ರಾಜ್ಯದಲ್ಲಿ 1.86 ಲಕ್ಷ ಟನ್‌ ರಸಗೊಬ್ಬರ ದಾಸ್ತಾನು; ಸಚಿವ ಶಿವರಾಮ್ ಹೆಬ್ಬಾರ್

Team Udayavani, Sep 23, 2022, 8:45 AM IST

ರಾಜ್ಯದಲ್ಲಿ 1.86 ಲಕ್ಷ ಟನ್‌ ರಸಗೊಬ್ಬರ ದಾಸ್ತಾನು; ಸಚಿವ ಶಿವರಾಮ್ ಹೆಬ್ಬಾರ್

ವಿಧಾನ ಪರಿಷತ್ತು: ರಾಜ್ಯದಲ್ಲಿ ಪ್ರಸ್ತುತ 1.86 ಲಕ್ಷ ಟನ್‌ ರಸಗೊಬ್ಬರ ದಾಸ್ತಾನಿದ್ದು, ಯಾವುದೇ ರೀತಿಯ ಕೊರತೆ ಇಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು.

ಶುಕ್ರವಾರ ಪ್ರಶ್ನೋತ್ತರ ವೇಳೆ ಜೆಡಿಎಸ್‌ನ ಮರಿತಿಬ್ಬೇಗೌಡ ಪ್ರಶ್ನೆಗೆ ಕೃಷಿ ಸಚಿವರ ಪರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ 2022ರ ಏಪ್ರಿಲ್‌ 1ಕ್ಕೆ ಆರಂಭಿಕ ಶಿಲ್ಕು ರೂಪದಲ್ಲಿ 5.95 ಲಕ್ಷ ಟನ್‌ ಇದ್ದು, ಅಲ್ಲಿಂದ ಈಚೆಗೆ ಅಂದರೆ ಸೆ. 20ರವರೆಗೆ 30.40 ಲಕ್ಷ ಟನ್‌ ಪೂರೈಕೆ ಆಗಿದೆ.

ಪ್ರಸ್ತುತ 1.86 ಲಕ್ಷ ಟನ್‌ ರಸಗೊಬ್ಬರ ದಾಸ್ತಾನಿದೆ. 112 ಕಳಪೆ ಗುಣಮಟ್ಟದ ರಸಗೊಬ್ಬರದ ಮಾದರಿಗಳನ್ನು ಪರಿವೀಕ್ಷಿಸಿ ಮರು ವಿಶ್ಲೇಷಣೆಗೊಳಪಡಿಸಲಾಗಿದೆ. ಕಳಪೆ ಎಂದು ಕಂಡುಬಂದರೆ, ತಪ್ಪಿತಸ್ಥರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಮಾಹಿತಿ ನೀಡಿದರು.

ಹಾಗಿದ್ದರೆ, ಮಂಡ್ಯ, ಹಾಸನ, ಚಿಕ್ಕಮಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಗೊಬ್ಬರಕ್ಕಾಗಿ ರೈತರು ಯಾಕೆ ಸರದಿಯಲ್ಲಿ ಗಂಟೆಗಟ್ಟಲೆ ನಿಲ್ಲುತ್ತಿದ್ದಾರೆ ಎಂದು ಖಾರವಾಗಿ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಸಗೊಬ್ಬರ ಬೇಡಿಕೆ ಇರುವ ಕಡೆಗಳಲ್ಲಿ ದಾಸ್ತಾನಿಲ್ಲ; ಅದೇ ರೀತಿ ಸಾಕಷ್ಟು ದಾಸ್ತಾನು ಇರುವ ಕಡೆಗಳಲ್ಲಿ ಬೇಡಿಕೆ ಇಲ್ಲ. ಸಮನ್ವಯ ಮತ್ತು ಸಂವಹನ ಕೊರತೆಯಿಂದ ಈ ಸಮಸ್ಯೆ ಆಗಿದೆ. ಶೀಘ್ರ ಅದನ್ನು ಸರಿಪಡಿಸಲಾಗುವುದು ಎಂದು ಸಮಜಾಯಿಷಿ ನೀಡಿದರು.

ಗ್ಲೈಫೋಸೇಟ್‌ ನಿಷೇಧಕ್ಕೆ ಆಗ್ರಹ: ಇದೇ ವೇಳೆ ಬಿಜೆಪಿಯ ಚಲವಾದಿ ನಾರಾಯಣಸ್ವಾಮಿ ಮತ್ತು ಕಾಂಗ್ರೆಸ್‌ನ ಎಸ್‌. ರವಿ ಗ್ಲೈಫೋಸೇಟ್‌ (Glyphosate)ನ ಅತಿಯಾದ ಬಳಕೆಯಿಂದ ಮಣ್ಣಿನ ಫ‌ಲವತ್ತತೆ ನಾಶವಾಗುತ್ತಿದೆ.

ಕೇರಳದಿಂದ ಬಂದು ಸುಮಾರು 80 ಸಾವಿರದಿಂದ 1 ಲಕ್ಷ ಎಕರೆ ಭೂಮಿಯಲ್ಲಿ ಶುಂಠಿ ಬೆಳೆಯಲಾಗುತ್ತಿದೆ. ಅಲ್ಲಿ ಈ ಗ್ಲೈಫೋಸೇಟ್‌ ಅನ್ನು ಹೇರಳವಾಗಿ ಬಳಕೆ ಮಾಡಲಾಗುತ್ತಿದೆ. ಇದರಿಂದ ದುಷ್ಪರಿಣಾಮ ಬೀರುವ ಸಾಧ್ಯತೆಯೂ ಇದೆ. ಆದ್ದರಿಂದ ಇದನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕು ಎಂದು ಗಮನಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಮ ಹೆಬ್ಟಾರ್‌, ನನ್ನ ಕ್ಷೇತ್ರದಲ್ಲೂ ಈ ಸಮಸ್ಯೆ ಕಂಡುಬಂದಿದೆ. ಶುಂಠಿಗೆ ಈ ಗೊಬ್ಬರ ಸಿಂಪರಣೆ ಮಾಡಲಾಗುತ್ತಿದೆ. ಆದರೆ, ನಿಷೇಧ ತೀರ್ಮಾನ ಕೇಂದ್ರ ಸರ್ಕಾರದ ಹಂತದಲ್ಲಿ ಆಗಬೇಕು ಎಂದು ಸಮಜಾಯಿಷಿ ನೀಡಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರವಿ, ನೆರೆಯ ಕೇರಳ, ಪಂಜಾಬ್‌, ಹರಿಯಾಣದಲ್ಲಿ ಇದೇ ಗೊಬ್ಬರವನ್ನು ನಿಷೇಧಿಸಲಾಗಿದೆ. ಅಲ್ಲಿ ಸಾಧ್ಯವಾಗಿದ್ದು, ಇಲ್ಲಿ ಯಾಕೆ ಆಗುವುದಿಲ್ಲ ಎಂದು ಕೇಳಿದರು. ಆಗ ಸಚಿವರು, ನಿಷೇಧಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವರ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.