ಯುವಕರ ಹಾದಿ ತಪ್ಪಿಸುತ್ತಿದೆ ಯುವ ಘರ್ಜನೆ
Team Udayavani, Sep 24, 2022, 4:36 PM IST
ಚಿತ್ತಾಪುರ: ತಾಲೂಕಿನ ವಾಡಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಇತ್ತಿಚೇಗೆ ಹಮ್ಮಿಕೊಳ್ಳಲಾಗಿದ್ದ ಯುವ ಘರ್ಜನೆ ಕಾರ್ಯಕ್ರಮ ಕ್ಷೇತ್ರದ ಯುವ ಜನತೆಯ ಹಾದಿ ತಪ್ಪಿಸಿದೆ ಎಂದು ಜಿಪಂ ಮಾಜಿ ಸದಸ್ಯ ಬಿಜೆಪಿ ಮುಖಂಡ ಅರವಿಂದ ಚವ್ಹಾಣ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಕರಿಗೆ ಉದ್ಯೋಗ ನೀಡುವ ಆಸೆ ತೋರಿಸಿ ಅವರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಕ್ಷೇತ್ರದಾದ್ಯಂತ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದ್ದು ತಮ್ಮ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ಯುವ ಘರ್ಜನೆ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಆಪಾದಿಸಿದರು.
ಚಿತ್ತಾಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಸಿಸಿ, ಓರಿಯಂಟ್ ಮತ್ತು ಶ್ರೀ ಸಿಮೆಂಟ್ ಕಂಪೆನಿಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗ ಕೊಡಿಸಲಾಗದ ಪ್ರಿಯಾಂಕ್ ಖರ್ಗೆ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಮಾತನಾಡುವುದು ಸರಿಯೇ ಎಂದು ಪ್ರಶ್ನಿಸಿದರು.
ಓರಿಯಂಟ್ ಸಿಮೆಂಟ್ ಕಂಪೆನಿಗೆ ತಮ್ಮ ಭೂಮಿ ನೀಡಿದ ಬಡ ರೈತ ಕುಟುಂಬಗಳ 13 ಜನ ಯುವಕರನ್ನು ಕಂಪೆನಿಯು ಕೆಲಸದಿಂದ ತೆಗೆದು ಹಾಕಿದ್ದನ್ನು ವಿರೋಧಿಸಿ ಇಟಗಾ ಗ್ರಾಮದ ಹತ್ತಿರ ಅವರ ತಂದೆ-ತಾಯಂದಿರು ಅಹೋರಾತ್ರಿ ಧರಣಿ ಕುಳಿತು ಒಂದು ತಿಂಗಳು ಕಳೆದಿದೆ. ಇಲ್ಲಿಯವರೆಗೂ ಕನಿಷ್ಟ ಸೌಜನ್ಯಕ್ಕಾದರೂ ಪ್ರಿಯಾಂಕ್ ಖರ್ಗೆ ಪ್ರತಿಭಟನಾ ಸ್ಥಳಕ್ಕೆ ತೆರಳಿ ಅವರ ಸಮಸ್ಯೆ ಆಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಯುವಕರ ನಿರುದ್ಯೋಗದ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಚಿರಾಡಿ ಮಾತನಾಡುವ ಪ್ರಿಯಾಂಕ್ ಖರ್ಗೆ ಚಿತ್ತಾಪುರದ ಸಿಮೆಂಟ್ ಕಂಪೆನಿಗಳಲ್ಲಿ ಇಲ್ಲಿಯ ವರೆಗೆ ಎಷ್ಟು ಯುವಕರಿಗೆ ಉದ್ಯೋಗ ಕೊಡಿಸಿದ್ದಿರಿ ಎನ್ನುವುದನ್ನು ಬಹಿರಂಗಪಡಿಸಿ ಎಂದು ಸವಾಲ್ ಹಾಕಿದರು.
ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಸಾಯಬಣ್ಣ ಡಿಗ್ಗಿ, ಪುರಸಭೆ ಮಾಜಿ ಸದಸ್ಯ ಸುರೇಶ ಬೆನಕನಳ್ಳಿ, ಮುಖಂಡರಾದ ಭೀಮಣ್ಣ ಸೀಬಾ, ದುರ್ಗಣ್ಣಾ ಯಾಗಾಪೂರ, ಮೇಘರಾಜ ಗುತ್ತೇದಾರ, ರಾಜು ದೊರೆ ಇತರರು ಇದ್ದರು.
ಕೋಲಿ ಸಮಾಜ ಎಸ್ ಟಿಗೆ ಸೇರ್ಪಡೆ ಮಾಡುವ ಕುರಿತು ಬಾಬುರಾವ ಚಿಂಚನಸೂರ ವಿರುದ್ಧ ಮಾತನಾಡುವ ಶಾಸಕ ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ತಂದೆ ಡಾ|ಮಲ್ಲಿಕಾರ್ಜುನ ಖರ್ಗೆ ಏನು ಮಾಡಿದ್ದಾರೆ? ಕೋಲಿ ಸಮಾಜದ ಮತಗಳನ್ನು ಪಡೆದು ಅಧಿಕಾರ ಪಡೆದು ಸಮಾಜಕ್ಕೆ ಮೋಸ ಮಾಡಿದ್ದಿರಿ. ಬರುವ ದಿನಗಳಲ್ಲಿ ಕೋಲಿ ಸಮಾಜದವರ ಬಹುದಿನಗಳ ಎಸ್‌ಟಿ ಬೇಡಿಕೆ ಬಿಜೆಪಿ ಸರಕಾರ ಈಡೇರಿಸುವ ಭರವಸೆ ಇದೆ. -ಸುರೇಶ ಬೆನಕನಳ್ಳಿ, ಪುರಸಭೆ ಮಾಜಿ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.