ಆತ್ಮಾವಲೋಕನ ಮಾಡಿಕೊಳ್ಳಿ: ಉಭಯ ಸದನದಲ್ಲಿ ಅನುರಣಿಸಿದ ‘ಪೇಸಿಎಂ’ ವಿವಾದ
ಪೇಸಿಎಂ ಮಾಸ್ಕ್ ಧರಿಸಿ ಬಂದ ಕಾಂಗ್ರೆಸ್ ಸದಸ್ಯರು
Team Udayavani, Sep 22, 2022, 3:03 PM IST
ಬೆಂಗಳೂರು : ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಆರಂಭಿಸಿದ್ದ ” ಪೇಸಿಎಂ” ವಿವಾದ ವಿಧಾನಮಂಡಲದ ಉಭಯ ಸದನಗಳಲ್ಲಿ ಅನುರಣಿಸಿದ್ದು, ಒಬ್ಬ ಮುಖ್ಯಮಂತ್ರಿಯ ವಿರುದ್ಧ ಇಂಥ ಅಭಿಯಾನ ನಡೆಸಿದ್ದಕ್ಕಾಗಿ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಂಸದ ಜೆ.ಸಿ.ಮಾಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಪೊಲೀಸ್ ಕ್ರಮದ ಹಿಂದೆ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣನೆ: ಆರಗ ಜ್ಞಾನೇಂದ್ರ
ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಅಭಿಯಾನ ಮಾಡುವುದು ಸರಿಯಲ್ಲ. ಇಂದು ನಾವು ಅಧಿಕಾರದಲ್ಲಿದ್ದೇವೆ, ನಾಳೆ ನೀವು ಬರಬಹುದು. ಆದರೆ ಮಾನಹಾನಿಕಾರಕ ಅಭಿಯಾನಕ್ಕೂ ಒಂದು ಮಿತಿ ಇರುತ್ತದೆ. ಹೀಗಾಗಿ ಇದೆಲ್ಲದಕ್ಕೂ ಒಂದು ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದೆ ಎಂದು ಮಾಧುಸ್ವಾಮಿ ಅಭಿಪ್ರಾಯಪಟ್ಟರು.
ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರು ಪೇಸಿಎಂ ಮಾಸ್ಕ್ ಧರಿಸಿ ಬಂದು ಸಭಾಪತಿ ಪೀಠದ ಎದುರು ಪ್ರತಿಭಟನೆ ನಡೆಸಿದರು. ಅದೇ ವೇಳೆ ಕೆಲ ವಿಧೇಯಕಗಳನ್ನು ಪಾಸ್ ಮಾಡಿಕೊಳ್ಳಲಾಯಿತು. ಕಾಂಗ್ರೆಸ್ ವಿರುದ್ಧ ಬಿಜೆಪಿ ಸದಸ್ಯರು ಭಿತ್ತಿಪತ್ರ ಪ್ರದರ್ಶನ ಮಾಡಿದರು. ಇನ್ನೊಂದೆಡೆ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಪಿ.ರಾಜೀವ್ ಈ ವಿಚಾರ ಪ್ರಸ್ತಾಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.
ಕಾಂಗ್ರೆಸ್ ಚಿತಾವಣೆಯಿಂದಲೇ ಈ ಕೃತ್ಯ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಮಾಜಿ ಸಚಿವ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಉಭಯ ಪಕ್ಷಗಳ ಶಾಸಕರು ವಾದ- ವಿವಾದದಲ್ಲಿ ತೊಡಗಿದರು.ಕೊನೆಗೆ ಮಾಧುಸ್ವಾಮಿ ಮಧ್ಯ ಪ್ರವೇಶಿಸಿ ಸಿಎಂ ವಿರುದ್ಧ ಮಾನಹಾನಿಕರ ಭಿತ್ತಿಪತ್ರ ಹಂಚಿದ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.