ಆಲಮಟ್ಟಿ: ಟೆಂಡರ್ ಪ್ಯಾಕೇಜ್ ಪದ್ದತಿಗೆ ವಿರೋಧ
Team Udayavani, Sep 21, 2022, 6:08 PM IST
ಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದವತಿಯಿಂದ ಕರೆಯಲಾಗುತ್ತಿರುವ ಕಾಮಗಾರಿಗಳ ಟೆಂಡರ್‌ನ ಪ್ಯಾಕೇಜ್ ಪದ್ದತಿ ವಿರೋಧಿಸಿ ಆಲಮಟ್ಟಿ ಕೃಷ್ಣಾತೀರ ಗುತ್ತಿಗೆದಾರರ ಸಂಘದ ವತಿಯಿಂದ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.
ಮಂಗಳವಾರ ಮಧ್ಯಾಹ್ನ ಕೃಷ್ಣಾ ತೀರ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಲಕಾಜಪ್ಪ ಮೇಟಿ ಅವರ ನೇತೃತ್ವದಲ್ಲಿ ಕೆಬಿಜೆನ್ನೆಲ್ ಮುಖ್ಯ ಅಭಿಯಂತರರ ಕಚೇರಿವರೆಗೆ ತೆರಳಿ ಮನವಿ ಸಲ್ಲಿಸಿ ಮಾತನಾಡಿದ ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷ ಸಿ.ಬಿ.ಅಸ್ಕಿ, ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ ಜನತೆ ಮನೆ-ಮಠ, ಜಮೀನುಗಳನ್ನು ತ್ಯಾಗಮಾಡಿದ್ದಾರೆ. ನಾರಾಯಣಪುರದ ಬಸವಸಾಗರ ಮತ್ತು ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಗಳ ಹಿನ್ನೀರಿಗಾಗಿ ನೂರಾರು ಗ್ರಾಮಗಳ ಜನರು ತಮ್ಮ ಆಸ್ತಿ-ಪಾಸ್ತಿ ಕಳೆದುಕೊಂಡು ನಿರಾಶ್ರಿತ ಸಂತ್ರಸ್ತರಾಗಿದ್ದಾರೆ. ಅವರಲ್ಲಿ ಕೆಲವರು ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದಾರೆ. ಬೃಹತ್ ಮೊತ್ತದ ಒಂದೊಂದು ಪ್ಯಾಕೇಜ್ ಟೆಂಡರ್ ಕರೆಯುತ್ತಿರುವದರಿಂದ ಈ ಭಾಗದ ಗುತ್ತಿಗೆದಾರರು ನಿರುದ್ಯೋಗಿಗಳಾಗುವಂತಾಗಿದೆ ಎಂದು ಆರೋಪಿಸಿದರು.
ಕೃಷ್ಣಾ ಭಾಗ್ಯ ಜಲ ನಿಗಮದ ಆಲಮಟ್ಟಿ ವಲಯದಲ್ಲಿ ಕರೆಯಾಗಿರುವ ಸಿಸಿ ರಸ್ತೆ, ವಿತರಣಾ ಕಾಲುವೆ, ಅಚ್ಚುಕಟ್ಟು ರಸ್ತೆಗಳು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಒಂದುಗೂಡಿಸಿ 30ರಿಂದ40ಕೋಟಿ ರೂ.ಗಳ ಮೊತ್ತದಲ್ಲಿ ಟೆಂಡರ್ ಕರೆಯುತ್ತಿರುವದರಿಂದ ನೂರಾರು ಗುತ್ತಿಗೆದಾರರು ನಿರುದ್ಯೋಗ ಸಮಸ್ಯೆ ಎದುರಿಸಲಿದ್ದಾರೆ ಎಂದು ಹೇಳಿದರು.
