ಗಾಂಧಿ ಗ್ರಾಮ ಪುರಸ್ಕಾರಕ್ಕೆ ಕೊನೆಗೂ ಗ್ರಾಪಂಗಳ ಪಟ್ಟಿ ಪ್ರಕಟ
Team Udayavani, Sep 23, 2022, 8:47 PM IST
ಬೆಂಗಳೂರು: ಕೊನೆಗೂ 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾಮ ಪಂಚಾಯಿತಿಗಳ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.
ಪ್ರತಿ ತಾಲೂಕಿಗೆ ಒಂದರಂತೆ ಒಟ್ಟು 176 ಗ್ರಾ,ಪಂ.ಗಳನ್ನು ಆಯ್ಕೆ ಮಾಡಿ ಪ್ರತಿ ಗ್ರಾಪಂಗೆ ತಲಾ 5 ಲಕ್ಷ ರೂ. ವಿಶೇಷ ಅನುದಾನದಂತೆ ಒಟ್ಟು 8.80 ಕೋಟಿ ರೂ.ಗಳನ್ನೂ ಬಿಡುಗಡೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಆದೇಶ ಹೊರಡಿಸಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಶಿಫಾರಸು ಮಾಡಲಾದ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಪಂಗಳನ್ನು ರಾಜ್ಯ ಮಟ್ಟದ ಪರಾಮರ್ಶೆ ಸಮಿತಿಯ ಸಭೆಯಲ್ಲಿ ಮಂಡಿಸಿ 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾ.ಪಂ.ಗಳನ್ನು ಆಯ್ಕೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
2019-20 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪ್ರತಿ ತಾಲೂಕಿಗೆ ಒಂದರಂತೆ ಒಟ್ಟು 176 ಗ್ರಾಪಂಗಳನ್ನು ಆಯ್ಕೆ ಮಾಡಲಾಗಿದ್ದು, ಕೋವಿಡ್-19 ಕಾರಣಕ್ಕೆ ಪುರಸ್ಕಾರ ನೀಡಲಾಗಿಲ್ಲ. 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಹೊಸ ತಾಲೂಕುಗಳಂತೆ ಪ್ರತಿ ತಾಲೂಕಿಗೊಂದರಂತೆ ಒಟ್ಟು 229 ಗ್ರಾಪಂಗಳನ್ನು ಆಯ್ಕೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಪರಿಶೀಲನೆಯಲ್ಲಿತ್ತು. ಆದರೆ, ಆರ್ಥಿಕ ಇಲಾಖೆಯು ಹಳೆಯ 176 ತಾಲೂಕುಗಳಿಗೆ ಮಿತಿಗೊಳಿಸಿದ್ದರಿಂದ 176 ಗ್ರಾ.ಪಂ.ಗಳನ್ನು ಆಯ್ಕೆ ಮಾಡಲಾಗಿದೆ.
ಉದಯವಾಣಿ ವರದಿ ಮಾಡಿತ್ತು
2019-20 ಹಾಗೂ 2020-21ನೇ ಸಾಲಿನಲ್ಲಿ ಆಯ್ಕೆಯಾದ ಗ್ರಾಮ ಪಂಚಾಯಿತಿಗಳಿಗೆ ಈವರೆಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿಲ್ಲ. ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾ.ಪಂ.ಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಇಲ್ಲಿವರೆಗೆ ಆರಂಭಿಸಿಲ್ಲ ಎಂದು ಸೆ.11ರಂದು “ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ಈ ವಿಷಯವನ್ನು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಸೆ.12ರಂದು ಪ್ರಸ್ತಾಪಿಸಿದ್ದರು. 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಪಂಗಳನ್ನು ಆಯ್ಕೆ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆ.15ರಂದು ತಿಳಿಸಿದ್ದರು. ಇದೀಗ ಪಟ್ಟಿ ಪ್ರಕಟಿಸಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.