ಆರ್ಥಿಕ ಸಂಕಷ್ಟಸಲ್ಲಿದ್ದ ಸೈಕ್ಲಿಸ್ಟ್ : ಎಂ.ಬಿ.ಪಾಟೀಲ್ ರಿಂದ 3 ಲಕ್ಷ ರೂ. ನೆರವು


Team Udayavani, Sep 19, 2022, 5:02 PM IST

1-dsffsdfffs

ವಿಜಯಪುರ: ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಸೈಕ್ಲಿಂಗ್ ಕ್ರೀಡಾಪಟುವಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ್ ನೆರವಾಗಿದ್ದಾರೆ.

ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದ ಭಾವನಾ ಪಾಟೀಲ್ ಸೈಕ್ಲಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರುತ್ತಿದ್ದು, ಸೈಕ್ಲಿಂಗ್ ಕ್ರೀಡಾ ಕೂಟಗಳಲ್ಲಿ ಸ್ವಂತ ಸೈಕಲ್ ಇಲ್ಲದೆ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಈ ವಿಷಯ ತಿಳಿದ ಎಂ.ಬಿ. ಪಾಟೀಲ್ ಅವರು 3 ಲಕ್ಷ ರೂ. ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

ಸದ್ಯ ಭಾವನಾ ಪಾಟೀಲ್ ಸೈಕ್ಲಿಂಗ್ ತರಬೇತಿಗಾಗಿ ಮೈಸೂರಿನಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯ ತಂದೆ ಮಹಾದೇವ ಪಾಟೀಲ್ ಮತ್ತು ತಾಯಿ ಶ್ರೀದೇವಿ ಪಾಟೀಲ್ ಅವರಿಗೆ ಚೆಕ್ ವಿತರಿಸಿದರು.

”ಜಿಲ್ಲೆಯ ಪ್ರತಿಭಾವಂತ ಯುವ ಸೈಕ್ಲಿಸ್ಟ್ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲಿ” ಎಂದು ಎಂ.ಬಿ.ಪಾಟೀಲ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾವನಾ ತಂದೆ ಮಹಾದೇವ ಪಾಟೀಲ್ , ”ನಮ್ಮ ಮಗಳಿಗೆ ಸೈಕ್ಲಿಂಗ್ ಎಂದರೆ ತುಂಬಾ ಇಷ್ಟ ಅದಕ್ಕಾಗಿ ಕಠಿಣ ಅಭ್ಯಾಸ ಮಾಡುತ್ತಿದ್ದಾಳೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾನಾ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿದ್ದಾಳೆ. ಆರ್ಥಿಕ ಸಂಕಷ್ಟದಲ್ಲಿರುವ ನಮಗೆ ಆಕೆಯ ಸಾಧನೆಗೆ ಅಗತ್ಯ ಇರುವ ಉತ್ತಮ ಸೈಕಲ್ ಕೊಡಿಸಲು ಸಾಧ್ಯವಾಗದ ದುಸ್ಥಿತಿ ಎದುರಾಗಿತ್ತು. ನಮ್ಮ ಮಗಳ ಪ್ರತಿಭೆಗೆ ಪ್ರೋತ್ಸಾಹ ನೀಡಲು ಎಂ.ಬಿ.ಪಾಟೀಲ ಅವರು ದೇವರ ರೂಪದಲ್ಲಿ ಬಂದು ಸಹಾಯ ಮಾಡಿದ್ದಾರೆ. ಅವರಿಗೆ ನಮ್ಮ ಕುಟುಂಬ ಸದಾ ಋಣಿಯಾಗಿರುತ್ತದೆ” ಎಂದರು.

ಭಾವನಾ ತಾಯಿ ಶ್ರೀದೇವಿ ಪಾಟೀಲ್ ಮಾತನಾಡಿ, ”ನನ್ನ ಪತಿ ಮಹಾದೇವ ಪಾಟೀಲ್ ಪಿಕೆಪಿಎಸ್‍ನಲ್ಲಿ ಕೆಲಸ ಮಾಡುತ್ತಾರೆ. ಮೂರು ಮಕ್ಕಳ ನಮ್ಮ ಕುಟುಂಬದಲ್ಲಿ ಹಿರಿಯ ಮಗಳೇ ಭಾವನಾ. ಆಕೆಗೆ ಬಾಲ್ಯದಿಂದಲೇ ಸೈಕಲ್ ಎಂದರೆ ಇಷ್ಟ. ಈಗ ಉತ್ತಮ ಸಾಧನೆ ಮಾಡುತ್ತಿದ್ದರೂ, ಮುಂದಿನ ತಿಂಗಳು ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಸ್ವಂತ ಸೈಕಲ್ ಇರಲಿಲ್ಲ. ಹೊಸ ಸೈಕಲ್ ಕೊಡಿಸಲು ನಮ್ಮಲ್ಲಿ ಆರ್ಥಿಕ ಶಕ್ತಿ ಇರಲಿಲ್ಲ. ನಮ್ಮ ಮಗಳ ವಿಷಯ ತಿಳಿದ ಎಂ.ಬಿ.ಪಾಟೀಲ ಅವರು ನಮಗೆ 3 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದಾರೆ. ‌ ಈ ಮೂಲಕ ಸೈಕ್ಲಿಂಗ್ ಕ್ಷೇತ್ರದಲ್ಲಿ ನಮ್ಮ ಮಗಳು ಹೆಚ್ಚಿನ ಸಾಧನೆ ಮಾಡಲು ನೆರವಾಗಿದ್ದಾರೆ” ಎಂದು ಆನಂದಭಾಷ್ಪ ಸುರಿಸಿದರು.

ಬಿಎಲ್ ಡಿಇ ಮುಖ್ಯ ಆಡಳಿತಾಧಿಕಾರಿ ಡಾ.ಆರ್.‌ವಿ.‌ಕುಲಕರ್ಣಿ, ನಿರ್ದೇಶಕ ಸಂ.ಗು.ಸಜ್ಜನ, ಕ್ರೀಡಾ ನಿರ್ದೇಶಕ ಎಸ್.‌ಎಸ್.‌‌ಕೋರಿ, ಕೈಲಾಸ ಹಿರೇಮಠ, ಅಶೋಕ ಕಾಖಂಡಕಿ, ಶ್ರೀಶೈಲ ತಪಸೆ, ಸಿದ್ದರಾಯ ಪ್ರಧಾನಿ, ಈಶ್ವರಪ್ಪ ಬಂಗಾರಿ, ಹೊನಮಲಪ್ಪ ಹಟ್ಟಿ, ಈಶ್ವರ ಅಳ್ಳಗಿ, ಮಲ್ಲು ತುಂಗಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.