“ಪೇ ಸಿಎಂ’ ಅಧಿಕೃತಗೊಳಿಸಲು ಮುಂದಾದ ರಾಜ್ಯ ಸರ್ಕಾರ
Team Udayavani, Sep 23, 2022, 6:40 AM IST
ವಿಧಾನ ಪರಿಷತ್ತು: ಕೇವಲ ಒಂದು ದಿನದ ಹಿಂದೆ ತೀವ್ರ ಸದ್ದು ಮಾಡಿದ್ದ “ಪೇ ಸಿಎಂ’ ಅನ್ನು ಈಗ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ!
ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ “ಪೇ ಸಿಎಂ’ ಡಿಜಿಟಲ್ “ಪೇ ಟು ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ (ಸಿಎಂಆರ್‌ಎಫ್) ಎಂಬ ಡಿಜಿಟಲ್ ಆ್ಯಪ್ ಅಭಿವೃದ್ಧಿಪಡಿಸಿ, ಆ ಮೂಲಕ ಅಧಿಕೃತಗೊಳಿಸಲು ಮುಂದಾಗಿದೆ. ಇದರೊಂದಿಗೆ ಸರ್ಕಾರದ ವಿರುದ್ಧದ ಅಭಿಯಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಲೆಕ್ಕಾಚಾರ ಇದಾಗಿದೆ ಎಂದು ಮೂಲಗಳು ತಿಳಿಸಿವೆ.
“ಪೇ ಸಿಎಂ’ ಹೆಸರಿನಡಿ ಡಿಜಿಟಲ್ ಆ್ಯಪ್ ಅಭಿವೃದ್ಧಿಪಡಿಸಿ, ಆ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ನೆರವು ನೀಡಲು ಅನುವಾಗುವಂತೆ ಸ್ವತಃ ಆಡಳಿತ ಪಕ್ಷದ ಸದಸ್ಯ ಎಂ.ಕೆ. ಪ್ರಾಣೇಶ್ ಸಭಾಪತಿಗಳಿಗೆ ಗುರುವಾರ ಮನವಿ ಮಾಡಿದ್ದಾರೆ. ಇದಕ್ಕೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ನಗರದ ಹಲವೆಡೆ “ಪೇ ಸಿಎಂ’ ಎಂಬ ಅಭಿಯಾನದಡಿ ಪೋಸ್ಟರ್ ಅಂಟಿಸಿ ಮುಖ್ಯಮಂತ್ರಿಗಳಿಗೆ ಅವಮಾನ ಮಾಡಿರುವುದು ತೀವ್ರ ಖಂಡನೀಯ. ಆದರೆ, 21ನೇ ಶತಮಾನವು ಡಿಜಿಟಲ್ ಯುಗವಾಗಿ ಬದಲಾಗಿದ್ದು, ಪ್ರಸ್ತುತ ಡಿಜಿಟಲ್ ತಂತ್ರಜ್ಞಾನವು ತನ್ನ ಬೇರುಗಳನ್ನು ಗಟ್ಟಿಮಾಡಿಕೊಳ್ಳುತ್ತ ಸಾಗುವುದರಲ್ಲಿ ಅನುಮಾನವಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಡಿಜಿಟಲ್ ಮಾಡುವ ಮೂಲಕ “ಪೇಸಿಎಂ’ ಅನ್ನು ಪೇ ಟು ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ (ಸಿಎಂಆರ್‌ಎಫ್) ಎಂಬ ಹೆಸರಿನಲ್ಲಿ ಕಿಯೋನಿಕ್ಸ್‌ನಂತಹ ಸಂಸ್ಥೆ ವತಿಯಿಂದ ಒಂದು ಡಿಜಿಟಲ್ ಪಾವತಿ ವ್ಯವಸ್ಥೆಯ ಆ್ಯಪ್ ಸಿದ್ಧಪಡಿಸಿ, ಆ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯದ ಸಾರ್ವಜನಿಕರು, ಸಂಘ-ಸಂಸ್ಥೆಗಳು ತಮ್ಮ ಕೈಲಾದಷ್ಟು ದೇಣಿಗೆ ನೀಡಿ, ಸಂಕಷ್ಟದಲ್ಲಿರುವ ಬಡ ಕುಟುಂಬಗಳ ನೆರವಿಗೆ ಧಾವಿಸಲು ಅವಕಾಶ ಕಲ್ಪಿಸಿಕೊಟ್ಟಂತಾಗಲಿದೆ ಎಂದು ಪ್ರಾಣೇಶ್ ಮನವಿಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯದ ಐಟಿ-ಬಿಟಿ ಕಂಪೆನಿಗಳಿಂದ ಕಾರ್ಪೋರೇಟ್-ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್), ದಾನಿಗಳಿಂದ ದೇಣಿಗೆ ಸಂದಾಯ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.