ಮುಂಗಾರು ಹಂಗಾಮಿನಲ್ಲಿ ಶೇ. 19 ಪ್ರತಿಶತದಷ್ಟು ಬೆಳೆ ಹಾನಿ

Team Udayavani, Sep 24, 2022, 2:15 PM IST

4crop

ಅಫಜಲಪುರ: 2022ರ ಸಾಲಿನಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಈ ಬಾರಿಯೂ ಮುಂಗಾರು ಹಂಗಾಮಿನಲ್ಲಿ ಶೇ. 19 ಪ್ರತಿಶತದಷ್ಟು ಬೆಳೆ ಹಾನಿಯಾಗಿದೆ.

ತಾಲೂಕಿನ ಗೊಬ್ಬೂರ(ಬಿ), ಅತನೂರ, ಅಫಜಲಪುರ, ಕರ್ಜಗಿ ವಲಯಗಳಲ್ಲಿ ಮಳೆ ಹೆಚ್ಚಾಗಿದ್ದರಿಂದ ಬೆಳೆಗಳೆಲ್ಲ ಹಾಳಾಗಿವೆ. ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತರಿಗೆ ಈಗ ಆಘಾತ ಉಂಟಾಗಿದೆ.

ರೈತರ ಕಣ್ಣೀರು ಒರೆಸುವವರು ಯಾರು?: ಪ್ರತಿ ವರ್ಷ ವ್ಯಾಪಕ ಮಳೆ, ಬರಗಾಲ ದಿಂದಾಗಿ ಬೆಳೆಗಳು ಹಾಳಾಗುತ್ತಿವೆ. ಆದರೆ ರೈತರಿಗೆ ಪುಡಿಗಾಸಿನಷ್ಟು ಪರಿಹಾರ ಸಿಗುತ್ತಿಲ್ಲ ರೈತರು ಕಣ್ಣೀರು ಹಾಕುತ್ತಿದ್ದಾರೆ.

ಶೇ.50 ಹತ್ತಿ, ಶೇ. 24.2 ತೊಗರಿ ಹಾಳು: ತಾಲೂಕಿನಾದ್ಯಂತ 1.30.479 ಹೆಕ್ಟೇರ್‌ ಭೌಗೋಳಿಕ ಕ್ಷೇತ್ರವಿದೆ. 1.10.590 ಹೆಕ್ಟೇರ್‌ ಬಿತ್ತನೆಯಾಗಿದೆ. ಇದರಲ್ಲಿ 20.227 ಹೆಕ್ಟೇರ್‌ ಮುಂಗಾರು ಹಂಗಾಮಿನ ಬೆಳೆಗಳು ಹಾಳಾಗಿವೆ. ಅದರಲ್ಲೂ ಶೇ.50 ಹತ್ತಿ, ಶೇ. 24.2 ಪ್ರತಿಶತದಷ್ಟು ತೊಗರಿ ಬೆಳೆ ಹಾಳಾಗಿವೆ. 110 ಹೆಕ್ಟೇರ್‌ ಹೆಸರು, 112 ಹೆಕ್ಟೇರ್‌ ಉದ್ದು, 3504 ಹೆಕ್ಟೇರ್‌ ಹತ್ತಿ, 16,066 ಹೆಕ್ಟೇರ್‌ ತೊಗರಿ, 265 ಹೆಕ್ಟೇರ್‌ ಮೆಕ್ಕೆಜೋಳ, 24 ಹೆಕ್ಟೇರ್‌ ಸೋಯಾಬಿನ್‌ ಬೆಳೆಗಳೆಲ್ಲ ಸೇರಿ ಒಟ್ಟು ಶೇ. 19 ಪ್ರತಿಶತದಷ್ಟು, ಸೂರ್ಯಕಾಂತಿ196ಹೆಕ್ಟೇರ್‌ ಬೆಳೆ ಹಾಳಾಗಿದೆ.

ವಾಡಿಕೆಗಿಂತ ಹೆಚ್ಚಿನ ಮಳೆ: ತಾಲೂಕಿನಾ ದ್ಯಂತ ವಾಡಿಕೆ ಮಳೆ ಜನವರಿಯಿಂದ ಸೆಪ್ಟೆಂಬರ್‌ 21ರ ವರೆಗೆ 507.7 ಮಿ.ಮೀ ಆಗಬೇಕಿಗಿತ್ತು. ಆದರೆ 649.8 ಮಿ.ಮೀ ಮಳೆ ದಾಖಲಾಗುವ ಮೂಲಕ ಶೇ. 28% ಪ್ರತಿಶತದಷ್ಟು ಹೆಚ್ಚಾಗಿದೆ. ಜೂನ್‌ 1ರಿಂದ 30ರ ವರೆಗೆ 97 ಮಿ.ಮೀ ಮಳೆಯಾಗಬೇಕಾಗಿತ್ತು. ಆದರೆ 65 ಮಿ.ಮೀ ಮಾತ್ರ ಮಳೆಯಾಗಿ ಶೇ. 33 ರಷ್ಟು ಕೊರತೆಯಾಗಿತ್ತು. ಹೀಗಾಗಿ ಬಿತ್ತನೆಗೆ ಸ್ವಲ್ಪ ಹಿನ್ನಡೆಯಾಗಿತ್ತು. ಆದರೆ ನಂತರದ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ದಾಖಲಾಗಿ ಬಿತ್ತಿದ ಬೆಳೆಗಳೆಲ್ಲ ನೀರಿಗೆ ಆಹುತಿಯಾಗುವಂತೆ ಆಗಿದೆ. ಒಟ್ಟಾರೆ ಹವಾಮಾನ ವರದಿ ನೋಡಿದಾಗ ಜೂನ್‌ ತಿಂಗಳಲ್ಲಿ ಶೇ.33ಪ್ರತಿಶತ ಮಳೆ ಕೊರತೆಯಾದರೂ ಇಲ್ಲಿಯವರೆಗೆ ಒಟ್ಟು ಶೇ.108 ಪ್ರತಿಶತದಷ್ಟು ಮಳೆ ಹೆಚ್ಚಾಗಿದೆ.

ಈಗಾಗಲೇ ಕೃಷಿ, ಕಂದಾಯ ಹಾಗೂ ತೋಟಗಾರಿಕೆ ಇಲಾಖೆಗಳು ಜಂಟಿ ಬೆಳೆ ಹಾನಿ ಸರ್ವೇ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿವೆ. ಸರ್ಕಾರದಿಂದ ಬರುವ ಪರಿಹಾರ ನೇರವಾಗಿ ರೈತರ ಖಾತೆಗೆ ಪಾವತಿ ಆಗಲಿದೆ. ಎಸ್‌.ಎಚ್ಗಡಗಿಮನಿ, ಸಹಾಯಕ ಕೃಷಿ ನಿರ್ದೇಶಕ, ಅಫಜಲಪುರ

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.