![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 21, 2022, 8:13 PM IST
ಮಂಡ್ಯ: ಮಗಳು ಪ್ರೇಮ ವಿವಾಹವಾದ ಮಾಡಿಕೊಂಡ ಹಿನ್ನೆಲೆಯಲ್ಲಿ ಮನನೊಂದ ಯುವತಿಯ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಿ.ಬಾಚಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಇದನ್ನೂ ಓದಿ:”ಸತ್ಯ” ಶೀಘ್ರದಲ್ಲೇ ಹೊರ ಬರಲಿದೆ… ಜೈಲಿನಿಂದ ಹೊರ ಬಂದ ವರ್ಷದ ಬಳಿಕ ರಾಜ್ ಕುಂದ್ರಾ
ಗ್ರಾಮದ ಪ್ರಗತಿಪರ ರೈತ ರವಿ(47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಮುಂದೆ ಮೃತ ರವಿ ಶವವಿಟ್ಟುಕೊಂಡು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಲೇಜು ವ್ಯಾಸಂಗ ಮಾಡುತ್ತಿದ್ದ ಪುತ್ರಿ ಕಳೆದ ಐದು ದಿನಗಳ ಹಿಂದೆಯೇ ಅದೇ ಗ್ರಾಮದ ಯುವಕನೊಂದಿಗೆ ವಿವಾಹವಾಗಿದ್ದಾಳೆ. ಇದರಿಂದ ಬೇಸತ್ತ ತಂದೆ ರವಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮನೆಯ ಗೌರವ ಕಳೆದು ನಮಗೆ ಮೋಸ ಮಾಡಿ ಹೋಗಿರುವ ಮಗಳನ್ನು ಬಂಧಿಸಿ ತರುವಂತೆ ಒತ್ತಾಯಿಸಿ ಬಿ.ಬಾಚಹಳ್ಳಿ ಗ್ರಾಮಸ್ಥರಿಂದ ಮೃತ ರವಿ ಅವರ ಶವವಿಟ್ಟುಕೊಂಡು ಗ್ರಾಮಾಂತರ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. ಕಳೆದ ಐದು ದಿನಗಳ ಹಿಂದೆಯೇ ನಾಪತ್ತೆಯಾಗಿರುವ ಮಗಳನ್ನು ಹುಡುಕಿಕೊಡುವಂತೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಇದರಿಂದ ಗ್ರಾಮಾಂತರ ಪೋಲಿಸ್ ಠಾಣೆಯ ಮುಂದೆ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ಶೀಘ್ರವೇ ಮನೆ ಬಿಟ್ಟು ಓಡಿ ಹೋಗಿರುವ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಪೋಲಿಸ್ ಇನ್ಸ್‌ಪೆಕ್ಟರ್ ಕೆ.ಎಸ್.ನಿರಂಜನ ಅವರ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದು ಶವವನ್ನು ಗ್ರಾಮಕ್ಕೆ ಕೊಂಡೊಯ್ದದರು. ಸ್ಥಳಕ್ಕೆ ಎಸ್ಪಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.