![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 25, 2022, 1:02 PM IST
ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ಕೆಕೆಆರ್ ಡಿಬಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಕೆಕೆಆರ್‌ಡಿಬಿ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ, ಗುಣಮಟ್ಟ ಕಾಪಾಡಿಕೊಳ್ಳುವಂತೆ ಲೋಕೋಪಯೋಗಿ ಇಲಾಖೆ ಎಇಇಗೆ ಸೂಚನೆ ನೀಡಿದರು.
ಸುಲೇಪೇಟ ಗ್ರಾಮದ ಅಂಬರೀಶ ಹಲಚೇರಿ ಮನೆಯಿಂದ ಗುರುನಂಜೇಶ್ವರ ಶಾಲೆ, ಮಹೇಶ ತಾರಾಪುರ ಹಳೆ ಅಂಗಡಿಯಿಂದ ಮಿಠಾಯಿ ಹೋಟೆಲ್, ಗುರುನಂಜೇಶ್ವರ ಶಾಲೆಯಿಂದ ಮೌಲಾ ಹೋಟೆಲ್, ಮಹಾಂತೇಶ ಪೆಟ್ರೋಲ್ ವರೆಗೆ ಕೆಕೆಆರ್‌ಡಿಬಿ ವತಿಯಿಂದ ಕೈಗೊಂಡಿರುವ ಒಳಚರಂಡಿ ಮತ್ತು ಸಿಮೆಂಟ್ ಕಾಮಗಾರಿಗಳು ಕಳಪೆಮಟ್ಟದಿಂದ ನಡೆಯುತ್ತಿವೆ ಎಂದು ಸುಲೇಪೇಟ ಗ್ರಾಮಸ್ಥರು ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಎಲ್ಲ ಕಾಮಗಾರಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಕೆಕೆಆರ್‌ಡಿಬಿಯಿಂದ ನಡೆಯುವ ಎಲ್ಲ ಕೆಲಸಗಳು ಗುಣಮಟ್ಟದಿಂದ ನಡೆಯಬೇಕು. ಅನುದಾನ ದುರ್ಬಳಕೆಯಾದರೆ ಇಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಇಇ ಆನಂದ ಕಟ್ಟಿ ಮತ್ತು ಸಹಾಯಕ ಇಂಜಿನಿಯರ್‌ಗಳಿಗೆ ಎಚ್ಚರಿಕೆ ನೀಡಿದರು.
ತಹಶೀಲ್ದಾರ್ ಅಂಜುಮ ತಬಸುಮ, ಗ್ರೇಡ್ 2 ತಹಶೀಲ್ದಾರ್ ವೆಂಕಟೇಶ ದುಗ್ಗನ, ಎಇಇ ಆನಂದ ಕಟ್ಟಿ, ಪ್ರಮುಖರಾದ ದಯಾನಂದ ರೆಮ್ಮಣ್ಣಿ, ವಿಶ್ವನಾಥ ಸಜ್ಜನಶೆಟ್ಟಿ, ಸಿದ್ಧಪ್ಪ ಹುಮನಾಬಾದ, ಶರಣು ಪಡಶೆಟ್ಟಿ, ಮೌಲಾ ಹೋಟೆಲ್, ಮಹಮ್ಮದ ಅಲಿ, ನಾಗೇಶ ಹಾಲಳ್ಳಿ, ಸುರೇಶ ಬಂದಿ ಇನ್ನಿತರರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.