ಕೇಂದ್ರದ “ಪ್ರಣಾಮ್‌ ‘ ಏನಿದು ಯೋಜನೆ? ಯಾವಾಗ ಜಾರಿ?

Team Udayavani, Sep 22, 2022, 8:40 AM IST

ಕೇಂದ್ರದ “ಪ್ರಣಾಮ್‌ ‘ ಏನಿದು ಯೋಜನೆ? ಯಾವಾಗ ಜಾರಿ?

ಕೃಷಿಯಲ್ಲಿ ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕು ಎಂಬ ಉದ್ದೇಶದಿಂದ ಕೇಂದ್ರ ಸರಕಾರ ಪ್ರಣಾಮ್‌ ಎಂಬ ಯೋಜನೆಯನ್ನು ಪರಿಚಯ ಮಾಡಲು ಮುಂದಾಗಿದೆ. ರಸಗೊಬ್ಬರದ ಮೇಲಿನ ಸಬ್ಸಿಡಿ ಹೊರೆಯನ್ನು ಕಡಿಮೆ ಮಾಡಿಕೊಳ್ಳಬೇಕು ಎಂಬುದು ಇದರ ಪ್ರಮುಖ ಉದ್ದೇಶ ಎಂದೇ ವಿಶ್ಲೇಷಿಸಲಾಗಿದೆ. ಹಾಗಾದರೆ ಏನಿದು ಪ್ರಣಾಮ್‌ ಯೋಜನೆ?

ಪಿಎಂ-ಪ್ರಣಾಮ್‌ ಯೋಜನೆ
ಪ್ರಧಾನಮಂತ್ರಿ ಕೃಷಿ ನಿರ್ವಹಣೆಯಲ್ಲಿ ಪರ್ಯಾಯ ಪೋಷಕಾಂಶಗಳ ಉತ್ತೇಜನ(ಪಿಎಂ-ಪ್ರಣಾಮ್‌) ಯೋಜನೆಯನ್ನು ದೇಶದಲ್ಲಿ ರಸಗೊಬ್ಬರ ಪ್ರಮಾಣವನ್ನು ಕ‚ಡಿಮೆ ಮಾಡಬೇಕು ಎಂಬ ಉದ್ದೇಶದಿಂದ ರೂಪಿಸಲಾಗಿದೆ. ಮೂಲಗಳು ಹೇಳುವಂತೆ, ಸದ್ಯದಲ್ಲೇ ಇದು ಜಾರಿಗೆ ಬರಲಿದೆ. ವರ್ಷವೊಂದರಲ್ಲಿ ಕಡಿಮೆ ರಸಗೊಬ್ಬರ ಬಳಕೆ ಮಾಡುವ ರಾಜ್ಯಕ್ಕೆ ಇನ್‌ಸೆಂಟೀವ್‌ ನೀಡಲಾಗುತ್ತದೆ. ಜತೆಗೆ ಮೂರು ವರ್ಷಗಳ ಅಂದಾಜು ತೆಗೆದುಕೊಂಡು, ಕಡಿಮೆ ರಸಗೊಬ್ಬರ ಬಳಕೆ ಮಾಡಿದ್ದರೆ ಅದಕ್ಕೂ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಯೋಜನೆಯ ಜಾರಿ ಉದ್ದೇಶವೇನು?
ಕೇಂದ್ರದ ಖಜಾನೆ ಮೇಲಿನ ಹೊರೆ ತಪ್ಪಿಸುವುದೇ ಇದರ ಪ್ರಮುಖ ಉದ್ದೇಶ. ಭಾರತದಲ್ಲಿ ಮುಖ್ಯವಾಗಿ ಯೂರಿಯಾ, ಡಿಎಪಿ, ಎಂಬಿಪಿ, ಎನ್‌ಪಿಕೆಎಸ್‌ ಅನ್ನು ಹೆಚ್ಚಾಗಿ ಬಳಕೆ ಮಾಡಲಾಗುತ್ತಿದೆ. 2017-18ರಿಂದ 2021-22ರ ಅವಧಿಯಲ್ಲಿ ಈ ರಸಗೊಬ್ಬರದ ಬಳಕೆ ಪ್ರಮಾಣ ಶೇ.21ರಷ್ಟು ಹೆಚ್ಚಾಗಿದೆ. ಬಳಕೆ ಪ್ರಮಾಣ ಹೆಚ್ಚಾದಂತೆ, ಕೇಂದ್ರ ನೀಡಬೇಕಾಗಿರುವ ಸಬ್ಸಿಡಿ ಪ್ರಮಾಣವೂ ಹೆಚ್ಚಾಗುತ್ತದೆ. ಅಂದರೆ, ಕಳೆದ ವರ್ಷ ರಸಗೊಬ್ಬರ ಸಬ್ಸಿಡಿಗಾಗಿ ಕೇಂದ್ರ ಸರಕಾರ 1.62 ಲಕ್ಷ ಕೋಟಿ ರೂ. ವ್ಯಯ ಮಾಡಿತ್ತು. ಈ ವರ್ಷ 2.25 ಲಕ್ಷ ಕೋಟಿ ರೂ. ವ್ಯಯಿಸಲಾಗುತ್ತಿದೆ. ಈ ಹೊರೆಯನ್ನು ತಪ್ಪಿಸುವ ಉದ್ದೇಶ ಕೇಂದ್ರದ್ದು.

ಯಾವಾಗ ಜಾರಿ?
ಸೆ.7ರಂದು ನಡೆದ ಸಭೆಯಲ್ಲಿ ಇದರ ಪ್ರಸ್ತಾವವಾಗಿದೆ. ಅಂತರ ಸಚಿವಾಲಯಗಳ ನಡುವಿನ ಚರ್ಚೆ ಬಳಿಕ ಇದನ್ನು ಜಾರಿಗೊಳಿಸ ಬಹುದು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.