥೆಯಲ್ಲಿರುವ, ಉಪಯೋಗವಿಲ್ಲದ ಕಟ್ಟಡದ ಭಾಗವನ್ನು ತೆರವುಗೊಳಿಸಿ ರಸ್ತೆ ಅಭಿವೃದ್ಧಿಗೆ ನೀಡಲು ತೀರ್ಮಾನಿಸಲಾಗಿತ್ತು.

1909ರ ಮುನ್ಸಿಪಾಲಿಟಿ ಕಚೇರಿ ಇಲ್ಲಿತ್ತು! 1866ರಲ್ಲಿ ಮಂಗಳೂರು ಮುನ್ಸಿಪಾಲಿಟಿ ಆರಂಭವಾಯಿತು. 1909ರ ವರೆಗೆ ಮಂಗಳೂರು ಮುನ್ಸಿಪಾಲಿಟಿಯ ಕಾರ್ಯಚಟುವಟಿಕೆಗಳು ಹಾಗೂ ಸಭೆಗಳು ಜಿಲ್ಲಾ ಕಲೆಕ್ಟರ್‌ ಕಚೇರಿ (ಡಿಸಿ ಕಚೇರಿ)ಯಲ್ಲಿ ನಡೆಯಿತು. ಬಳಿಕ ಮುನ್ಸಿಪಾಲಿಟಿ ಕಚೇರಿಯು ಬಂದರು ರಸ್ತೆಯ ಕಟ್ಟಡಕ್ಕೆ ವರ್ಗಾವಣೆಗೊಂಡಿತು. 1909 ಫೆ. 22 ರಿಂದ ಈ ಕಟ್ಟಡದಲ್ಲಿ ಕಾರ್ಯಚಟುವಟಿಕೆಗಳು ನಡೆಯಿತು. ಇದಕ್ಕೂ ಮೊದಲು ಈ ಕಟ್ಟಡವನ್ನು ಈಸ್ಟ್‌ ಇಂಡಿಯಾ ಕಂಪೆನಿಯವರು ಉಗ್ರಾಣವಾಗಿ ಬಳಸುತ್ತಿದ್ದರು ಎಂದು ಹೇಳಲಾಗಿದೆ. 1979ರಲ್ಲಿ ಮುನ್ಸಿಪಾಲಿಟಿಯನ್ನು ರದ್ದುಗೊಳಿಸಲಾಯಿತು. ಬಳಿಕ ಆಡಳಿತಾಧಿಕಾರಿ (ಅಂದಿನ ಜಿಲ್ಲಾಧಿಕಾರಿ) ಅಧಿಕಾರಕ್ಕೆ ಒಳಪಟ್ಟಿತು. ಬಳಿಕ 1980 ಜೂ. 23ರಂದು ಮಂಗಳೂರು ಪಾಲಿಕೆಯಾಗಿ ಪರಿವರ್ತನೆಗೊಂಡಿತು. 1984ರಲ್ಲಿ ಪಾಲಿಕೆಗೆ ಮೊದಲ ಚುನಾವಣೆ ನಡೆಯಿತು. ಅಲ್ಲಿಂದ 1988ರ ವರೆಗೆ ಬಂದರ್‌ನ ಕಟ್ಟಡವೇ ಪಾಲಿಕೆ ಕಚೇರಿಯಿತ್ತು. ಬಳಿಕ ಲಾಲ್‌ಬಾಗ್‌ನಲ್ಲಿ ಪಾಲಿಕೆ ಕಟ್ಟಡಕ್ಕೆ ಆಡಳಿತ ವ್ಯವಸ್ಥೆ ವರ್ಗಾವಣೆಯಾಯಿತು ಎಂದು “ಮಂಗಳೂರು ದರ್ಶನ’ ಪುಸ್ತಕದಲ್ಲಿ ಉಲ್ಲೇಖವಿದೆ.

ಟಾಪ್ ನ್ಯೂಸ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

accident

Bantwal: ಕೆಎಸ್‌ಆರ್‌ಟಿಸಿ ಬಸ್‌-ಬೈಕ್‌ ಢಿಕ್ಕಿ; ದಂಪತಿಗೆ ಗಾಯ

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.