![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 22, 2022, 2:39 PM IST
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳನ್ನು ಹತ್ತು ದಿನಗಳ ಕಾಲ ವಿಚಾರಣೆ ನಡೆಸಿದ ನಂತರ ಗುರುವಾರ (ಸೆಪ್ಟೆಂಬರ್ 22) ತೀರ್ಪನ್ನು ಕಾಯ್ದಿರಿಸಿದೆ.
ಇದನ್ನೂ ಓದಿ:ಹೈದರಾಬಾದ್: ಟಿ 20 ಕ್ರಿಕೆಟ್ ಪಂದ್ಯದ ಟಿಕೆಟ್ ಗಾಗಿ ನೂಕು ನುಗ್ಗಲು ; ಲಾಠಿ ಪ್ರಹಾರ
ಕರ್ನಾಟಕದಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಹಲವು ಅರ್ಜಿ ಸಲ್ಲಿಕೆಯಾಗಿತ್ತು.
ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ಕಾಲ ನಡೆದ ವಿಚಾರಣೆಯಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕರ್ನಾಟಕದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಾಗರಾಜ್ ವಾದ ಮಂಡಿಸಿದ್ದರು. ಮುಸ್ಲಿಮ್ ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ದುಷ್ಯಂತ್ ದವೆ ಮತ್ತು ಸಲ್ಮಾನ್ ಖುರ್ಷಿದ್ ಪ್ರತಿವಾದ ಮಂಡಿಸಿದ್ದರು.
ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಮಾರ್ಚ್ 15ರಂದು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ, ಹಿಜಾಬ್ ಧರಿಸುವುದು ಇಸ್ಲಾಂನ ಧಾರ್ಮಿಕ ಸಂಪ್ರದಾಯದಲ್ಲಿನ ಅತ್ಯಗತ್ಯ ಭಾಗವಲ್ಲ ಎಂದು ತಿಳಿಸಿತ್ತು.
ಕರ್ನಾಟಕ ಸರ್ಕಾರದ ವಾದವೇನು?
“ಹಿಜಾಬ್ ಅನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ ಎಂಬಂತೆ ಆರೋಪಗಳನ್ನು ಮಾಡಲಾಗುತ್ತಿದೆ. ಇಂದು ನಾನು ಒಂದು ವಿಚಾರವನ್ನು ಸ್ಪಷ್ಟಪಡಿಸುತ್ತೇನೆ. ಅದೇನೆಂದರೆ, ರಾಜ್ಯ ಸರಕಾರ ಹಿಜಾಬ್ ಅನ್ನು ನಿಷೇಧಿಸಿಲ್ಲ. ನಿಷೇಧಿಸುವ ಉದ್ದೇಶವೂ ಇಲ್ಲ. ಸರಕಾರವು ಧಾರ್ಮಿಕವಾಗಿ ನಿಷ್ಪಕ್ಷವಾದಂಥ ಸಮವಸ್ತ್ರವನ್ನು ನಿಗದಿಪಡಿಸಿದೆ ಅಷ್ಟೆ.’ ಎಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣದ ವಿಚಾರಣೆ ವೇಳೆ ಸರಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ವಾದ ಮಂಡಿಸಿದ್ದರು.
ಇದೇ ವೇಳೆ, “ಶಾಲೆ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿದರೆ, ಇತರ ವಿದ್ಯಾರ್ಥಿಗಳನ್ನು ವೈವಿಧ್ಯಕ್ಕೆ ತೆರೆದುಕೊಳ್ಳಲು ಹಾಗೂ ಸಾಂಸ್ಕೃತಿಕವಾಗಿ ಸಂವೇದನಾಶೀಲರಾಗಲು ಅನುವು ಮಾಡಿಕೊಡುತ್ತದೆಯಲ್ಲವೇ’ ಎಂದು ನ್ಯಾಣ ಸುಧಾಂಶು ಧುಲಿಯಾ ಪ್ರಶ್ನಿಸಿದ್ದರು.
You seem to have an Ad Blocker on.
To continue reading, please turn it off or whitelist Udayavani.