ಬೇರೆ ಬೇರೆ ಅಂದಾಜು ಪತ್ರಿಕೆಗಳನ್ನು ಒಂದುಗೂಡಿಸಿ ಟೆಂಡರ್ ಕರೆಯಬಾರದು ಎಂದು ಸರ್ಕಾರದ ಸ್ಪಷ್ಟ ನಿರ್ದೇಶನವಿದ್ದರೂ ಅಧಿಕಾರಿಗಳು ಕೆಲವೇ ಜನ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸಲು ಪ್ಯಾಕೇಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲದೇ ಬೇರೆ ವಿಧದ ಕಾಮಗಾರಿಗಳಿದ್ದರೂ ಅವುಗಳನ್ನು ಒಂದುಗೂಡಿಸಿದ್ದಾರೆ. ವಿತರಣಾ ಕಾಲುವೆಗಳಲ್ಲಿಯೂ ಬೇರೆ ಬೇರೆ ಕಿ.ಮೀ.ಗಳಲ್ಲಿ ಕಾಮಗಾರಿಗಳಿದ್ದರೂ ಅವುಗಳನ್ನೂ ಕೂಡ ಒಂದುಗೂಡಿಸಿದ್ದಾರೆ. ಹೀಗೆ ವ್ಯವಸ್ಥಿತವಾಗಿ ಸಣ್ಣ ಗುತ್ತಿಗೆದಾರರನ್ನು ಕಾಮಗಾರಿಗಳಿಂದ ಮುಕ್ತ ಮಾಡುವ ಹುನ್ನಾರ ಅಡಗಿದೆ ಎಂದು ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು.
ಗುತ್ತಿಗೆದಾರ ಸಿ.ಜಿ.ವಿಜಯಕರ ಮಾತನಾಡಿ, ಇತ್ತೀಚೆಗೆ ಆಲಮಟ್ಟಿ ಎಡದಂಡೆ ಕಾಲುವೆ ವಿಭಾಗದಲ್ಲಿ ಕರೆಯಲಾಗಿರುವ ಕಾಮಗಾರಿಗಳಿಗೆ ಹಳೆಯ ದರವನ್ನು ನಿಗದಿಪಡಿಸಲಾಗಿದೆ. ಅದನ್ನು ಹೊಸ ದರಕ್ಕೆ ಮಾರ್ಪಡಿಸಿ ಸಣ್ಣ ಗುತ್ತಿಗೆದಾರರಿಗೂ ಕಾಮಗಾರಿ ನಿರ್ವಹಿಸುವಂತೆ ಟೆಂಡರ್ ಕರೆಯಬೇಕು ಎಂದರು.
ಸಂಘದ ಅಧ್ಯಕ್ಷ ಮಲಕಾಜಪ್ಪ ಮೇಟಿ ಮಾತನಾಡಿ, ಕೃಷ್ಣಾ ಭಾಗ್ಯ ಜಲ ನಿಗಮದ ಆಲಮಟ್ಟಿ ವಲಯ ಮುಖ್ಯ ಅಭಿಯಂತರರ ಕಚೇರಿ ವ್ಯಾಪ್ತಿಯಲ್ಲಿ ಬರುವ ವಿವಿಧ ವಿಭಾಗಗಳಲ್ಲಿ ಕರೆಯಲಾಗಿರುವ ಪ್ಯಾಕೇಜ್ ಟೆಂಡರ್ ಪದ್ದತಿಯನ್ನು ರದ್ದುಗೊಳಿಸಬೇಕು ಮತ್ತು ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನಿರ್ವಹಿಸಲು ಅನುಕೂಲವಾಗುವಂತೆ ಟೆಂಡರ್ ಕರೆಯಬೇಕು. ಈಗ ಕರೆಲಾಗಿರುವ ಪ್ಯಾಕೇಜ್ ಟೆಂಡರ್ ಪದ್ದತಿಯನ್ನು ಕೈಬಿಡಬೇಕು ಇಲ್ಲದಿದ್ದರೆ ಮುಖ್ಯ ಅಭಿಯಂತರರ ಕಚೇರಿಯ ಆವರಣದಲ್ಲಿ ಅರ್ನಿಷ್ಠ ಧರಣಿ ಸತ್ಯಾಗ್ರಹ ನಡೆಸಲಾಗುವದು ಎಂದು ಎಚ್ಚರಿಕೆ ನೀಡಿದರು.
ಮನವಿಯನ್ನು ಉಪಮುಖ್ಯ ಅಭಿಯಂತರ ಡಿ.ಸುರೇಶ ಸ್ವೀಕರಿಸಿದರು. ರಾಯನಗೌಡ ತಾತರಡ್ಡಿ, ಜೆ.ಟಿ.ಇಲಕಲ್ಲ, ಎಚ್.ಟಿ.ಕುರಿ, ಎಸ್.ಐ.ಹಿರೇಮಠ, ಬಿ.ಪಿ.ರಾಠೊಡ, ವೈ.ವೈ.ಬಿರಾದಾರ, ಎಸ್.ಎಲ್.ಲಮಾಣಿ, ಪಿ.ಎಸ್ .ಬಯಾಪುುರ, ವೆಂಕಟೇಶ ನಾಯಕ, ಬಿ.ವಿ.ಮೈಲೇಶ್ವರ, ವೈ. ವೈ.ಚಲವಾದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.