26ಕ್ಕೆ ರೈತರಿಂದ ವಿಧಾನಸೌಧ ಚಲೋ; ಕುರುಬೂರು ಶಾಂತಕುಮಾರ್
ಕೊರೊನಾ ಲಾಕ್ ಡೌನ್ ಅತಿವೃಷ್ಟಿ ಮಳೆ ಹಾನಿ ಸಂಕಷ್ಟದಿಂದ ನಲುಗಿದ್ದಾರೆ
Team Udayavani, Sep 20, 2022, 5:51 PM IST
ತಿ.ನರಸೀಪುರ: ವಿದ್ಯುತ್ ಕಾಯ್ದೆ ಖಾಸಗೀಕರಣ, ಪ್ರಸಕ್ತ ಸಾಲಿನ ಕಬ್ಬಿನ ಎಫ್ಆರ್‌ಪಿ ದರ ನಿಗದಿಯಲ್ಲಿ ರೈತರಿಗೆ ಕೇಂದ್ರ ಸರ್ಕಾರ ದ್ರೋಹ ಬಗೆದಿರುವ ನೀತಿಯ ವಿರುದ್ಧ ಕಬ್ಬುಬೆಳೆಗಾರು, ರೈತರು ಹಾಗೂ ಕೃಷಿ ಪಂಪ್ ಸೆಟ್ ರೈತರಿಂದ ಸೆ.26ರಂದು ಬೆಂಗಳೂರು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.
ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ನಡೆದ ರೈತರ ಸಭೆಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನ ಕಬ್ಬಿನ ಎಫ್ಆರ್‌ಪಿ ದರ ನಿಗದಿಯಲ್ಲಿ ರೈತರಿಗೆ ಕೇಂದ್ರ ಸರ್ಕಾರ ದ್ರೋಹ ಬಗೆದಿದೆ. ಕಬ್ಬು ದರ ಪುನರ್ ಪರಿಶೀಲನೆ ನಡೆಸಲು, 2022ರ ವಿದ್ಯುತ್ ಕಾಯ್ದೆ ಖಾಸಗೀಕರಣ ತಿದ್ದುಪಡಿ ಕೈಬಿಡಬೇಕು, ಕೃಷಿ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸಿ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ಕೈಬಿಡಬೇಕು ಎಂದು ಆಗ್ರಹಿಸಿದರು.
ಈ ಭಾಗದ ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಕಾನೂನುಬಾಹಿರ ವಾಗಿ ಟನ್‌ಗೆ 2,500 ರೂ. ನೀಡಿ ರೈತರನ್ನು ವಂಚಿಸುತ್ತಿದ್ದಾರೆ. ಇದರ ವಿರುದ್ಧ ಸರ್ಕಾರವನ್ನು ಒತ್ತಾಯಿಸಲು ರೈತರ ವಿಧಾನಸೌಧ ಚಲೋ ನಡೆಯಲಿದ್ದು, ದೆಹಲಿಯಲ್ಲಿ ಹೋರಾಟ ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರು ಕೂಡ ಈ ರಾಲಿಯಲ್ಲಿ ಭಾಗವಹಿಸಿ ಹೋರಾಟ ಬೆಂಬಲಿಸಿದ್ದಾರೆ ಎಂದು ತಿಳಿಸಿದರು.
ರೈತರ ಸಾಲ ಮನ್ನಾ ಮಾಡಿ:ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ತಂದು, ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು. ಕೃಷಿ ಉತ್ಪನ್ನಗಳ ಹಾಗೂ ಉಪಕರಣಗಳ ಮೇಲಿನ ಜಿಎಸ್‌ಟಿ ರದ್ದುಪಡಿಸಬೇಕು. ದೇಶದಲ್ಲಿ ಮೂರುವರೆ ಲಕ್ಷ ರೈತರು ಕೃಷಿ ಸಂಕಷ್ಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ಕೊರೊನಾ ಲಾಕ್ ಡೌನ್ ಅತಿವೃಷ್ಟಿ ಮಳೆ ಹಾನಿ ಸಂಕಷ್ಟದಿಂದ ನಲುಗಿದ್ದಾರೆ ಆದ ಕಾರಣ ದೇಶದ ಉದ್ಯಮಿಗಳ 10 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ರೀತಿಯಲ್ಲಿ, ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಪರಿಹಾರ ನೀಡುವ ಭರವಸೆ ಈಡೇರಿಸಿ: ದೆಹಲಿ ಹೋರಾಟದಲ್ಲಿ ಮಾಡಿದ 750 ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ನವಂಬರ್ ತಿಂಗಳಲ್ಲಿ ಮೂರು ಕೃಷಿ ಕಾಯ್ದೆ ರದ್ದು ಮಾಡಿದಾಗ ನೀಡಿದ ಭರವಸೆಯಂತೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವ ಭರವಸೆ ಈಡೇರಿಸಬೇಕು ಎಂದು ಆಗ್ರಹಿಸಿದರು. ಅತಿವೃಷ್ಟಿ ಮಳೆ ಹಾನಿ ಬೆಳೆನಷ್ಟ ದಿಂದ ಸಂಕಷ್ಟದಲ್ಲಿರುವ ರೈತರ ಸಾಲ ವಸೂಲಾತಿ ನಿಲ್ಲಿಸಿ ಆರ್ ಬಿಐ ನಿಯಮದಂತೆ ಇರುವ ಸಾಲದ ಮೇಲೆ ಶೇ.25ರಷ್ಟು ಹೆಚ್ಚುವರಿ ಸಾಲ ನೀಡಬೇಕು. ರಾಜ್ಯದಲ್ಲಿ ಜಾರಿ ಮಾಡಿರುವ ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂಬ ಒತ್ತಾಯಗಳ ಬಗ್ಗೆ ರೈತರ ಬೃಹತ್ ರ್ಯಾಲಿ ವಿಧಾನಸೌಧ ಚಲೋ ನಡೆಸಲಾಗುವುದು ಎಂದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಜಿಲ್ಲಾ ಕಾರ್ಯ ದರ್ಶಿ ಕಿರಗಸೂರು ಶಂಕರ್, ಬರಡನಪುರ ನಾಗರಾಜ…, ಕಿರಗಸೂರುಪ್ರಸಾದ್ ನಾಯಕ್, ಅಪ್ಪಣ್ಣ, ವಾಚ್ ಕುಮಾರ್, ಲಿಂಗರಾಜು, ಹಿರಿಯೂರು ಬನವೀನ್ ಜಾಲಹಳ್ಳಿ ಗಿರೀಶ್, ಸೊಮಶೇಖರ್ ಶಂಭುಲಿಂಗಪ್ಪ, ರವೀಶ್, ರವಿ, ಸುರೇಶ್, ಕುಮಾರ್, ತರಕಾರಿ ನಿಂಗರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.