ಕಪ್ಪತಗುಡ್ಡದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ

ಸರ್ಕಾರಕ್ಕೆ ಮೇಲ್ಮನೆ ಸದಸ್ಯ ಎಸ್‌.ವಿ. ಸಂಕನೂರ ಒತ್ತಾಯ; ಜೈನ್‌ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Team Udayavani, Sep 25, 2022, 4:27 PM IST

16

ಗಜೇಂದ್ರಗಡ: ಜಿಲ್ಲೆಯ ಸಸ್ಯಕಾಶಿ ಕಪ್ಪತಗುಡ್ಡದಲ್ಲಿ ರಾಜ್ಯ ಸರ್ಕಾರ ಆಯುರ್ವೇದ ಸಂಶೋಧನಾ ಕೇಂದ್ರ ತೆರೆಯುವ ಮೂಲಕ ಆಯುರ್ವೇದಿಕ್‌ ವಿದ್ಯಾರ್ಥಿಗಳ ಹೆಚ್ಚಿನ ಸಂಶೋಧನೆಗೆ ಅವಕಾಶ ಕಲ್ಪಿಸಬೇಕೆಂದು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಒತ್ತಾಯಿಸಿದರು.

ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ನಡೆದ ಭಗವಾನ್‌ ಮಹಾವೀರ ಜೈನ ಆಯುರ್ವೇದಿಕ್‌ ಮೆಡಿಕಲ್‌ ಕಾಲೇಜು ಘಟಿಕೋತ್ಸವ ಹಾಗೂ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಆಯುರ್ವೇದ ಪದ್ಧತಿ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶ್ರಮಿಸುತ್ತಿವೆ. ಇದರ ಭಾಗವಾಗಿ ರಾಜ್ಯ ಸರ್ಕಾರ ಆಯುರ್ವೇದ ಮಹಾವಿದ್ಯಾಲಯ ಸ್ಥಾಪನೆಗೆ ಮುಂದಾಗಿದೆ. ಶಿವಮೊಗ್ಗದಲ್ಲಿ ಈ ವಿಶ್ವವಿದ್ಯಾಯ ಸ್ಥಾಪನೆಗೆ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ. ಆದರೆ, ರಾಜ್ಯದಲ್ಲಿಯೇ ಅತಿ ಹೆಚ್ಚು ಆಯುರ್ವೇದಿಕ ಸಸ್ಯ ಪ್ರಭೇದಗಳನ್ನು ಹೊಂದಿರುವ ಕಪ್ಪತಗುಡ್ಡ ಆಯುರ್ವೇದಿಕ್‌ ತಜ್ಞರ ಕೇಂದ್ರ ಸ್ಥಳದಂತಿದೆ ಎಂದರು.

ರಾಜ್ಯ ಸರ್ಕಾರ ಈ ಭಾಗದಲ್ಲಿ ಆಯುರ್ವೇದಿಕ ಪದ್ಧತಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಸ್ಯಕಾಶಿ ಕಪ್ಪತಗುಡ್ಡದಲ್ಲಿ ಆಯುರ್ವೇದಿಕ ಸಂಶೋಧನಾ ಕೇಂದ್ರ ಸ್ಥಾಪನೆಗೆ ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ. ಇದರಿಂದ ಆಯುರ್ವೇದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಶೋಧನೆ ನಡೆಸಲು ಅನುಕೂಲವಾಗಲಿದೆ ಎಂದರು.

ವೈದ್ಯಕೀಯ ಕ್ಷೇತ್ರದಲ್ಲಿ ಅಲೋಪತಿ ಹೆಚ್ಚು ಪ್ರಚಲಿತದಲ್ಲಿದೆ. ಆದರೆ, ಹಿಂದೆ ಗತವೈಭವ ಮೆರೆದ ಆಯುರ್ವೇದ ಪದ್ಧತಿಗೆ ಏಕೆ ಹಿನ್ನಡೆಯಾಗಿದೆ ಎಂಬುದರ ಬಗ್ಗೆ ಚಿಂತನೆ ನಡೆಸಬೇಕಿದೆ. ಋಷಿ ಮುನಿಗಳು ಹಿಂದೆ ಮಾಡಿದ ಅಧ್ಯಯನದ ಬಗ್ಗೆ ದಾಖಲೆಗಳಿಲ್ಲದಿರುವುದೇ ಈ ಹಿನ್ನಡೆಗೆ ಕಾರಣ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಯುರ್ವೇದ ಪದ್ಧತಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಿವೆ. ದೇಶದಲ್ಲಿನ ಆಯುರ್ವೇದ ಸಸ್ಯಗಳ ಬಗ್ಗೆ ಸಂಶೋಧನೆ ನಡೆಯಬೇಕಿದೆ. ಪ್ರಾಥಮಿಕ, ಪ್ರೌಢಶಾಲೆ ಪಠ್ಯಕ್ರಮದಲ್ಲಿ ಆಯುರ್ವೇದ ವಿಷಯ ಅಳವಡಿಸಿದಾಗ ಮಾತ್ರ ಆಯುರ್ವೇದ ಪದ್ಧತಿ ಉಳಿಯಲು ಸಾಧ್ಯ ಎಂದರು.

ಮೆಡಿಕಲ್‌ ಕಾಲೇಜು ಕಾರ್ಯದರ್ಶಿ ಅಜೀತ ಬಾಗಮಾರ ಮಾತನಾಡಿ, ವಿದ್ಯಾರ್ಥಿಗಳು ಅಹಂ ಬಿಟ್ಟು ವಿದ್ಯೆಗೆ, ಗುರುವಿಗೆ ತಲೆಬಾಗಬೇಕು. ಕಲಿಕೆಗೆ ಕೊನೆಯಿಲ್ಲ. ಗುರುವಿಗೆ ಭೇದವಿಲ್ಲ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕು. ಸಮಾಜದಲ್ಲಿ ನಿಮ್ಮ ಅಗತ್ಯತೆ ಇದ್ದ ಸಂದರ್ಭದಲ್ಲಿ ಅಂದು ನಿಮ್ಮ ಸೇವೆ ನೀಡಬೇಕು. ಅದನ್ನು ಬಿಟ್ಟು ವೈದ್ಯಕೀಯ ವೃತ್ತಿ ಫ್ಯಾಷನ್‌ಗೆ ಬಳಸಿಕೊಳ್ಳಬೇಡಿ. ಹಾಗೆ ಮಾಡುವುದರಿಂದ ವೃತ್ತಿಗೆ ಅಗೌರವ ತೋರಿದಂತಾಗುತ್ತದೆ. ಈ ನಿಟ್ಟಿನಲ್ಲಿ ಭವಿಷ್ಯದ ಸಮಾಜ ನಿರ್ಮಾತೃಗಳು ನೀವಾಗಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕಾಲೇಜು ಅಧ್ಯಕ್ಷ ಅಶೋಕ ಬಾಗಮಾರ, ಪ್ರಾಚಾರ್ಯ ಎ. ಎಸ್‌. ಪ್ರಶಾಂತ್‌, ಯು.ವಿ. ಪುರದ, ರಿಕಬಚಂದ್‌ ಬಾಗಮಾರ, ತಾರಾಬಾಯಿ ಬಾಗಮರ, ವರ್ಧಮಾನ ಬಾಗಮಾರ, ಡಾ|ಎನ್‌.ಎಚ್‌. ಕುಲಕರ್ಣಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.