![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 19, 2022, 10:03 PM IST
ವಿಧಾನಸಭೆ: ರಾಜ್ಯದ 30 ಹೊಸ ತಾಲೂಕುಗಳಲ್ಲಿ “ತಾಲೂಕು ಆಡಳಿತ ಸೌಧ’ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಗುರುಮಿಠಕಲ್ ಶಾಸಕ ನಾಗನಗೌಡ ಕಂದಕೂರು ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 2017-18ರಿಂದ ಇಲ್ಲಿವರೆಗೆ 64 ಹೊಸ ತಾಲೂಕುಗಳನ್ನು ಘೋಷಿಸಲಾಯಿತು. ಇದರಿಂದ ರಾಜ್ಯದ ತಾಲೂಕುಗಳ ಸಂಖ್ಯೆ ಸದ್ಯ 239 ಆಗಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಹೊಸ ತಾಲೂಕುಗಳನ್ನು ರಚನೆ ಮಾಡಿರುವುದರಿಂದ ಅವುಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವುದು ಸವಾಲಿನ ಕೆಲಸವಾಗಿದೆ ಎಂದರು.
ಆದಾಗ್ಯೂ, ಹೊಸ ತಾಲೂಕುಗಳಿಗೆ ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ನಾನು ಚರ್ಚಿಸಿದ್ದೇನೆ. 30 ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದ್ದಾರೆ. ಅವಶ್ಯಕತೆ ಇರುವ ಕಡೆ ಆದ್ಯತೆಯ ಮೇಲೆ ತಾಲೂಕು ಆಡಳಿತ ಸೌಧಗಳನ್ನು ನಿರ್ಮಾಣ ಮಾಡಲಾಗುವುದು. ಅದರಲ್ಲಿ ಗುರುಮಿಠಕಲ್ ತಾಲೂಕಿಗೂ ಆದ್ಯತೆ ನೀಡಲಾಗುವುದು ಎಂದರು.
ಕೋವಿಡ್-19 ಹಿನ್ನೆಲೆಯಲ್ಲಿ ಹೊಸ ಆಡಳಿತ ಸೌಧಗಳ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ನಿರ್ಬಂಧ ಹಾಕಿದೆ. ಹೀಗಿದ್ದರೂ ಹೊಸ ತಾಲೂಕುಗಳಲ್ಲಿ ತಾಲೂಕು ಕಚೇರಿಗಳಿಗೆ ಕೊರತೆ ಆಗದಂತೆ ಪರಿಸ್ಥಿತಿ ನಿರ್ವಹಿಸಲಾಗುತ್ತಿದೆ. ಲೋಕೋಪಯೋಗಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಕಚೇರಿಗಳ ಉಪಯೋಗಕ್ಕೆ ಬಾರದ ಕಟ್ಟಡಗಳನ್ನು ಹೊಸ ತಾಲೂಕುಗಳ ಕಚೇರಿಗಳನ್ನಾಗಿ ಬಳಸಿಕೊಳ್ಳಲು ಸೂಚಿಸಲಾಗಿದೆ. ಕೆಲವು ಕಡೆ ಬಾಡಿಗೆ ಕಟ್ಟಡಗಳನ್ನೂ ಬಳಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರಿಗೆ ಆಡಳಿತಾತ್ಮಕ ಸಮಸ್ಯೆಗಳು ಆಗದಂತೆ ಕ್ರಮ ವಹಿಸಲಾಗುತ್ತಿದೆ ಎಂದು ಅಶೋಕ್ ತಿಳಿಸಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.