2 ಎ ಮೀಸಲಾತಿಗೆ ಒತ್ತಾಯಿಸಿ ಬೊಮ್ಮಾಯಿ ನಿವಾಸದ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಧರಣಿ
Team Udayavani, Sep 20, 2022, 12:56 PM IST
ಶಿಗ್ಗಾವಿ: ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸಿ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಂಡಿದ್ದು, ಇಲ್ಲಿನ ಚನ್ನಮ್ಮ ವೃತ್ತದಿಂದ ಮುಖ್ಯಮಂತ್ರಿ ನಿವಾಸದತ್ತ ಜನರು ಪ್ರತಿಭಟನಾ ಮೆರವಣಿಗೆ ಮೂಲಕ ತೆರಳುತ್ತಿದ್ದಾರೆ.
ಹಲವು ಮನವಿ ಗಡುವುಗಳ ನಂತರವೂ ಮೀಸಲಾತಿ ನೀಡುವ ಬಗ್ಗೆ ಸರಕಾರದಿಂದ ಯಾವುದೇ ಸಕರಾತ್ಮಕ ಸ್ಪಂದನೆ ದೊರೆಯದ ಕಾರಣ ಸಮಾಜದ ವತಿಯಿಂದ ಮುಖ್ಯಮಂತ್ರಿ ನಿವಾಸದ ಮುಂದೆ ಒಂದು ದಿನದ ಧರಣಿ ಹಮ್ಮಿಕೊಳ್ಳಲಾಗಿದೆ. ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಮಾಜದ ಬಾಂಧವರು ಮುಖ್ಯಮಂತ್ರಿ ನಿವಾಸದತ್ತ ತೆರಳುತ್ತಿದ್ದಾರೆ.
ಚನ್ನಮ್ಮ ವೃತ್ತದಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಹಸಿರು ಶಾಲು ಬೀಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಸರಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದರೆ. ಮೀಸಲಾತಿ ಪಡೆಯದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ:ಭಾರತ, ಪಾಕ್ ಕ್ರಿಕೆಟ್ ಪಂದ್ಯದ ಬಳಿಕ ಬ್ರಿಟನ್ ನಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ
ಶ್ರೀ ಜಯಮೃತ್ಯುಂಜ ಸ್ವಾಮೀಜಿ ಮಾತನಾಡಿ, ಶಾಸಕ ಹಾಗೂ ಸಮಾಜದ ಮುಖಂಡರಾದ ಬಸವನಗೌಡ ಪಾಟೀಲ ಯತ್ನಾಳ ಅವರು ಅಧಿವೇಶನದಲ್ಲಿ ಇದ್ದಾರೆ. ಅಲ್ಲಿ ಮುಖ್ಯಮಂತ್ರಿಗಳು ಏನು ಹೇಳುತ್ತಾರೆ ಎಂಬುವುದರ ಮೇಲೆ ಪ್ರತಿಭಟನೆ ನಿರ್ಧಾರವಾಗಲಿದೆ. ಅಕ್ಟೋಬರ್ ಕೊನೆಯ ವಾರ ಅಥವಾ ಮೊದಲ ವಾರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಮಾಜಿ ಸಚಿವ ವಿನಯ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ, ಎಚ್.ಎಸ್.ಶಿವಶಂಕರ, ಸೋಮಣ್ಣ ಬೇವಿನಮರದ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.