ಲೈಂಗಿಕ ದೌರ್ಜನ್ಯ: ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
Team Udayavani, Sep 24, 2022, 12:20 AM IST
ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೊ) ಎಫ್ಟಿಎಸ್ಸಿ-1 ನ್ಯಾಯಾಲಯ 3 ವರ್ಷಗಳ ಸಜೆ ವಿಧಿಸಿ ತೀರ್ಪು ನೀಡಿದೆ.
ಕೊಕ್ಕಡದ ಪದ್ಮನಾಭ ಶಿಕ್ಷೆಗೊಳಗಾದವ. 2019ರ ಆ. 17ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ತನ್ನ ಗೆಳತಿಯೊಂದಿಗೆ ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದಳು. ಗೆಳತಿ ಆಕೆಯ ಮನೆಯ ಕಡೆಗೆ ತೆರಳಿದ್ದಳು. ಈ ಸಂದರ್ಭ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಡ್ಡಗಟ್ಟಿ ತಡೆದು ನಿಲ್ಲಿಸಿದ ಆರೋಪಿ ಲೈಂಗಿಕ ಉದ್ದೇಶದಿಂದ ಆಕೆಯ ಮಾನಕ್ಕೆ ಕುಂದುಂಟಾಗುವಂತೆ ಆಕೆಯ ಕೈ ಹಿಡಿದು ಎಳೆದಿದ್ದ. ಆಕೆ ಬಿಡಿಸಿಕೊಂಡು ಗೆಳತಿಯ ಮನೆಯ ಕಡೆಗೆ ಹೋಗಿ ಗೆಳತಿಯನ್ನು ಕೂಗಿ ಕರೆದಿದ್ದಳು. ಆಕೆಯ ಗೆಳತಿ ಆಕೆಯ ತಂದೆಗೆ ವಿಷಯ ತಿಳಿಸಿದ್ದಳು.
ಆರೋಪಿ ಆಕೆಯ ಮನೆಗೂ ಬಂದು ಆಕೆಯ ತಂದೆಗೆ ಅವಾಚ್ಯವಾಗಿ ಬೈದಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿ ಧರ್ಮಸ್ಥಳ ಪೊಲೀಸ್ ಠಾಣೆಯ ಉಪನಿರೀಕ್ಷಕ ಚಂದ್ರಶೇಖರ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕೊÕà) ಎಫ್ಟಿಎಸ್ಸಿ-1 ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಆರೋಪಿ ತಪ್ಪಿತಸ್ಥನೆಂದು ರುಜುವಾತಾಗಿದೆ ಎಂದು ತೀರ್ಪು ನೀಡಿದ್ದಾರೆ. ಅಪರಾಧಿಗೆ ಪೋಕೊÕà ಕಾಯ್ದೆಯ ಕಲಂ 12ರಡಿ 3 ವರ್ಷ ಸಾದಾ ಸಜೆ ಮತ್ತು 500 ರೂ. ದಂಡ, ಐಪಿಸಿ ಸೆಕ್ಷನ್ 354(ಡಿ)ಪ್ರಕಾರ ಮೂರು ವರ್ಷ ಸಾದಾ ಸಜೆ ಮತ್ತು 500 ರೂ. ದಂಡ ಹಾಗೂ ಐಪಿಸಿ 341ರಂತೆ 1 ವರ್ಷ ಸಜೆ ವಿಧಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿದ್ದಾರೆ. ಪ್ರಾಸಿಕ್ಯೂಷನ್ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಅವರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.