ಗೋವಾದಲ್ಲಿ ಅಕ್ರಮ ವ್ಯವಹಾರ: 22 ಬಾಂಗ್ಲಾದೇಶಿ ಪ್ರಜೆಗಳ ಬಂಧನ
ಗಡಿಪಾರು ಮಾಡಲಾಗುವುದು: ಸಿಎಂ ಪ್ರಮೋದ್ ಸಾವಂತ್
Team Udayavani, Sep 25, 2022, 2:23 PM IST
ಪಣಜಿ : ಗೋವಾದ ವಿವಿಧ ಭಾಗಗಳಲ್ಲಿ ಅಕ್ರಮ ವ್ಯವಹಾರ ನಡೆಸುತ್ತಿದ್ದ 22 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.
ಬಂಧಿತರ ಬಳಿ ಭಾರತೀಯ ವಿಳಾಸ, ಮತದಾರರ ಗುರುತಿನ ಚೀಟಿ ಇರಲಿಲ್ಲ. ಈ ರೀತಿ ಅಕ್ರಮವಾಗಿ ನೆಲೆಸಿರುವ ಹೆಚ್ಚಿನ ಜನರನ್ನು ಹುಡುಕಿ ಅವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗುವುದಾಗಿ ಗೃಹ ಸಚಿವಾಲಯದ ಸೂಚನೆ ನೀಡಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಇದನ್ನೂ ಓದಿ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ವೈದ್ಯ ಸೇರಿ ಇಬ್ಬರು ಮಕ್ಕಳು ಸಜೀವ ದಹನ
ಕಳೆದ ಎರಡು ತಿಂಗಳುಗಳಲ್ಲಿ ವಿದೇಶಿಗರ ಪರಿಶೀಲನೆಯ ಸಂದರ್ಭದಲ್ಲಿ, ಗೋವಾ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ರಾಜ್ಯದಲ್ಲಿ ಅಕ್ರಮವಾಗಿ ತಂಗಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿದೆ.
ಈ ಬಾಂಗ್ಲಾದೇಶಿ ಪ್ರಜೆಗಳು ನಕಲಿ ದಾಖಲೆಗಳನ್ನು ಬಳಸಿಕೊಂಡು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಎಟಿಎಸ್ ಪೊಲೀಸ್ ವರಿಷ್ಠಾಧಿಕಾರಿ ಶೋಭಿತ್ ಸಕ್ಸೇನಾ ಸುದ್ದಿಗಾರರಿಗೆ ತಿಳಿಸಿದ್ದಾರೆ. 4 ರಿಂದ 5 ವರ್ಷಗಳಿಂದ ಇಲ್ಲಿಯೇ ಇದ್ದು, ಕೆಲವರು ಕುಟುಂಬಗಳನ್ನೂ ಇಲ್ಲಿ ಹೊಂದಿದ್ದಾರೆ ಎಂದು ಸಕ್ಸೇನಾ ಹೇಳಿದರು.
ಗೋವಾ ಪೊಲೀಸರು ನಿರಂತರವಾಗಿ ಗಮನಹರಿಸುತ್ತಿದ್ದಾರೆ ಎಂದು ಅವರು ಹೇಳಿದರು. ವಿದೇಶಿಯರಿಗೆ, ವಿಶೇಷವಾಗಿ ಅಕ್ರಮವಾಗಿ ತಂಗುವವರಿಗೆ ಪರಿಶೀಲನೆ ಡ್ರೈವ್‌ಗಳನ್ನು ಸಹ ಮಾಡುತ್ತೇವೆ. ಯಾವುದೇ ದಾಖಲೆಗಳಿಲ್ಲದೆ ವಾಸಿಸುತ್ತಿರುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.