![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Sep 23, 2022, 6:20 AM IST
ಬೆಂಗಳೂರು: ಹಲವು ವರ್ಷದಿಂದ ಚರ್ಚೆಯಲ್ಲಿದ್ದ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ (ಪಿಯು ಬೋರ್ಡ್) ವಿಲೀನಕ್ಕೆ ಸಂಬಂಧಿಸಿ 2022ನೇ ಸಾಲಿನ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ) ಮಸೂದೆಗೆ ಅನುಮೋದನೆ ದೊರೆಯಿತು.
ಮಸೂದೆ ಮಂಡಿಸಿ ವಿಷಯ ಪ್ರಸ್ತಾವಿಸಿದ ಸಚಿವ ಬಿ.ಸಿ.ನಾಗೇಶ್, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಕಾರ್ಯಭಾರ ಇಳಿಸುವ ಉದ್ದೇಶದಿಂದ ಮಂಡಳಿಗಳನ್ನು ವಿಲೀನಗೊಳಿಸುತ್ತಿದ್ದೇವೆ. ಎರಡು ಮಂಡಳಿಗಳನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಿದ್ದೇವೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಎನ್‌ಇಪಿ ಸೂಚಿಸಿರುವಂತೆ ಪೂರ್ವ ಪ್ರಾಥಮಿಕ ತರಗತಿಯಿಂದ 2ನೇ ತರಗತಿ ವರೆಗೂ ಒಂದು ಹಂತ, 3ರಿಂದ 5ನೇ ತರಗತಿ ವರೆಗೂ ಇನ್ನೊಂದು ಹಂತ, 6ರಿಂದ 8ನೇ ತರಗತಿ ವರೆಗೂ ಮತ್ತೂಂದು ಹಂತ ಹಾಗೂ 9ರಿಂದ 12ನೇ ತರಗತಿವರೆಗೂ ಪ್ರತ್ಯೇಕ ವಿಭಾಗ ಇರಲಿದೆ. ಆದರೆ, ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳು ಎಂದಿನಂತೆ ಇರುತ್ತವೆ ಎಂದರು.
ಅನುಮೋದನೆ:
ಸಚಿವ ಆರ್. ಅಶೋಕ್ ಮಂಡಿಸಿದ್ದ 2022ನೇ ಸಾಲಿನ ಕರ್ನಾಟಕ ಭೂ ಕಬಳಿಕೆ ನಿಷೇಧ(ತಿದ್ದುಪಡಿ) ಮಸೂದೆ ಹಾಗೂ 2022ನೇ ಸಾಲಿನ ಕರ್ನಾಟಕ ಸ್ಟಾಂಪ್ (ಮೂರನೇ ತಿದ್ದುಪಡಿ) ಮಸೂದೆಗೂ ಅನುಮೋದನೆ ದೊರೆಯಿತು. (ಸ್ಟಾಂಪ್ ತಿದ್ದುಪಡಿ ಮಸೂದೆಯು ಸರಕಾರದಿಂದ ಅನುದಾನ ಪಡೆದು ಟ್ರಸ್ಟ್‌ಗಳನ್ನು ನಡೆಸುತ್ತಿರುವವರು ಆದಾಯ ತೆರಿಗೆ ವ್ಯಾಪ್ತಿಯ ಒಳಗೆ ತರುವುದಾಗಿದೆ)
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.