ಎದೆನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಎಕ್ಸ್-ರೇ ವರದಿಯಲ್ಲಿ ಕಾದಿತ್ತು ಶಾಕ್…
ಲಿಕಿನ್ಸ್ ಎಂಬವರು ರಾತ್ರಿ ಮಲಗಿದ್ದ ವೇಳೆ ಉಸಿರಾಟದ ತೊಂದರೆ, ಎದೆನೋವು ಕಾಣಿಸಿಕೊಂಡಿದೆ.
Team Udayavani, Sep 24, 2022, 3:26 PM IST
ಅಮೆರಿಕ: ಉಸಿರಾಟದ ತೊಂದರೆ, ಎದೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ತೆರಳಿದ ವೇಳೆ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಹಿಮಾಚಲ ಪ್ರದೇಶವನ್ನು ಬಿಜೆಪಿ ಅಭಿವೃದ್ಧಿ ಮಾಡುತ್ತದೆ ಎಂದು ಯುವಕರಿಗೆ ತಿಳಿದಿದೆ: ಪ್ರಧಾನಿ
ಅಚ್ಚರಿಯ ಸಂಗತಿಯೆಂದರೆ ಅಮೆರಿಕದ ವ್ಯಕ್ತಿಯೊಬ್ಬನ ಮೂಗುತಿ ಸುಮಾರು ಐದು ವರ್ಷಗಳ ಹಿಂದೆ ಕಳೆದು ಹೋಗಿದ್ದು, ಇದೀಗ ಆತನ ಶ್ವಾಸಕೋಶದಲ್ಲಿ ಪತ್ತೆಯಾಗಿದೆ.
ಅಮೆರಿಕ ಮೂಲದ ಜಾಯ್ ಲಿಕಿನ್ಸ್ ಎಂಬವರಿಗೆ ರಾತ್ರಿ ವೇಳೆ ಉಸಿರಾಟದ ತೊಂದರೆ, ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಪರೀಕ್ಷಿಸಿ ನ್ಯೂಮೋನಿಯಾ ಲಕ್ಷಣಗಳಿರಬಹುದು ಎಂದು ತಿಳಿಸಿದರು. ಆದರೆ ಎಕ್ಸ್-ರೇ ತೆಗೆದು ನೋಡಿದಾಗ ಶ್ವಾಸಕೋಶದಲ್ಲಿ 0.6 ಇಂಚಿನ ಮೂಗುತಿ ಇರುವುದು ಕಂಡುಬಂದಿದೆ.
ಮಲಗಿದ್ದ ವೇಳೆ ಮೂಗುತಿ ಕಳೆದು ಹೋಗಿದೆ ಎಂದು ಭಾವಿಸಿದ್ದೆ. ಆದರೆ ಅದು ಇಷ್ಟು ವರ್ಷಗಳಿಂದ ನನ್ನ ಶ್ವಾಸಕೋಶದೊಳಗೆ ಇದೆ ಎಂದು ತಿಳಿದಿರಲಿಲ್ಲ. ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಯಲ್ಲಿ ಎಕ್ಸ್-ರೇ ತೆಗೆಯುವ ವೇಳೆ ಪತ್ತೆಯಾಗಿದೆ ಎಂದು ಜಾಯ್ ತಿಳಿಸಿದ್ದಾರೆ.
ಮೂಗುತಿಯು 5 ವರ್ಷಗಳಿಂದ ಶ್ವಾಸಕೋಶದಲ್ಲಿ ಉಳಿದಿದ್ದರೂ, ಯಾವುದೇ ಹಾನಿ ಉಂಟುಮಾಡಿಲ್ಲ. ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿ ಹೊರ ತೆಗೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.