ಗುರುವಾರದ ರಾಶಿ ಭವಿಷ್ಯ : ಯಾವ ರಾಶಿಗೆ ಲಾಭ… ಯಾವ ರಾಶಿಗೆ ನಷ್ಟ…?
Team Udayavani, Sep 22, 2022, 7:13 AM IST
ಮೇಷ: ಆರೋಗ್ಯ ಗಮನಿಸಿ. ಕೆಲಸ ಕಾರ್ಯಗಳಲ್ಲಿ ಪ್ರಗತಿಗೆ ಅಡ್ಡಿ ಆತಂಕಗಳು. ವಿಘ್ನ ಅಡಚಣೆ ಆಗದಂತೆ ಸರಿಯಾಗಿ ವಿಚಾರ ಮಾಡಿ ಪ್ರವೃತ್ತರಾಗಿ. ಪರರ ಸಂಪತ್ತನ್ನು ವಿನಿಯೋಗಿಸುವಾಗ ಜಾಗ್ರತೆ ವಹಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗುರುಹಿರಿಯರ ಸಲಹೆಯಿಂದ ಯಶಸ್ಸು.
ವೃಷಭ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನ್ಯರ ಮಾತನ್ನು ಅವಲಂಬಿಸುವಾಗ ನಿಮ್ಮತನವನ್ನು ಕಳೆದುಕೊಳ್ಳದೇ ಕಾರ್ಯ ಪ್ರವೃತ್ತರಾಗಿರಿ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನವ್ಯಯ.
ಮಿಥುನ: ಮಕ್ಕಳಿಂದ ಸುಖ. ಬಂಧುಜನರೊಂದಿಗೆ ವಿಲಾಸ. ಸ್ಥಾನಮಾನ ಪದವಿ ವೃದ್ಧಿ. ಶ್ರೇಯಸ್ಕರ ಕಾರ್ಯಗಳಿಂದ ಜನಮನ್ನಣೆ. ಆಚಾರ ವಿಚಾರಗಳಲ್ಲಿ ತಲ್ಲೀನತೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದರಿಂದ ಸಂತೋಷ.
ಕರ್ಕ: ದೇವತಾರಾಧನೆಯಿಂದ ನೆಮ್ಮದಿ ಲಭಿಸೀತು. ಅನಾವಶ್ಯಕ ಸಂಚಾರಕ್ಕೆ ಆಸ್ಪದ ನೀಡದಿರಿ. ಅನ್ಯರ ವಿಚಾರದಲ್ಲಿ ಭಾಗಿಯಾಗದಿರಿ. ಆದಷ್ಟು ವಿಶ್ರಾಂತಿ ಪಡೆದು ದೈಹಿಕ ಮಾನಸಿಕ ಸುಖ ಅನುಭವಿಸಲು ಪ್ರಯತ್ನಿಸಿ.
ಸಿಂಹ: ಆರೋಗ್ಯ ಗಮನಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ಸುಖ ಕಾಣಿರಿ. ಸ್ತ್ರೀಪುರುಷರು ಪರಸ್ಪರರ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪ್ರಾಮಾಣಿಕತೆಗೆ ಆದ್ಯತೆ ನೀಡಿ. ಅನಾವಶ್ಯಕ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ಕನ್ಯಾ: ಆರೋಗ್ಯ ಉತ್ತಮ. ಕುಟುಂಬ ಸುಖ. ಸಭೆ ಸಮಾರಂಗಳಲ್ಲಿ ಭಾಗವಹಿಸುವಿಕೆ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನಾರ್ಜನೆ. ಸಾಮಾಜಿಕ ಸುಖ ಪ್ರಾಪ್ತಿಗಾಗಿ ಹಿತೋಕ್ತಿ ಬೋಧನೆ. ದಾಂಪತ್ಯ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲ.
ತುಲಾ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯ ಶೈಲಿ. ಸ್ವಾರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದವಾಗದೆ ದೂರದ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ಮಾನಸಿಕ ನೆಮ್ಮದಿ.
ವೃಶ್ಚಿಕ: ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ. ಗುರುಹಿರಿಯರಿಂದ ಉತ್ತಮ ಅಧಿಕೃತ ಸಹಕಾರ ಬೆಂಬಲ.
ಧನು: ಕೆಲಸ ಕಾರ್ಯಗಳಲ್ಲಿ ಚಾಣಾಕ್ಯತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪ್ರಗತಿಪರ ಬದಲಾವಣೆ. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಆರೋಗ್ಯ ಸ್ಥಿರ. ಸರಕಾರೀ ಕಾರ್ಯಗಳಲ್ಲಿ ಪ್ರಗತಿ. ಮಿತ್ರರಿಂದ ಸಹಾಯ.
ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಣುರ ವರ್ತನೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಆತುರದ ನಿರ್ಧಾರ ಮಾಡದಿರಿ.
ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ.
ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಅಧ್ಯಯನದಲ್ಲಿ ತಲ್ಲೀನತೆಯಿಂದ ಮಾನಸಿಕ ತೃಪ್ತಿ. ಸಾಂಸಾರಿಕ ಸುಖ ತೃಪ್ತಿ. ದೇವತಾ ಸ್ಥಳ ಸಂದರ್ಶನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು