ವಿದ್ಯಾರ್ಥಿಗಳೇ ಎಚ್ಚರದಿಂದ ಇರಿ; ಕೆನಡಾದಲ್ಲಿರುವ ಭಾರತೀಯರಿಗೆ ಕೇಂದ್ರದ ಸೂಚನೆ
Team Udayavani, Sep 24, 2022, 6:45 AM IST
ನವದೆಹಲಿ: ಕೆನಡಾದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತೀಯರ ವಿರುದ್ಧ ಜನಾಂಗೀಯ ದ್ವೇಷದ ಘಟನೆಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಆ ದೇಶದಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದ ಪ್ರಜೆಗಳು ಮತ್ತು ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಶುಕ್ರವಾರ ಎಚ್ಚರಿಕೆ ನೀಡಿದೆ.
ಕೆಲ ದಿನಗಳ ಹಿಂದೆ ಖಲಿಸ್ತಾನ ಪರವಿರುವ ಕೆಲವು ಪ್ರತ್ಯೇಕತಾವಾದಿಗಳು ಕೆನಡಾದಲ್ಲಿ ಜನಮತಗಣನೆ ನಡೆಸಿದ್ದಾರೆ. ಅದನ್ನು ಹಾಸ್ಯಾಸ್ಪದ ಎಂದು ಕೇಂದ್ರ ಖಂಡಿಸಿದೆ. ಅಲ್ಲಿ ನಡೆಯುತ್ತಿರುವ ಹಲ್ಲೆಗಳ ವಿರುದ್ಧ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿರುವ ಕೇಂದ್ರ, ಇಂತಹ ದಾಳಿಕೋರರ ವಿರುದ್ಧ ಕೆನಡಾದಲ್ಲಿ ಇದುವರೆಗೆ ಕ್ರಮ ತೆಗೆದುಕೊಂಡಿಲ್ಲ. ಪರಸ್ಪರ ಸ್ನೇಹಿತರಾಷ್ಟ್ರಗಳಲ್ಲಿ ಇಂತಹ ಘಟನೆಗಳಿಗೆ ಅವಕಾಶ ಕೊಡುವುದು ತರವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಜನಾಂಗೀಯ ದ್ವೇಷದ ಘಟನೆಗಳು ನಡೆದಲ್ಲಿ ಒಟ್ಟಾವ, ಟೊರಾಂಟೋ, ವಾಂಕೂವರ್‌ನಲ್ಲಿರುವ ಭಾರತದ ಹೈಕಮಿಷನ್ ಅಥವಾ ದೂತಾವಾಸ ಕಚೇರಿಗಳಿಗೆ ದೂರು ನೀಡಬೇಕು ಎಂದು ಸಲಹೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.