ರಾಜ್ಯದಲ್ಲಿ ನಡೆದಿರುವ ಹಗರಣದ ಬಗ್ಗೆ ಸದನದಲ್ಲಿ ಮಾತನಾಡಲಿದ್ದೇನೆ: ಎಚ್‌ಡಿಕೆ


Team Udayavani, Sep 19, 2022, 9:03 PM IST

ರಾಜ್ಯದಲ್ಲಿ ನಡೆದಿರುವ ಹಗರಣದ ಬಗ್ಗೆ ಸದನದಲ್ಲಿ ಮಾತನಾಡಲಿದ್ದೇನೆ: ಎಚ್‌ಡಿಕೆ

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಹಗರಣವೊಂದನ್ನು ಬಯಲಿಗೆ ತರುವ ಬಗ್ಗೆ ಸದನದಲ್ಲಿ ಮಾತನಾಡಲು ಅವಕಾಶ ಕೊಡಬೇಕು ಎಂದು ಈಗಾಗಲೇ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೇನೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬೇರೆ ಬೇರೆ ವಿಚಾರಗಳ ಚರ್ಚೆಗೆ ಅವಕಾಶ ನೀಡಲಾಗಿದ್ದ ಕಾರಣದಿಂದ ತಡವಾಗಿ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. ಬಹುಶಃ ಮಂಗಳವಾರ ಅವಕಾಶ ಸಿಗಬಹುದು ಎಂದು ತಿಳಿಸಿದರು.

ಸದನದಲ್ಲಿ ನಾನು ಪ್ರಸ್ತಾಪ ಮಾಡಲಿರುವ ವಿಷಯ ಅತ್ಯಂತ ಗಂಭೀರ ವಿಚಾರ. ಪೂರ್ಣವಾಗಿ ದಾಖಲೆಗಳನ್ನು ಇಟ್ಟುಕೊಂಡೇ ಮಾತನಾಡುತ್ತೇನೆ. ಗಾಳಿಯಲ್ಲಿ ಗುಂಡು ಹಾರಿಸೋನು, ಕುಮಾರಸ್ವಾಮಿ ಹಿಟ್‌ ಆ್ಯಂಡ್‌ ರನ್‌ ಮಾಡ್ತಾರೆ ಎಂದು ಹೇಳುವವರಿಗೆ ಉತ್ತರ ಕೊಡುತ್ತೇನೆ. ಸಾರ್ವಜನಿಕ ಹಿತಾಸಕ್ತಿ ಹೊಂದಿರುವ ಸಾವಿರಾರು ಕೋಟಿ ವ್ಯವಹಾರಕ್ಕೆ ಸಂಬಂಧಪಟ್ಟ ವಿಷಯ ಅದು. ಈ ಒಂದು ವಿಷಯದಲ್ಲಿ ಸರ್ಕಾರ ಆಘಾತಕಾರಿ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಿದರು.

ಎಸ್‌ಟಿಎಸ್‌ ರಾಜೀನಾಮೆ ನೀಡಲಿ: ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಉತ್ತಮ. ಬಿಡಿಎ ವಸತಿ ಯೋಜನೆಯೊಂದಕ್ಕೆ ಸಂಬಂಧಿಸಿದ ಲಂಚದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಸಚಿವರ ವಿರುದ್ಧ ಎಫ್ಐಆರ್‌ ದಾಖಲು ಮಾಡಿದ್ದಾರೆ. ಅಲ್ಲದೆ, ಇದರ ತನಿಖೆಗೆ ಹೈಕೋರ್ಟ್‌ ಸೂಚನೆ ಸಹ ಕೊಟ್ಟಿದೆ. ನೈತಿಕ ಹೊಣೆ ಹೊತ್ತು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಡಿ.ಕೆ. ಶಿವಕುಮಾರ್‌ ತಾವೊಬ್ಬ ರಾಜಕಾರಣಿ, ರೈತ, ಉದ್ಯಮಿ, ನನ್ನದೇ ಆದಂತಹ ವೃತ್ತಿಗಳಿವೆ. ನಾನು ಭ್ರಷ್ಟಾಚಾರ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಅವರು ಭ್ರಷ್ಟಾಚಾರ ಮಾಡದೆ ಇದ್ದಲ್ಲಿ ಇಡಿ ನೋಟಿಸ್‌ ಕೊಟ್ಟಿದ್ದರೂ ಅದಕ್ಕೆ ಅವರು ಉತ್ತರ ಕೊಡುವ ಸಾಮರ್ಥ್ಯ ಹೊಂದಿದ್ದಾರೆ. ಅದರಿಂದ ಹೊರಗೆ ಬರುವ ವಿಶ್ವಾಸ ಅವರಿಗೆ ಇದ್ದಾಗ ನಾನು ಅದರ ಬಗ್ಗೆ ಟೀಕೆ ಮಾಡೋಕೆ ಹೋಗಲ್ಲ.
-ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.