ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ: ಸಿಎಂ ಬೊಮ್ಮಾಯಿ
Team Udayavani, Sep 24, 2022, 7:35 AM IST
ಬೆಂಗಳೂರು: ಕಾಂಗ್ರೆಸ್ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಸ್ಕ್ಯಾಮ್‌ಗಳಿವೆ. ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ನವರ ಭ್ರಷ್ಟಾಚಾರದ ಬಗ್ಗೆ ಪಕ್ಷದ ವತಿಯಿಂದ ಪುಸ್ತಕ ಬಿಡುಗಡೆ ಮಾಡಿದ್ದೆವು. ಅವರು ಭ್ರಷ್ಟರಾಗಿದ್ದುಕೊಂಡು ಅಭಿಯಾನ ಮಾಡುತ್ತಾರಂತೆ. ಯಾವ ಅಭಿಯಾನವನ್ನಾದರೂ ಮಾಡಲಿ, ಕೊನೆಗೆ ಸತ್ಯಕ್ಕೆ ಜಯ ಸಿಗಲಿದೆ ಎಂದು ಹೇಳಿದರು.
ಒಂದು ಸಣ್ಣ ಪುರಾವೆ ಇಲ್ಲದೆ ಮಾತನಾಡುವ ಈ ಪ್ರವೃತ್ತಿ ಬಹಳ ದಿನ ನಡೆಯುವುದಿಲ್ಲ. ಗುತ್ತಿಗೆದಾರರ ಸಂಘದ ವಿಷಯದಲ್ಲಿ ಈಗಾಗಲೇ ಉತ್ತರ ನೀಡಲಾಗಿದೆ. ಒಂದು ವಿಚಾರವನ್ನು ಪದೇ ಪದೆ ಹೇಳಿದರೆ ಅದು ಸತ್ಯವಾಗುವುದು ಎಂದು ಕಾಂಗ್ರೆಸ್ ತಿಳಿದುಕೊಂಡಂತಿದೆ. ಆ ಕಾಲ ಹೋಗಿದೆ. ಜನಕ್ಕೆ ಸತ್ಯ ಏನೆಂದು ತಿಳಿದಿದೆ.
ಈಗಲೂ ಗುತ್ತಿಗೆದಾರರ ಸಂಘದವರು ದೂರು ಕೊಟ್ಟರೆ ಅದರ ಬಗ್ಗೆ ತನಿಖೆಗೆ ಆದೇಶಿಸಲಾಗುವುದು. ಲೋಕಾಯುಕ್ತಕ್ಕೆ ಪ್ರಕರಣ ವಹಿಸಲಾಗುವುದು ಎಂದು ಹೇಳಿದರು.
ಚರ್ಚೆ ಮಾಡುವ ಮೂಲಕ ಅದೇನು ಸರಕಿದೆ ಹೊರಗೆ ಬರಬೇಕು. ಸುಮ್ಮನೆ ಹಿಟ್ ಅಂಡ್ ರನ್ ಮಾಡುವುದಲ್ಲ. 40 ಪರ್ಸೆಂಟ್ ಯಾರು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಬೇಕು. ನಾವು ಕೇಳುವುದಕ್ಕೆ ತಯಾರಿದ್ದೇವೆ. ಈ ವಿಷಯವನ್ನು ಅವರು ಮೊದಲೇ ತೆಗೆದುಕೊಳ್ಳಬಹುದಾಗಿತ್ತು. ಕೊನೆಗೆ ಯಾಕೆ ತೆಗೆದುಕೊಂಡರು ಎಂದು ಪ್ರಶ್ನಿಸಿದರು.
ಗುತ್ತಿಗೆದಾರರ ಸಂಘವು ಕಾಂಗ್ರೆಸ್ ಪ್ರಾಯೋಜಿತ ಸಂಘ. ಹೀಗಾಗಿ ಕಾಂಗ್ರೆಸ್‌ಗೆ ಇದರಲ್ಲಿ ಹುರುಳಿಲ್ಲ ಎಂದು ಗೊತ್ತಿದೆ. ಈ ವಿಚಾರದಲ್ಲಿ ನಾವು ಮುಕ್ತವಾಗಿದ್ದೇವೆ. ದೂರು ಬಂದರೆ ಖಂಡಿತ ತನಿಖೆ ಮಾಡಿಸುತ್ತೇವೆ. ದಯವಿಟ್ಟು ದೂರು ಕೊಡಿ. ಕೆಂಪಣ್ಣನವರು ಗುತ್ತಿಗೆದಾರರ ಸಂಘದ ಅಧ್ಯಕ್ಷರು. ಆ ಸಂಘದ ಬಗ್ಗೆಯೇ ಬಹಳಷ್ಟು ಸಂಶಯಗಳಿವೆ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದ್ದು ಅವರೂ ಆದಷ್ಟು ಬೇಗ ಮಾಡೋಣ ಎಂದು ಭರವಸೆ ನೀಡಿದ್ದಾರೆ. ಸದನ ಮುಕ್ತಾಯವಾಗಲು ಕಾಯುತ್ತಿದ್ದೆವು. ನನ್ನನ್ನು ಕರೆಸಿ ಮಾತನಾಡಿದರೆ ಆದಷ್ಟು ಬೇಗನೇ ಪ್ರಕ್ರಿಯೆ ಪ್ರಾರಂಭ ಮಾಡಲಾಗುವುದು. ಈ ಬಗ್ಗೆ ವರಿಷ್ಠರ ಅನುಮತಿ ಪಡೆದು ವಿಸ್ತರಣೆ ಮಾಡಲಾಗುವುದು.
-ಬಸವರಾಜ ಬೊಮ್ಮಾಯಿ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.